ಮೈಸೂರಿನ ಮಾನಸಗಂಗೋತ್ರಿಯಲ್ಲಿ ಸಂಜೆ ಹೆಣ್ಣುಮಕ್ಕಳ ಪ್ರವೇಶಕ್ಕೆ ನಿಷೇಧ..!
ಕುಕ್ಕರಹಳ್ಳಿ ಕೆರೆ ಆವರಣಕ್ಕೆ ಯಾವುದೇ ವ್ಯಕ್ತಿ ಸಂಜೆ 6.30 ನಂತರ ಪ್ರವೇಶಿಸುವುದನ್ನು ಸುರಕ್ಷತಾ ದೃಷ್ಟಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಿಸಲಾಗಿದೆ.
ಮೈಸೂರು: ಪ್ರಖ್ಯಾತ ಮೈಸೂರು ವಿಶ್ವವಿದ್ಯಾನಿಲಯ(University Of Mysore)ದ ಮಾನಸಗಂಗೋತ್ರಿ ಆವರಣದಲ್ಲಿ ಸಂಜೆ 6.30 ನಂತರ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದನ್ನು ನಿಷೇಧಿಸಲಾಗಿದೆ. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಮೈಸೂರು ವಿವಿ ಕುಲಸಚಿವ ಪ್ರೊ.ಆರ್.ಶಿವಪ್ಪ, ‘ಕುಕ್ಕರಹಳ್ಳಿ ಕೆರೆ ಮತ್ತು ಮಾನಸಗಂಗೋತ್ರಿ ಆವರಣದಲ್ಲಿ ಮಹಿಳೆಯರ ಸುರಕ್ಷತೆಗಾಗಿ ಈ ಕ್ರಮ ಕೈಗೊಳ್ಳಲಾಗಿದೆ’ ಎಂದು ತಿಳಿಸಿದ್ದಾರೆ.
ಸಾಂಸ್ಕೃತಿಕ ನಗರಿಯಲ್ಲಿ ಇತ್ತೀಚೆಗೆ ವಿದ್ಯಾರ್ಥಿನಿಯೊಬ್ಬಳ ಮೇಲೆ ಗ್ಯಾಂಗ್ ರೇಪ್ ಪ್ರಕರಣ(Mysore Gangrape Case)ದ ಹಿನ್ನೆಲೆ ಮೈಸೂರಿನಲ್ಲಿ ವಿವಿ ಆಡಳಿತ ಮಂಡಳಿ ಈ ಕ್ರಮ ತೆಗೆದುಕೊಂಡಿದೆ. ಕುಕ್ಕರಹಳ್ಳಿ ಕೆರೆ(Kukkarahalli Lake) ಆವರಣಕ್ಕೆ ಯಾವುದೇ ವ್ಯಕ್ತಿ ಸಂಜೆ 6.30 ನಂತರ ಪ್ರವೇಶಿಸುವುದನ್ನು ಸುರಕ್ಷತಾ ದೃಷ್ಟಿ ಹಾಗೂ ಮುನ್ನೆಚ್ಚರಿಕೆ ಕ್ರಮವಾಗಿ ನಿಷೇಧಿಸಲಾಗಿದೆ.
ಇದನ್ನೂ ಓದಿ: Karnataka School Reopening : 'ರಾಜ್ಯದಲ್ಲಿ 1 ರಿಂದ 8 ನೇ ತರಗತಿಗಳ ಶಾಲೆ ಪುನರಾರಂಭ ಬಗ್ಗೆ ಆ.30 ರಂದು ತೀರ್ಮಾನ'
ಇದಲ್ಲದೆ ಮಾನಸಗಂಗೋತ್ರಿ(Gangotri campus) ಆವರಣದಲ್ಲಿಯೂ ಕೂಡ ಸಂಜೆ 6.30 ನಂತರ ಹೆಣ್ಣುಮಕ್ಕಳು ಒಂಟಿಯಾಗಿ ತಿರುಗಾಡುವುದು, ಕೂರುವುದನ್ನು ನಿಷೇಧಿಸಲಾಗಿದೆ. ವಿಶ್ವವಿದ್ಯಾನಿಲಯದ ಭದ್ರತಾ ಅಧಿಕಾರಿಗಳು ಪ್ರತಿದಿನ ಸಂಜೆ 6 ರಿಂದ 9ರವರೆಗೆ ಗಸ್ತು ತಿರುಗಲು ಭದ್ರತಾ ಸಿಬ್ಬಂದಿಗಳನ್ನು ನಿಯೋಜಿಸಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ. ಪೊಲೀಸ್ ಇಲಾಖೆಯ ನಿರ್ದೇಶನದ ಮೇರೆಗೆ ಈ ಸುತ್ತೋಲೆಯನ್ನು ಹೊರಡಿಸಲಾಗಿದೆ ಎಂದು ಕುಲಪತಿಗಳು ತಿಳಿಸಿದ್ದಾರೆ.
