ಮಲೆ ಮಹದೇಶ್ವರ ಬೆಟ್ಟದಲ್ಲಿರುವ ಸಾಲೂರು ಮಠದ ಹಿರಿಯ ಶ್ರೀಗಳು‌ ಲಿಂಗೈಕ್ಯ

Sri Pattada Guruswamy Dies: ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠದ ಹಿರಿಯ ಶ್ರೀಗಳಾದ ಗುರುಸ್ವಾಮಿಗಳು (75) ಲಿಂಗೈಕ್ಯರಾಗಿದ್ದು, ಇಂದು ಸಂಜೆ ಸಿದ್ದಗಂಗಾ ಶ್ರೀಗಳ ನೇತೃತ್ವದಲ್ಲಿ ಸಾಲೂರು ಮಠದ ಅವರಣದಲ್ಲಿ ಅಂತ್ಯ ಸಂಸ್ಕಾರ ನೆರವೇರಲಿದೆ. 

Written by - Yashaswini V | Last Updated : May 20, 2025, 10:17 AM IST
  • ಕೆಲ ವರ್ಷಗಳಿಂದಲೂ ಅನಾರೋಗ್ಯದಿಂದ ಬಳಲುತ್ತಿದ್ದ ಶ್ರೀಗಳು.
  • ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆಗೆ ಸ್ಪಂದಿಸದ ವೇಳೆ ಮಠಕ್ಕೆ ವಾಪಾಸ್ ಕರೆತರಲಾಗಿತ್ತು.
  • ಇಂದು ಮುಂಜಾನೆ 5 ಗಂಟೆಯಲ್ಲಿ ಲಿಂಗೈಕ್ಯರಾದ ಹಿರಿಯ ಶ್ರೀಗಳು.
ಮಲೆ ಮಹದೇಶ್ವರ ಬೆಟ್ಟದಲ್ಲಿರುವ  ಸಾಲೂರು ಮಠದ ಹಿರಿಯ ಶ್ರೀಗಳು‌ ಲಿಂಗೈಕ್ಯ

Sri Pattada Guruswamy Lingaikya: ಹನೂರು ತಾಲೂಕಿನ ಪ್ರಸಿದ್ಧ ಧಾರ್ಮಿಕ ಯಾತ್ರಾಸ್ಥಳ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಬೃಹನ್ ಮಠದ 17ನೇ ಪೀಠಾಧ್ಯಕ್ಷರಾದ ಹಿರಿಯ ಶ್ರೀಗಳಾದ ಶ್ರೀ ಪಟ್ಟದ ಗುರುಸ್ವಾಮಿಗಳು ಮಂಗಳವಾರ (ಮೇ 20, 2025)  ಮುಂಜಾನೆ ಲಿಂಗೈಕ್ಯರಾಗಿದ್ದಾರೆ.

ಶ್ರೀ ಗುರುಸ್ವಾಮಿರವರು ಹನೂರು ತಾಲೂಕಿನ ಜಿ.ಕೆ ಹೊಸೂರು (ಗಂಗಾಧರನ ಕಟ್ಟೆ)ಗ್ರಾಮದ ರುದ್ರಪ್ಪ ಮತ್ತು  ಪುಟ್ಟ ಮಾದಮ್ಮ ರವರ ಜೇಷ್ಠ ಪುತ್ರರಾಗಿದ್ದು 1956 ಆಗಸ್ಟ್ 2ರಂದು ಜನ್ಮ ಪಡೆದಿದ್ದರು. ನಂತರ ಸಾಲೂರು ಬೃಹನ್ ಮಠಕ್ಕೆ 17ನೇ ಪೀಠಾಧ್ಯಕ್ಷರಾಗಿ ಜನವರಿ 29, 1995 ರಂದು ಅಧಿಕಾರ ವಹಿಸಿಕೊಂಡಿದ್ದರು. 

ಶ್ರೀ ಕ್ಷೇತ್ರ ಮಲೆ ಮಹದೇಶ್ವರ ಬೆಟ್ಟದ ಸಾಲೂರು ಮಠಕ್ಕೆ ಅನನ್ಯ ಗಣ್ಯವಾದ ಸ್ಥಾನವಿದೆ. ಅದು ಸಾಮಾನ್ಯವಾದ ಮಠವಲ್ಲ ಶ್ರೀ ಮಲೆಯ ಮಹದೇಶ್ವರ ಅವರಿಗೆ ಅನುಗ್ರಹಿಸಿದ ತಪೋವನ, ಭಕ್ತರನ್ನು ದೇವರಗುಡ್ಡರನ್ನು ಆಧ್ಯಾತ್ಮದತ್ತ ಕರೆದೊಯ್ಯುವ ಪುಣ್ಯಧಾಮವಾಗಿದೆ.

ಶ್ರೀ ಪಟ್ಟದ ಗುರು ಸ್ವಾಮಿಗಳು ತಮ್ಮ 12ನೇ ವಯಸ್ಸಿನಲ್ಲಿ ಶ್ರೀಮಠಕ್ಕೆ ಬಂದು ಕಾಯ, ವಾಚ, ಮನಸ ತ್ರಿಕರಣ ಶುದ್ದಿಯಿಂದ ಎಲೆಮರಿ ಕಾಯಿಯಂತೆ ದುಡಿದರು. 1957ರಲ್ಲಿ ಶ್ರೀಮಠಕ್ಕೆ ಬಂದಾಗ ಮುದ್ದು ವೀರ ಸ್ವಾಮಿಗಳು, ಕೆಂಪನಂಜಸ್ವಾಮಿಗಳು, ಮಹಾದೇವಸ್ವಾಮಿಗಳು, ಹಾಗೂ ಗುಂಡೇಗಾಲದ ಮಲ್ಲಿಕಾರ್ಜುನ ಸ್ವಾಮಿರವರು ಶ್ರೀಮಠದ ಸೇವೆಯಲ್ಲಿ ನಿರತರಾಗಿದ್ದರು. ಇವರೆಲ್ಲರ ಸೇವೆಯನ್ನು ಭಕ್ತಿ ಗೌರವದಿಂದ ಭಕ್ತರ ಹೃದಯವನ್ನು ಗೆದ್ದವರು ಶ್ರೀ ಪಟ್ಟದ ಗುರು ಸ್ವಾಮಿಗಳು. 

