ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ ಏಕೈಕ ನಾಯಕ ಸಿದ್ದರಾಮಯ್ಯ: ನಾಡೋಜ ಡಾ.ಬಸವಲಿಂಗ ಪಟ್ಟದೇವರು
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತಾ ಅನುಭವ ಮಂಟಪದ ಅಧ್ಯಕ್ಷರಾದ ನಾಡೋಜ ಡಾ.ಬಸವಲಿಂಗ ಪಟ್ಟದೇವರು ಆಡಿದ ನುಡಿಗಳು
CM Siddaramaiah: ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ್ದು ಏಕೈಕ ನಾಯಕ ಸಿದ್ದರಾಮಯ್ಯ ಎಂದು ಅನುಭವ ಮಂಟಪದ ಅಧ್ಯಕ್ಷರಾದ ನಾಡೋಜ ಡಾ.ಬಸವಲಿಂಗ ಪಟ್ಟದೇವರು ಹೇಳಿದರು.
ವಿಶ್ವ ಬಸವ ಧರ್ಮ ಟ್ರಸ್ಟ್, ಅನುಭವ ಮಂಟಪ - ಬಸವಕಲ್ಯಾಣ, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಹಾಗೂ ಲಿಂಗಾಯತ ಮಠಾಧಿಪತಿಗಳ ಒಕ್ಕೂಟದ ವತಿಯಿಂದ ಮುಖ್ಯಮಂತ್ರಿಗಳಿಗೆ ಸನ್ಮಾನಿಸಲಾಯಿತು.
ಹುಬ್ಬಳ್ಳಿಯ ಮೂರುಸಾವಿರ ಮಠದ ಶ್ರೀ ಜಗದ್ಗುರು ಗುರುಸಿದ್ದರಾಜಯೋಗೀಂದ್ರ ಮಹಾಸ್ವಾಮೀಜಿ , ಜಗದ್ಗುರು ಬಸವಜಯಮೃತ್ಯುಂಜಯ ಮಹಾಸ್ವಾಮಿಗಳು, ಜಗದ್ಗುರು ಡಾ.ಮಾತೆ ಗಂಗಾದೇವಿ, ಜಗದ್ಗುರು ಸಿದ್ದರಾಮೇಶ್ವರ ಮಹಾಸ್ವಾಮಿಗಳು, ಷ.ಬ್ರ.ರಾಜೇಶ್ವರ ಶಿವಾಚಾರ್ಯ ಮಹಾಸ್ವಾಮಿಗಳು ಸೇರಿ 160 ಮಂದಿ ಶರಣ ಗುರುಗಳು ಕಾರ್ಯಕ್ರಮದ ದಿವ್ಯ ಸಾನಿಧ್ಯವನ್ನು ವಹಿಸಿದ್ದರು. ಬಸವಕಲ್ಯಾಣ ಅನುಭವ ಮಂಟಪದ ವಿಶ್ವ ಬಸವ ಧರ್ಮ ಟ್ರಸ್ಟ್‍ನ ಅಧ್ಯಕ್ಷರಾದ ಶ್ರೀ ನಾಡೋಜ ಡಾ|| ಬಸವಲಿಂಗ ಪಟ್ಟದೇವರು ಮತ್ತು 150 ಕ್ಕೂ ಹೆಚ್ಚು ಶರಣಗುರುಗಳು, ಸ್ವಾಮೀಜಿಗಳು ಉಪಸ್ಥಿತರಿದ್ದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಹರಸಿದರು.
