ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದ ಟಿಕೆಟ್‌ ಕೈತಪ್ಪುವ ಸಾಧ್ಯತೆ ಇದೆ ಎಂಬ ವದಂತಿಯ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಸಂಸದ ಪ್ರತಾಪ್‌ ಸಿಂಹ, ತಮಗೆ ಟಿಕೆಟ್‌ ಸಿಗುವ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಮೈಸೂರು-ರಾಮೇಶ್ವರಂ ರೈಲಿಗೆ ಮೈಸೂರಿನಲ್ಲಿ ಚಾಲನೆ ನೀಡಿ ಮಾತನಾಡಿದ ಅವರು, ʼನನ್ನ ಮೇಲೆ ಪ್ರೀತಿ ಇಟ್ಟು ಇಲ್ಲಿಯ ಜನರು ಗೆಲ್ಲಿಸಿದ್ದಕ್ಕೆ ಇಷ್ಟೆಲ್ಲಾ ಮಾಡಿದ್ದೇನೆ. ಕ್ಷೇತ್ರದಲ್ಲಿ ಹಲವು ಅಭಿವೃದ್ಧಿ ಕಾರ್ಯಗಳನ್ನು ಮಾಡಿ ತೋರಿಸಿದ್ದೇನೆ. ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ಸಿಗುವ ಬಗ್ಗೆ ಭರವಸೆ ಇದೆʼ ಎಂದು ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ಟಿಕೆಟ್‌ ಬಗ್ಗೆ ಅಂತಿಮವಾಗಿ ಪಕ್ಷದ ಹೈಕಮಾಂಡ್, ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹಾಗೂ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಪಕ್ಷವು ನನ್ನ ಕೈಬಿಡುವುದಿಲ್ಲವೆಂಬ ಅಚಲ ನಂಬಿಕೆ ಇದೆ. ನಾನು ಮೊದಲನೇ ಬಾರಿ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸಿದಾಗಲೂ ಪ್ರಧಾನಿ ನರೇಂದ್ರ ಮೋದಿಯವರ ಹೆಸರಿನಲ್ಲಿ ಮತಯಾಚನೆ ಮಾಡಿದ್ದೆ. 2ನೇ ಬಾರಿ ಸ್ಪರ್ಧಿಸುವಾಗಲೂ ಮೋದಿ ಹೆಸರಿನಲ್ಲಿಯೇ ಸ್ಪರ್ಧಿಸಿದ್ದೆ. 3ನೇ ಬಾರಿಯೂ ಮೋದಿ ಹೆಸರಿನಲ್ಲೇ ಚುನಾವಣೆ ಎದುರಿಸಿ ಜಯ ಗಳಿಸುತ್ತೇನೆ. ಪಕ್ಷದ ವಿಶ್ವಾಸ ನನ್ನ ಮೇಲಿದ್ದು, ನನಗೆ ಮತ್ತೆ ಅವಕಾಶ ಸಿಗಲಿದೆ ಎಂದು ಪ್ರತಾಪ್‌ ಸಿಂಹ ವಿಶ್ವಾಸ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ- ಉದ್ಯೋಗಾಕಾಂಕ್ಷಿಗಳಿಗೆ Good News: KPSCಯಿಂದ 264 ಭೂಮಾಪಕರ ನೇಮಕಾತಿಗೆ ಅಧಿಸೂಚನೆ


ನಾನು ಏನೆಂಬುದು ಪ್ರಧಾನಿ ಮೋದಿಯವರಿಗೆ ಗೊತ್ತಿದೆ. ಸೋಲುವ ಕಾಂಗ್ರೆಸ್ ಪಕ್ಷದಲ್ಲಿ ಟಿಕೆಟ್ ವಿಚಾರದಲ್ಲಿ ಹೊಡೆದಾಟ ನಡೆಯುತ್ತಿದೆ. ಬಿಜೆಪಿಯಲ್ಲಿ ಗೆಲುವಿನ ಪೈಪೋಟಿ ಇರಬಾರದು ಎಂದರೆ ಹೇಗೆ? ಗೆಲ್ಲುವ ಕುದುರೆ ಎಲ್ಲರೂ ಪ್ರಯತ್ನ ಮಾಡುತ್ತಿರುತ್ತಾರೆ. ಮೈಸೂರಿನಲ್ಲಿ ಬಿಜೆಪಿ ಗೆಲ್ಲುವಂತ ಪರಿಸ್ಥಿತಿಯನ್ನು ನಾನು ಸೃಷ್ಟಿಸಿದ್ದೇನೆ. ನನಗೆ ಚಾಮುಂಡಿತಾಯಿ, ಪ್ರಧಾನಿ ಮೋದಿ ಆಶೀರ್ವಾದವಿದೆ ಎಂದು ಹೇಳಿದ್ದಾರೆ.


ಈ ಬಾರಿ ಪ್ರತಾಪ್ ಸಿಂಹರಿಗೆ ಟಿಕೆಟ್ ದೊರೆಯುವುದಿಲ್ಲ. ಅವರ ಬದಲು ಮೈಸೂರು ರಾಜವಂಶದ ಯದುವೀರ್ ಕೃಷ್ಣದತ್ತ ಒಡೆಯರ್‌ಗೆ ಟಿಕೆಟ್ ದೊರೆಯುವ ಸಾಧ್ಯತೆ ಇದೆ ಎಂದು ವರದಿಯಾಗಿದೆ. ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಮಾಜಿ ಸಚಿವ ವಿ.ಸೋಮಣ್ಣ ಪರ ನಿಂತಿದ್ದಕ್ಕೆ ಪ್ರತಾಪ್ ಸಿಂಹಗೆ ಟಿಕೆಟ್ ಕೈತಪ್ಪುವ ಸಾಧ್ಯತೆ ಇದೆ ಎಂಬ ಊಹಾಪೋಹ ಕೇಳಿ ಬರುತ್ತಿದೆ.


ಈ ಎಲ್ಲಾ ಬೆಳವಣಿಗೆಗಳ ಮಧ್ಯೆ ಬಿಜೆಪಿ ಅಭ್ಯರ್ಥಿಗಳ 2ನೇ ಪಟ್ಟಿ ಬಿಡುಗಡೆಗಾಗಿ ಪಕ್ಷದ ನಾಯಕರು ದೆಹಲಿಗೆ ತೆರಳಿದ್ದಾರೆ. ಚುನಾವಣಾ ಸಮಿತಿ ಸಭೆಯಲ್ಲಿ 2ನೇ ಪಟ್ಟಿ ಅಂತಿಮಗೊಳ್ಳುವ ನೀರಿಕ್ಷೆ ಇದ್ದು, ನಾಳೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ. ಪಕ್ಷದ ಹೈಕಮಾಂಡ್ ಕರ್ನಾಟಕದ ಅಭ್ಯರ್ಥಿಗಳ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ ಎಂದು ವರದಿಯಾಗಿದೆ.


ಇದನ್ನೂ ಓದಿ- ಜಾತಿ ಗಣತಿ ವರದಿ ನೋಡಿ ಅಂತಿಮ ನಿರ್ಧಾರ: ಸಚಿವ ಎಂ ಬಿ ಪಾಟೀಲ್


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.