ಶ್ರೀ ಪಟ್ಟದ ಗುರುಸ್ವಾಮಿಗಳ‌ ಅಧಿಕಾರ ಅವಧಿಯಲ್ಲಿ ಶ್ರೀಮಠದಲ್ಲಿ ನಿತ್ಯ ದಾಸೋಹ ಸೇವೆ, ಶ್ರೀ ಮಹದೇಶ್ವರ ದೇವಸ್ಥಾನದ ಅಭಿವೃದ್ಧಿ, ಶ್ರೀ ಮಠದ ಅಭಿವೃದ್ಧಿ, ಅರ್ಚಕರ ಜೀವನದ ಉದ್ದಾರ ಜೊತೆಗೆ ಶ್ರೀ ಸಾಲೂರು ಸ್ವಾಮಿ ಟ್ರಸ್ಟ್ ವತಿಯಿಂದ  ಪೂನ್ನಾಚಿ ಗ್ರಾಮದಲ್ಲಿ ಗಿರಿಜನ ದಿನದಲಿತರ ಹಿಂದುಳಿದವರ ಉಳಿವಿಗಾಗಿ ಪ್ರೌಢಶಾಲೆ ಮತ್ತು ಉಚಿತ ಹಾಸ್ಟೆಲ್ ಸ್ಥಾಪನೆ, 1999 ರಲ್ಲಿ ಕೊಳ್ಳೇಗಾಲ ತಾಲೂಕಿನ ಕೆಂಪನಪಾಳ್ಯದಲ್ಲಿ ಪ್ರೌಢಶಾಲೆ, ಹನೂರು ಹೊರವಲಯದಲ್ಲಿ ವೃದ್ಧರಿಗೆ ಆಶ್ರಯ ನೀಡಲು ೧೦ ಎಕರೆ ಪ್ರದೇಶದಲ್ಲಿ ವಿಸ್ತೀರ್ಣದಲ್ಲಿ ವೃದ್ಧಾಶ್ರಮವನ್ನು ಸ್ಥಾಪಿಸಿ , ನೂರಾರು ನಿರಾಶ್ರಿತರಿಗೆ ಆಶ್ರಯದಾತರಾಗಿದ್ದಾರೆ. ಗ್ರಾಮೀಣ ಮಕ್ಕಳಿಗೆ ಅನುಕೂಲವಾಗಲು ಹಲವಾರು ಸಂಸ್ಕೃತ ಪಾಠ ಶಾಲೆಗಳನ್ನು ತೆರೆದಿದ್ದಾರೆ. ಹಬ್ಬ ಜಾತ್ರೆ ಸಂದರ್ಭದಲ್ಲಿ ಸಹಸ್ರಾರು ಮಂದಿ ಭಕ್ತರು ಇಲ್ಲಿ ದಾಸೋಹ ಸ್ವೀಕರಿಸಲು ಅನುವು ಮಾಡಿಕೊಟ್ಟಿದ್ದರು.

ಕಳೆದ ನಾಲ್ಕು ವರ್ಷಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಇವರು ಶಿಷ್ಯರಾದ  ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ (ನಾಗೇಂದ್ರ) ರವರನ್ನು ಕಿರಿಯ ಶ್ರೀಗಳನ್ನಾಗಿ ಪಟ್ಟಾಭಿಷೇಕ ಮಾಡಿಸಿದ್ದರು.  ಒಂದು ವಾರದಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಅವರು ಮಂಗಳವಾರ ಮುಂಜಾನೆ ಲಿಂಗೈಕೆರಾಗಿದ್ದಾರೆ.

ಸುತ್ತೂರು ಶ್ರೀ, ತುಮಕೂರು ಸಿದ್ದಗಂಗಾ ಮಠದ ಶ್ರೀಗಳ ಸಮ್ಮುಖದಲ್ಲಿ ಸಾಲೂರು ಬೃಹನ್ ಮಠದ  ಆವರಣದಲ್ಲಿ ಸಂಜೆ 5 ಗಂಟೆಗೆ ಅಂತ್ಯಕ್ರಿಯೆ ನೆರವೇರಲಿದೆ.

ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ. 

 

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

ನಿಮ್ಮ ಜೀ ಕನ್ನಡ ನ್ಯೂಸ್‌ ಈಗ: Zee5ನಲ್ಲೂ ಜೀ ಕನ್ನಡ ನ್ಯೂಸ್‌ ಲಭ್ಯ 
Sun Direct-292 
TATA PLAY- 1664 
JIO TV-1334 
NXT Digital-30 
IN-CABLE-30 
U-Digital-162 
GTPL-17 
Rockline Telecommunications ಬೆಂಗಳೂರು-42
 V4 Digital Infotech ಮಂಗಳೂರು-628
Malanad infotech Pvt Ltd-56 
Metrocast ಬೆಂಗಳೂರು, ಬೆಳಗಾವಿ-830 ಲಭ್ಯ. 

Trending News