)
ಮೈಸೂರು : ವಿಶ್ವ ಪ್ರಸಿದ್ಧ ಅರಮನೆ ಮುಂಭಾಗ ಬಲೂನ್ ಸಿಲಿಂಡರ್ ಸ್ಪೋಟಗೊಂಡಿದೆ. ಈ ಅವಘಡದಲ್ಲಿ ಓರ್ವ ಸಾವನ್ನಪ್ಪಿದ್ದು, ನಾಲ್ವರಿಗೆ ಗಂಭೀರ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.
ರಜೆ ದಿನವಾದದ್ದರಿಂದ ಇಂದು ಅರಮನೆ ದೀಪಾಲಂಕಾರ ನೋಡಲು ಸಾವಿರಾರು ಜನರು ಬಂದಿದ್ದರು. ಈ ವೇಳೆ ಬಲೂನ್ ಸಿಲಿಂಡರ್ ಸ್ಫೋಟಗೊಂಡಿದೆ. ಅರಮನೆಯ ಜಯಮಾರ್ತಾಂಡ ದ್ವಾರದ ಮುಖ್ಯ ರಸ್ತೆಯಲ್ಲಿ ಈ ಅವಘಡ ನಡೆದಿದೆ.
ನೈಟ್ರೋಜನ್ ಬಲೂನ್ ಗ್ಯಾಸ್ ಸ್ಫೋಟದ ಪರಿಣಾಮ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾಗಿ ತಿಳಿದು ಬಂದಿದೆ. ಅಲ್ಲದೆ, ನಾಲ್ಕು ಜನರಿಗೆ ಗಂಭೀರ ಗಾಯಗಳಾಗಿವೆ ಎಂದು ವರದಿಯಾಗಿದೆ. ಸ್ಥಳಕ್ಕೆ ಮೈಸೂರು ಪೋಲೀಸರ ಭೇಟಿ ನೀಡಿದ್ದು ಪರಿಶೀಲನೆ ನಡೆಸುತ್ತಿದ್ದಾರೆ. ಅಲ್ಲದೆ, ಗಾಯಾಳುಗಳನ್ನ ಕೆ ಆರ್ ಆಸ್ಪತ್ರೆಗೆ ಚಿಕಿತ್ಸೆಗೆ ರವಾನಿಸಲಾಗಿದೆ.