ನಾಗಮಂಗಲ ಗಲಾಟೆ ಪ್ರಕರಣ : 52 ಜನರ ಬಂಧನ:ಸ್ಥಳದಲ್ಲಿ ಐಜಿಪಿ,ಕೆಎಸ್‌ಆರ್‌ಪಿ ತುಕಡಿ ನಿಯೋಜನೆ
ನಾಗಮಂಗಲ ಗಲಭೆಗೆ ಸಂಬಂಧಿಸಿದಂತೆ ಎರಡು ಗುಂಪಿನ ಒಟ್ಟು 52 ಜನರನ್ನು ಬಂಧಿಸಲಾಗಿದೆ.
ಬೆಂಗಳೂರು : ನಾಗಮಂಗಲದಲ್ಲಿ ಗಣೇಶ ಮೆರವಣಿಗೆ ವೇಳೆ ನಡೆದ ಗಲಾಟೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತೆಗೆದುಕೊಂಡಿದ್ದಾರೆ ಎಂದು ಗೃಹ ಸಚಿವ ಪರಮೇಶ್ವರ್ ಹೇಳಿದರು.ಮುಂಜಾಗ್ರತಾ ಕ್ರಮವಾಗಿ ಕೆಎಸ್‌ಆರ್‌ಪಿ ತುಕಡಿಯನ್ನು ಸ್ಥಳದಲ್ಲಿ ನಿಯೋಜಿಸಲಾಗಿತ್ತು.ಘಟನೆಯನ್ನು ಪೊಲೀಸರು ಕೂಡಲೇ ನಿಯಂತ್ರಣಕ್ಕೆ ತಂದಿದ್ದಾರೆ ಎಂದು ಹೇಳಿದ್ದಾರೆ.
ವಾಹನಗಳಿಗೆ ಬೆಂಕಿ :
ಮೆರವಣಿಗೆ ವೇಳೆ ಕಲ್ಲು ತೂರಾಟವಾದಾಗ ಘರ್ಷಣೆ ಮಾಡಿಕೊಂಡಿದ್ದಾರೆ.ಆನಂತರ ಎಲ್ಲವೂ ಸರಿ ಹೋಯ್ತು ಅಂತ ವಾಪಸ್ ಹೋಗುವಾಗ,ಕೆಲವರು ವಾಹನಗಳಿಗೆ ಬೆಂಕಿ ಇಟ್ಟಿದ್ದಾರೆ.ಅಷ್ಟರೊಳಗೆ ಪೊಲೀಸರು ಎಚ್ಚೆತ್ತುಕೊಂಡು ಹತೋಟಿಗೆ ತೆಗೆದುಕೊಂಡಿದ್ದಾರೆ ಎಂದು ಹೇಳಿದರು.
"ಘಟನೆಗೆ ಹೆಚ್ಚು ಪ್ರಚಾರ ಬೇಡ " :
ಜಿಲ್ಲಾ ಪೊಲೀಸ್ ಅಧೀಕ್ಷಕರು, ಐಜಿಪಿ, ಕೆಎಸ್‌ಆರ್‌ಪಿ ತುಕಡಿ ಸ್ಥಳದಲ್ಲಿದೆ.ಕಾನೂನು ಸುವ್ಯವಸ್ಥೆ ಎಡಿಜಿಪಿ ಅವರನ್ನು ಸ್ಥಳಕ್ಕೆ ಕಳುಹಿಸಿಕೊಟ್ಟಿದ್ದೇನೆ.ಘರ್ಷಣೆ ಮಾಡಿಕೊಂಡಿದ್ದಾರೆ. ಈ ಘಟನೆಯನ್ನು ಕೋಮು ಗಲಭೆ ಅಂತ ಹೇಳಲಾಗುವುದಿಲ್ಲ. ಇದನ್ನು ಹೆಚ್ಚು ಬೆಳೆಯಲು ಬಿಡುವುದಿಲ್ಲ,ಪೊಲೀಸರು ಬಿಟ್ಟಿಲ್ಲ. ಈ ಘಟನೆಗೆ ಹೆಚ್ಚು ಪ್ರಚಾರ ನೀಡುವುದು ಬೇಡ ಎಂದು ಪರಮೇಶ್ವರ್ ಮನವಿ ಮಾಡಿದರು.