ವಿವಿ ಆದೇಶಕ್ಕೆ ವಿದ್ಯಾರ್ಥಿನಿಯರ ಆಕ್ಷೇಪ
ಮಾನಸಗಂಗೋತ್ರಿ(Gangotri campus)ಯಲ್ಲಿ ಸಂಜೆ ವೇಳೆ ಹೆಣ್ಣುಮಕ್ಕಳಿಗೆ ನಿಷೇಧ ಹೇರಿರುವ ಮೈಸೂರು ವಿವಿ ಆದೇಶಕ್ಕೆ ವಿದ್ಯಾರ್ಥಿನಿಯರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಮೈಸುರು ವಿವಿಯಲ್ಲಿ ರಾತ್ರಿ ಓಡಾಡಬೇಡಿ ಎಂದರೆ ನಮಗೆ ಇನ್ನೆಲ್ಲಿದೆ ಸೇಫ್ಟಿ ಎಂದು ವಿದ್ಯಾರ್ಥಿನಿಯರು ಪ್ರಶ್ನಿಸಿದ್ದಾರೆ. ಹುಡುಗಿಯರು ಮಾತ್ರ ರಾತ್ರಿ ಓಡಾಡಬೇಡಿ ಅಂತಾ ಹೇಳುವುದು ಏಕೆ..? ವಿವಿಯಲ್ಲೇ ನಮಗೆ ರಕ್ಷಣೆ ಇಲ್ಲವೆಂದರೆ ಹೇಗೆ ಅಂತಾ ವಿದ್ಯಾರ್ಥಿನಿಯರು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ: 1 ಕೋಟಿ ರೂ. ಮೌಲ್ಯದ ಕಾರಿನಲ್ಲಿ ಮಾಜಿ ಸಿಎಂ ಬಿಎಸ್‍ವೈ ರಾಜ್ಯ ಪ್ರವಾಸ..!
ಡಿಸ್ಚಾರ್ಜ್ ಆಗಿ ಮುಂಬೈಗೆ ತೆರಳಿರುವ ಸಂತ್ರಸ್ತೆ
ಇನ್ನು ಮೈಸೂರು ಗ್ಯಾಂಗ್ರೇಪ್ ಪ್ರಕರಣ(Mysore Gangrape Case)ದ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದು, ಮೈಸೂರಿಗೆ ಕರೆತಂದಿದ್ದಾರೆ. ಆಸ್ಪತ್ರೆಯಿಂಡ ಡಿಸ್ಚಾರ್ಜ್ ಆಗಿರುವ ಸಂತ್ರಸ್ತೆ ವಿದ್ಯಾರ್ತಿನಿ ಮುಂಬೈಗೆ ತೆರಳಿದ್ದಾರೆಂದು ತಿಳಿದುಬಂದಿದೆ. ಯಾರನ್ನೂ ಭೇಟಿಯಾಗುವುದಿಲ್ಲ, ಯಾವುದೇ ಹೇಳಿಕೆನ್ನೂ ನೀಡುವುದಿಲ್ಲವೆಂದಿರುವ ಸಂತ್ರಸ್ತೆ ತನ್ನ ಪೋಷಕರೊಂದಿಗೆ ಬೆಂಗಳೂರಿನಿಂದ ಮುಂಬೈಗೆ ತೆರಳಿದ್ದಾಳೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