ಬೆಂಗಳೂರು: ನವೆಂಬರ್ 11ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಹಿನ್ನೆಲೆ ಅ.21ರಿಂದ ನ.7ರವರೆಗೆ ರಾಜ್ಯದಾದ್ಯಂತ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ ನಡೆಯಲಿದೆ. ಇದಕ್ಕೆ ಸಿದ್ಧವಾಗಿರುವ 20 'ನಾಡಪ್ರಭು ಕೆಂಪೇಗೌಡ ರಥ'ಗಳಿಗೆ ಇದೇ 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದ ಮುಂಭಾಗದಿಂದ ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.
ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಸೂಕ್ತ ಸಮಿತಿಗಳನ್ನು ರಚಿಸಲಾಗಿದೆ. ಈ ರಥಗಳು ಆಯಾಯ ಪ್ರದೇಶ/ಜಿಲ್ಲೆಗಳನ್ನು ಪ್ರವೇಶಿಸಿದಾಗ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುವುದು ಎಂದರು. ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಗ್ರಾಮದ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಪುಣ್ಯಪುರುಷರ ಸಮಾಧಿ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುವುದು. ಪ್ರತಿಯೊಂದು ರಥದ ಮಾರ್ಗ ನಕ್ಷೆಯನ್ನೂ ಸಿದ್ಧಪಡಿಸಲಾಗಿದೆ. ಆಯಾಯ ಜಿಲ್ಲೆಗಳಲ್ಲಿ ಧಾರ್ಮಿಕ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಸಾಹಿತಿಗಳು, ಪ್ರಗತಿಪರ ರೈತರು, ಸ್ವಸಹಾಯ ಸಂಘಗಳ ಸದಸ್ಯರು, ಹಿರಿಯ ನಾಗರಿಕರು, ಹಾಲು ಉತ್ಪಾದಕರ ಒಕ್ಕೂಟಗಳು, ಕೈಗಾರಿಕಾ ಸಂಘಗಳು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.
ಮಾಜಿ ಪ್ರಧಾನಿಗಳಾದ ಶ್ರೀ @H_D_Devegowda ಅವರ ನಿವಾಸಕ್ಕೆ ಬೇಟಿ ನೀಡಿ, ಹಿರಿಯರ ಆರೋಗ್ಯ ವಿಚಾರಿಸಿದೆ.
ಹಾಗೆಯೇ, ನಾಡಪ್ರಭು ಕೆಂಪೇಗೌಡ ಪ್ರತಿಮೆ ಅನಾವರಣ ಪ್ರಯುಕ್ತ ಅಕ್ಟೋಬರ್ 21ರಂದು ನಡೆಯಲಿರುವ ಪವಿತ್ರ ಮಣ್ಣು(ಮೃತ್ತಿಕೆ) ಸಂಗ್ರಹ ಅಭಿಯಾನ ಚಾಲನಾ ಕಾರ್ಯಕ್ರಮ, ನವೆಂಬರ್ 11ರ @sop108ft ಅನಾವರಣ ಕಾರ್ಯಕ್ರಮಕ್ಕೆ ಆಹ್ವಾನಿಸಿದೆ. pic.twitter.com/Fd4Su8Ivbj
— Dr. Ashwathnarayan C. N. (@drashwathcn) October 19, 2022
ಇದನ್ನೂ ಓದಿ: ಪೇ ಸಿಎಂ ನಂತರ SayCM.com ಪ್ರಾರಂಭಿಸಿದ ಕರ್ನಾಟಕ ಕಾಂಗ್ರೆಸ್
ಪವಿತ್ರ ಮೃತ್ತಿಕೆಯನ್ನು ವಿಮಾನ ನಿಲ್ದಾಣ ಆವರಣದಲ್ಲಿ ಅಭಿವೃದ್ಧಿಪಡಿಸುತ್ತಿರುವ 23 ಎಕರೆ ವಿಶಾಲವಾದ ಕೆಂಪೇಗೌಡ ಥೀಮ್ ಪಾರ್ಕ್‌ನಲ್ಲಿ ಬಳಸಿಕೊಳ್ಳಲಾಗುವುದು. ಈ ಇಡೀ ಕಾರ್ಯಕ್ರಮ ಮತ್ತು ಅಭಿಯಾನ ಪಕ್ಷಾತೀತವಾಗಿರಲಿದೆ. ಇಂಥದೊಂದು ಭವ್ಯ ಪ್ರತಿಮೆಯನ್ನು ಸ್ಥಾಪಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇತ್ತು ಎಂದು ಅವರು ಹೇಳಿದರು.