ಇದನ್ನೂ ಓದಿ : ಗಣೇಶ ವಿಸರ್ಜನೆ ವೇಳೆ ಜಿಹಾದಿ ಯುವಕರಿಂದ ಕಲ್ಲು ತುರಾಟ, ಘಟನೆಯಿಂದ ಸ್ಥಳದಲ್ಲಿ ಉದ್ತಿಗ್ನ ವಾತಾವರಣ
52 ಜನರ ಬಂಧನ :
ಘಟನೆಯಲ್ಲಿ ಹೆಚ್ಚು ಜನರಿಗೆ ಗಾಯಗಳಾಗಿಲ್ಲ.ಗಲಭೆಗೆ ಸಂಬಂಧಿಸಿದಂತೆ ಎರಡು ಗುಂಪಿನ ಒಟ್ಟು 52 ಜನರನ್ನು ಬಂಧಿಸಲಾಗಿದೆ.ಘಟನೆಗೆ ಸಂಬಂಧಿಸಿದ ದೃಶ್ಯಗಳು ಕ್ಯಾಮೆರಾದಲ್ಲಿ ಸೆರೆಯಾಗಿವೆ. ಅದನ್ನು ಆಧರಿಸಿ ಯಾರೆಲ್ಲ ಕಲ್ಲು ತೂರಿದ್ದಾರೆ, ಬೆಂಕಿ ಹಾಕಿದ್ದಾರೆ ಅವರೆಲ್ಲರ ವಿರುದ್ಧ ಕ್ರಮ ತೆಗೆದುಕೊಳ್ಳುತ್ತೇವೆ.ಪೊಲೀಸರಿಗು ಕಲ್ಲು ಏಟು ಬಿದ್ದಿದ್ದು, ಓರ್ವ ಎಸ್ಐ ಗಾಯಗೊಂಡಿದ್ದಾರೆ. ಇದರಲ್ಲಿ ರಾಜಕೀಯ ಪ್ರಚೋದನೆ ರೀತಿ ಕಾಣುತ್ತಿಲ್ಲ ಎಂದು ಸ್ಪಷ್ಟಪಡಿಸಿದರು.
ಕಾನೂನು ಸಲಹೆ ಕೊಡುವುದಾದರೆ ಸ್ವಾಗತ :
ಘಟನೆಗೆ ಅತಿಯಾದ ಓಲೈಕೆಯೇ ಕಾರಣ ಎಂದಿರುವ ಹೆಚ್.ಡಿ.ಕುಮಾರಸ್ವಾಮಿ ಹೇಳಿಕೆ ಬಗ್ಗೆ ಪ್ರತಿಕ್ರಿಯೆ ನೀಡಲು ಹೋಗುವುದಿಲ್ಲ.ಅವರು ಈ ಹಿಂದೆ ಯಾವ ರೀತಿ ಓಲೈಕೆ ಮಾಡುತ್ತಿದ್ದರೋ ಗೊತ್ತಿಲ್ಲ ಎಂದರು. ಇದರಲ್ಲಿ ರಾಜಕೀಯ ಮಾಡುವುದು ಬೇಡ. ಪೊಲೀಸರಿಗೆ ಬಿಟ್ಟರೆ ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ.ಕಾನೂನು ಸಲಹೆ ಕೊಡುವುದಾದರೆ ಸ್ವಾಗತ ಮಾಡುತ್ತೇನೆ. ಘಟನೆಯಲ್ಲಿ ಯಾರೆಲ್ಲ ಭಾಗಿಯಾಗಿದ್ದಾರೆ ಎಂಬುದರ ಕುರಿತು ಅಧಿಕಾರಿಗಳಿಂದ ಹೆಚ್ಚಿನ ಮಾಹಿತಿ ಪಡೆಯುತ್ತೇನೆ ಎಂದು ಹೇಳಿದರು.
ಇದನ್ನೂ ಓದಿ : ಮೇಯುತ್ತಿದ್ದ ಕಾಡೆಮ್ಮೆ ಹಿಡಿಯಲು ಬಂದ ಹುಲಿಗೆ ಬಿತ್ತು ಒದೆ
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Facebook Link - https://bit.ly/3Hhqmcj
Youtube Link - https://www.youtube.com/watch?v=kr-YIH866cM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.