ಬೆಂಗಳೂರು: ಗೋರಿಪಾಳ್ಯದಲ್ಲಿ ಮುಸ್ಲಿಂ ಯುವಕರು ಹಿಂದೂ ಯುವಕ ಚಂದ್ರುವಿಗೆ ಉರ್ದು ಭಾಷೆಯಲ್ಲಿ ಮಾತನಾಡುವಂತೆ ಒತ್ತಾಯಿಸಿದ್ದಾರೆ. ಆದರೆ ಆತ ತನಗೆ ಉರ್ದು ಬರಲ್ಲ. ಕನ್ನಡ- ತಮಿಳು ಭಾಷೆ ಬರುತ್ತದೆ ಎಂದು ಹೇಳಿದ್ದಾನೆ. ಇದಕ್ಕೆ ಕೋಪಗೊಂಡ ಕಿರಾತಕರು ಆತನನ್ನು ಹತ್ಯೆ ಮಾಡಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ವಿಧಾನ ಪರಿಷತ್ ಸದಸ್ಯ ಎನ್.ರವಿಕುಮಾರ್ ಹೇಳಿದ್ದಾರೆ. 


COMMERCIAL BREAK
SCROLL TO CONTINUE READING

ರಾತ್ರಿ 2 ಗಂಟೆಗೆ ಈ ಘಟನೆ ನಡೆದಿದೆ. ರಕ್ತದ ಮಡುವಿನಲ್ಲಿದ್ದ ಆತನ ಸಹಾಯಕ್ಕೆ ಯಾರೂ ಬರದಿದ್ದರಿಂದ ಸಾವನ್ನಪ್ಪಿದ್ದಾನೆ. ಆತನ ಜೊತೆಗಾರನಾದ ಸೈಮನ್ ಮೇಲೆ ಕೂಡ ದಾಳಿ ಮಾಡಲಾಗಿತ್ತು. ಆತ ತಪ್ಪಿಸಿಕೊಂಡು ಓಡಿ ಹೋಗಿದ್ದ. ಘಟನೆಯ ಅರ್ಧ ಗಂಟೆ ನಂತರ ಸೈಮನ್ ಬಂದು ನೋಡಿದಾಗ ಚಂದ್ರು ಮೃತನಾಗಿದ್ದ. ಆದರೂ ಆತನನ್ನು ಆಟೋದಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರೂ ಅಹ ಪ್ರಯೋಜನವಾಗಿಲ್ಲ ಎಂದು ತಿಳಿಸಿದರು.


ಇದನ್ನು ಓದಿ: ‘ಅಧಿಕಾರವಿಲ್ಲದೆ ನಿರುದ್ಯೋಗಿಯಾಗಿರುವವರಿಂದ ಇನ್ನೇನು ನಿರೀಕ್ಷಿಸಲು ಸಾಧ್ಯ?’


ಇನ್ನು ಬಿಜೆಪಿ ನಿಯೋಗ ಚಂದ್ರುವಿನ ಮನೆಗೆ ಭೇಟಿ ನೀಡಿ ಕುಟುಂಬಕ್ಕೆ ಸಾಂತ್ವನ ಹೇಳಿದ್ದು, 5 ಲಕ್ಷ ರೂಪಾಯಿ ಪರಿಹಾರಧನವನ್ನು ನೀಡಿದೆ.  ಈ ನಿಯೋಗದಲ್ಲಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ, ಸಂಸದ ಪಿ.ಸಿ. ಮೋಹನ್, ಎಸ್‍ಸಿ ಮೋರ್ಚಾ ರಾಜ್ಯ ಅಧ್ಯಕ್ಷ ಛಲವಾದಿ ನಾರಾಯಣಸ್ವಾಮಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಜಿ. ಮಂಜುನಾಥ್ ಉಪಸ್ಥಿತರಿದ್ದರು.


ಇದನ್ನು ಓದಿ: ಹೊಸ ಖಾಸಗಿ ಶಾಶ್ವತ ಅನುದಾನರಹಿತ ಪದವಿ ಪೂರ್ವ ಕಾಲೇಜುಗಳನ್ನು ಪ್ರಾರಂಭಿಸಲು ಅರ್ಜಿ ಆಹ್ವಾನ


ಭೇಟಿ ನೀಡಿದ ಸಂದರ್ಭದಲ್ಲಿ ಮೃತನ ತಾಯಿ, ಅಣ್ಣ ಮತ್ತು ಅಜ್ಜಿ “ಉರ್ದುವಿನಲ್ಲಿ ಮಾತನಾಡಲು ಬಾರದ ಕಾರಣವೇ ಆತನ ಕೊಲೆಯಾಗಿದೆ. ಇಂತಹ ಕಾರಣಕ್ಕೆ ಕೊಲೆ ಮಾಡಬಹುದಾ? ನಮಗೆ ನ್ಯಾಯ ಕೊಡಿಸಿ; ಕುಟುಂಬದ ಸದಸ್ಯರಿಗೆ ಸರ್ಕಾರಿ ಉದ್ಯೋಗವನ್ನು ಕೊಡಿಸಿ.  ನಮಗೆ ರಕ್ಷಣೆ ಕೊಡಿ" ಎಂದು ಮನವಿ ಮಾಡಿಕೊಂಡಿದ್ದಾಗಿ ತಿಳಿಸಿದ್ದಾರೆ.


ಈ ಬಳಿಕ ನಿಯೋಗವು ಮಾತನಾಡಿದ್ದು, ಪ್ರಕರಣದ ಸಂಪೂರ್ಣ ತನಿಖೆ ನಡೆಸಿ ಅಪರಾಧಿಗಳಿಗೆ ಕಠಿಣ ಶಿಕ್ಷೆ ನೀಡಬೇಕು. ಇಂತಹ ಘಟನೆ ಮರುಕಳಿಸಬಾರದು ಎಂದು ಆಗ್ರಹಿಸಿದೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.