ನಾಡಪ್ರಭು ಕೆಂಪೇಗೌಡರು ದೂರದೃಷ್ಟಿಯ ಆಡಳಿತಗಾರ, ಕನಸುಗಾರ, ಸಮಾಜ ಸುಧಾರಕ. ಜಾಗತಿಕ ಪ್ರತಿಷ್ಠೆಯ ಬೆಂಗಳೂರನ್ನು ಅವರು ನಿರ್ಮಿಸಿದ್ದು ಐದು ಶತಮಾನಗಳ ಹಿಂದೆ. ಬೆಂಗಳೂರಿನ ವಿಮಾನ ನಿಲ್ದಾಣದ ಬಳಿ ಕೆಂಪೇಗೌಡರ 108 ಅಡಿ ಎತ್ತರದ ಪ್ರತಿಮೆ ಇನ್ನೇನು ಅನಾವರಣಗೊಳ್ಳಲಿದೆ. pic.twitter.com/HfzCkwDzZr
— Statue Of Prosperity - ಪ್ರಗತಿಯ ಪ್ರತಿಮೆ (@sop108ft) October 17, 2022
ಅಭಿಯಾನವನ್ನು ಯಶಸ್ವಿಯಾಗಿ ನಡೆಸುವ ಸಂಬಂಧ ಈಗಾಗಲೇ ಜಿಲ್ಲಾಧಿಕಾರಿಗಳು ಸೇರಿದಂತೆ ಸಂಬಂಧಿಸಿದ ಎಲ್ಲರಿಗೂ ಅಗತ್ಯ ಸಲಹೆ, ಸೂಚನೆಗಳನ್ನು ಕೊಡಲಾಗಿದೆ. ಇದಕ್ಕೆ ಜಿಪಂ ಸಿಇಒಗಳು ನೋಡಲ್ ಅಧಿಕಾರಿಗಳಾಗಿರುತ್ತಾರೆ. ಕೆಂಪೇಗೌಡರು ಕಟ್ಟಿದ ಬೆಂಗಳೂರು ಇಂದು ಜಾಗತಿಕ ಮಟ್ಟದಲ್ಲಿ ಗಮನ ಸೆಳೆದಿದೆ. ಅವರಿಗಿದ್ದ ದೂರದೃಷ್ಟಿಯನ್ನು ಗೌರವಿಸಿ, 108 ಅಡಿ ಎತ್ತರದ ಪ್ರತಿಮೆಗೆ 'ಪ್ರಗತಿ ಪ್ರತಿಮೆ' ಎಂದು ನಾಮಕರಣ ಮಾಡಲಾಗಿದೆ. ಜಗತ್ತಿನ ಯಾವ ನಗರದ ವಿಮಾನ ನಿಲ್ದಾಣದಲ್ಲೂ ಅಲ್ಲಿಯ ಸಂಸ್ಥಾಪಕರ ಪ್ರತಿಮೆ ಇಲ್ಲ. ಇನ್ನುಮುಂದೆ ಬೆಂಗಳೂರು ವಿಮಾನ ನಿಲ್ದಾಣ ಸಮುಚ್ಚಯದಲ್ಲಿ ಕೆಂಪೇಗೌಡರ ಪ್ರತಿಮೆ ಆಕರ್ಷಣೆಯ ಕೇಂದ್ರವಾಗಲಿದೆ ಎಂದು ಅವರು ತಿಳಿಸಿದರು. ಪತ್ರಿಕಾಗೋಷ್ಠಿಯಲ್ಲಿ ಕೆಂಪೇಗೌಡ ಪಾರಂಪರಿಕ ತಾಣಗಳ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ವಿನಯ್‌ದೀಪ್, ಸದಸ್ಯರಾದ ತಲಕಾಡು ಚಿಕ್ಕರಂಗೇಗೌಡ, ಗಂಗಹನುಮಯ್ಯ ಉಪಸ್ಥಿತರಿದ್ದರು.
ಇದನ್ನೂ ಓದಿ: ವಿಡಿಯೋ ನೋಡಿ : ಪ್ಯಾಕೇಜ್ ಸ್ಟಾರ್ ಅಂದ್ರೆ ಚಪ್ಪಲಿಯಲ್ಲಿ ಹೊಡೆಯುವೆ ಎಂದ ಪವನ್ ಕಲ್ಯಾಣ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