ಇದನ್ನೂ ಓದಿ- ಲಕ್ಷ್ಮಣ ಸವದಿಗೆ ಸದ್ಯದಲ್ಲೇ ಒಳ್ಳೆ ಭವಿಷ್ಯ ಇದೆ: ಸಿಎಂ ಸಿದ್ರಾ ಭರವಸೆ
ಈ ಸಂದರ್ಭದಲ್ಲಿ ಅನುಭವ ಮಂಟಪದ ಅಧ್ಯಕ್ಷರಾದ ನಾಡೋಜ ಡಾ.ಬಸವಲಿಂಗ ಪಟ್ಟದೇವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಅಭಿನಂದಿಸುತ್ತಾ, ಸರ್ಕಾರಿ ಕಚೇರಿಗಳಲ್ಲಿ ಬಸವಣ್ಣನವರ ಭಾವಚಿತ್ರ ಕಡ್ಡಾಯಗೊಳಿಸಿದ್ದು ಏಕೈಕ ನಾಯಕ ಸಿದ್ದರಾಮಯ್ಯ, ಮಹಿಳಾ ವಿವಿಗೆ ಅಕ್ಕ ಮಹಾದೇವಿ ಹೆಸರಿಟ್ಟಿದ್ದು ಏಕೈಕ ನಾಯಕ ಸಿದ್ದರಾಮಯ್ಯ ಎಂದು ಸಿದ್ದರಾಮಯ್ಯ ಅವರ ನಡೆಯನ್ನು ಹಾಡಿ ಹೊಗಳಿದರು.
ಬಸವ ತತ್ವದ ಆಧಾರದಲ್ಲಿ ಅನ್ನ ಭಾಗ್ಯ ಸೇರಿ ಹಲವು ಭಾಗ್ಯಗಳನ್ನು ಕೊಟ್ಟಿದ್ದೇನೆ ಎಂದು ಸಾರಿದ ನಾಯಕ ಸಿದ್ದರಾಮಯ್ಯ. ಅವರು ಅನುಭವ ಮಂಟಪದಲ್ಲಿ 12 ನೇ ಶತಮಾನದಲ್ಲಿ ಲಿಂಗಾಯತ ಸ್ವತಂತ್ರ ಧರ್ಮ ಎಂದು ಬಸವಣ್ಣನವರು ಘೋಷಿಸಿದರು. ಬಸವಣ್ಣನವರು ಮಾಡಿದ ಘೋಷಣೆಗೆ ಆಧುನಿಕ ಕರ್ನಾಟಕದಲ್ಲಿ ಲಿಂಗಾಯತ ಧರ್ಮ ಸ್ವತಂತ್ರ ಧರ್ಮ ಎಂದು ಮುದ್ರೆ ಒತ್ತಿದ ಏಕೈಕ ನಾಯಕ ಧೀಮಂತ ನಾಯಕ, ಬಸವಣ್ಣನವರ ಅಪ್ಪಟ ಅನುಯಾಯಿ ಸಿದ್ದರಾಮಯ್ಯ ಎಂದು ನಾಡೋಜ ಡಾ.ಬಸವಲಿಂಗ ಪಟ್ಟದೇವರು ನುಡಿದರು.
ಇದನ್ನೂ ಓದಿ- ಖಾಸಗಿ ಸಂಸ್ಥೆ ನೀಡುವ FSL ವರದಿಯನ್ನು ಸರ್ಕಾರ ಒಪ್ಪುವುದಿಲ್ಲ, ಪೊಲೀಸ್ ಇಲಾಖೆಯ ವರದಿಯೇ ಅಧಿಕೃತ: ಸಿಎಂ
ಬಸವಣ್ಣನವರು ತಮ್ಮ ರಾಜಕೀಯಕ್ಕೆ ಮಾದರಿ ಎಂದು ಘೋಷಿಸಿಕೊಂಡು ಅದನ್ನೇ ಪಾಲಿಸುತ್ತಿರುವ ಏಕೈಕ ನಾಯಕರು ನಮ್ಮೆಲ್ಲರ ಅಭಿಮಾನದ ಸಿದ್ದರಾಮಯ್ಯ ಅವರು ಎಂದು ನಾಡೋಜ ಡಾ.ಬಸವಲಿಂಗ ಪಟ್ಟದೇವರು ಹೇಳಿದರು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=I87DcFM35WY
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.