)
Ration: ಪಡಿತರ ಅಕ್ಕಿ ಅಕ್ರಮವಾಗಿ ದಾಸ್ತಾನು ಇಟ್ಟಿದ್ದ ಗೋಡೌನ್ ಮೇಲೆ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ಜಂಟಿಯಾಗಿ ಕಾರ್ಯಾಚರಣೆ ನಡೆಸಿ 7 ಟನ್ ಅಕ್ಕಿ ಮತ್ತು ರಾಗಿ ವಶಕ್ಕೆ ಪಡೆದ ಘಟನೆ ಗುಂಡ್ಲುಪೇಟೆಯಲ್ಲಿ ನಡೆದಿದೆ.
ಗುಂಡ್ಲುಪೇಟೆಯ ಏಜಸ್, ಅನಿಸ್, ರಾಮು ಆರೋಪಿಗಳಾಗಿದ್ದು, ಮೂವರು ಪಟ್ಟಣದ ಹೊಸೂರು ರಸ್ತೆಯಲ್ಲಿ ಗೋಡೌನ್ ವೊಂದನ್ನು ಅಕ್ರಮವಾಗಿ ಪಡಿತರ ಅಕ್ಕಿ ಶೇಖರಣೆ ಮಾಡಿದ್ದರು.
ಗೋದಾಮಿನಲ್ಲಿ ಅಕ್ರಮವಾಗಿ ಪಡಿತರ ಶೇಖರಣೆ ಬಗೆಗಿನ ಖಚಿತ ಮಾಹಿತಿ ಮೇರೆಗೆ ಪೊಲೀಸರು ಮತ್ತು ಆಹಾರ ಇಲಾಖೆ ಅಧಿಕಾರಿಗಳು ದಾಳಿ ನಡೆಸಿ 142 ಮೂಟೆ ಪಡಿತರ ಅಕ್ಕಿ ಮತ್ತು 10 ಮೂಟೆ ರಾಗಿಯನ್ನು ವಶಕ್ಕೆ ಪಡೆದಿದ್ದಾರೆ.
ಈ ಸಂಬಂಧ ಗುಂಡ್ಲುಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.