ಬೆಂಗಳೂರು: ನವೆಂಬರ್ 11ರಂದು ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಪ್ರಧಾನಿ ನರೇಂದ್ರ ಮೋದಿಯರು 108 ಅಡಿ ಎತ್ತರದ ನಾಡಪ್ರಭು ಕೆಂಪೇಗೌಡರ ಕಂಚಿನ ಪ್ರತಿಮೆಯನ್ನು ಲೋಕಾರ್ಪಣೆಗೊಳಿಸಲಿದ್ದಾರೆ. ಈ ಹಿನ್ನೆಲೆ ಅ.21ರಿಂದ ನ.7ರವರೆಗೆ ರಾಜ್ಯದಾದ್ಯಂತ ಪವಿತ್ರ ಮೃತ್ತಿಕಾ ಸಂಗ್ರಹಣಾ ಅಭಿಯಾನ ನಡೆಯಲಿದೆ. ಇದಕ್ಕೆ ಸಿದ್ಧವಾಗಿರುವ 20 'ನಾಡಪ್ರಭು ಕೆಂಪೇಗೌಡ ರಥ'ಗಳಿಗೆ ಇದೇ 21ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿಧಾನಸೌಧದ ಮುಂಭಾಗದಿಂದ ಚಾಲನೆ ನೀಡಲಿದ್ದಾರೆ ಎಂದು ಸಚಿವ ಡಾ.ಸಿ.ಎನ್.ಅಶ್ವತ್ಥನಾರಾಯಣ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಇದಕ್ಕಾಗಿ ಜಿಲ್ಲಾ ಮಟ್ಟದಲ್ಲಿ ಸೂಕ್ತ ಸಮಿತಿಗಳನ್ನು ರಚಿಸಲಾಗಿದೆ. ಈ ರಥಗಳು ಆಯಾಯ ಪ್ರದೇಶ/ಜಿಲ್ಲೆಗಳನ್ನು ಪ್ರವೇಶಿಸಿದಾಗ ಪೂರ್ಣಕುಂಭ ಸ್ವಾಗತದೊಂದಿಗೆ ಬರಮಾಡಿಕೊಳ್ಳಲಾಗುವುದು ಎಂದರು. ಈ ಅಭಿಯಾನದ ಅಂಗವಾಗಿ ರಾಜ್ಯದ ಪ್ರತಿಯೊಂದು ಗ್ರಾಮದ ಕೆರೆಕಟ್ಟೆ, ಕಲ್ಯಾಣಿ, ನದಿ, ಪುಷ್ಕರಿಣಿ, ಪುಣ್ಯಪುರುಷರ ಸಮಾಧಿ ಸ್ಥಳಗಳಿಂದ ಪವಿತ್ರವಾದ ಮಣ್ಣನ್ನು ಸಂಗ್ರಹಿಸಲಾಗುವುದು. ಪ್ರತಿಯೊಂದು ರಥದ ಮಾರ್ಗ ನಕ್ಷೆಯನ್ನೂ ಸಿದ್ಧಪಡಿಸಲಾಗಿದೆ. ಆಯಾಯ ಜಿಲ್ಲೆಗಳಲ್ಲಿ ಧಾರ್ಮಿಕ ಮುಖಂಡರು, ಚುನಾಯಿತ ಪ್ರತಿನಿಧಿಗಳು, ಸಾಹಿತಿಗಳು, ಪ್ರಗತಿಪರ ರೈತರು, ಸ್ವಸಹಾಯ ಸಂಘಗಳ ಸದಸ್ಯರು, ಹಿರಿಯ ನಾಗರಿಕರು, ಹಾಲು ಉತ್ಪಾದಕರ ಒಕ್ಕೂಟಗಳು, ಕೈಗಾರಿಕಾ ಸಂಘಗಳು ಇದರಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಲಿದ್ದಾರೆ ಎಂದು ಅವರು ತಿಳಿಸಿದರು.


ಪೇ ಸಿಎಂ ನಂತರ SayCM.com ಪ್ರಾರಂಭಿಸಿದ ಕರ್ನಾಟಕ ಕಾಂಗ್ರೆಸ್


ಪವಿತ್ರ ಮೃತ್ತಿಕೆಯನ್ನು ವಿಮಾನ ನಿಲ್ದಾಣ ಆವರಣದಲ್ಲಿ ಅಭಿವೃದ್ಧಿಪಡಿಸುತ್ತಿರುವ 23 ಎಕರೆ ವಿಶಾಲವಾದ ಕೆಂಪೇಗೌಡ ಥೀಮ್‌ ಪಾರ್ಕ್‌ನಲ್ಲಿ ಬಳಸಿಕೊಳ್ಳಲಾಗುವುದು. ಈ ಇಡೀ ಕಾರ್ಯಕ್ರಮ ಮತ್ತು ಅಭಿಯಾನ ಪಕ್ಷಾತೀತವಾಗಿರಲಿದೆ. ಇಂಥದೊಂದು ಭವ್ಯ ಪ್ರತಿಮೆಯನ್ನು ಸ್ಥಾಪಿಸಬೇಕು ಎನ್ನುವ ಬೇಡಿಕೆ ಹಲವು ವರ್ಷಗಳಿಂದ ಇತ್ತು ಎಂದು ಅವರು ಹೇಳಿದರು.


ತಲಕಾಡು ಚಿಕ್ಕರಂಗೇಗೌಡ, ಗಂಗಹನುಮಯ್ಯ ಉಪಸ್ಥಿತರಿದ್ದರು.


ಇದನ್ನೂ ಓದಿ: ವಿಡಿಯೋ ನೋಡಿ : ಪ್ಯಾಕೇಜ್ ಸ್ಟಾರ್ ಅಂದ್ರೆ ಚಪ್ಪಲಿಯಲ್ಲಿ ಹೊಡೆಯುವೆ ಎಂದ ಪವನ್ ಕಲ್ಯಾಣ್!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