ಬೆಂಗಳೂರು: ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸಿಗರಿಗೆ ತಾವು ಗೆಲ್ಲುವುದು ಸಾಧ್ಯವಿಲ್ಲವೆಂದು ಅನಿಸುತ್ತಿದೆ. ಅದಕ್ಕಾಗಿ ಬಿಜೆಪಿ ಮೇಲೆ ಆರೋಪ ಹಾಕುತ್ತಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಕಿಡಿಕಾರಿದ್ದಾರೆ.
ವೋಟರ್ ಐಡಿ ಅಕ್ರಮ ಪ್ರಕರಣ ಸಂಬಂಧ ಶನಿವಾರ ಸರಣಿ ಟ್ವೀಟ್ ಮಾಡಿರುವ ಕಟೀಲ್, ‘ಕಾಂಗ್ರೆಸ್ಸಿಗರ ಆರೋಪಕ್ಕೂ ನಮ್ಮ ಸರ್ಕಾರ, ಪಕ್ಷಕ್ಕೆ ಸಂಬಂಧವಿಲ್ಲ. ಜನರಲ್ಲಿ ಬಿಜೆಪಿ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಕಾಂಗ್ರೆಸ್ಸಿನ ಹತಾಶ ಪ್ರಯತ್ನ ಇದು’ ಎಂದು ಟೀಕಿಸಿದ್ದಾರೆ.
ಇದನ್ನೂ ಓದಿ: ಬಡ ಮಕ್ಕಳ ಹಾಲಿಗೂ ಕನ್ನ : ʼಕ್ಷೀರಭಾಗ್ಯʼ ಕಾಳಸಂತೆಯಲ್ಲಿ ಮಾರಾಟ..!
ನಕಲಿ ಮತದಾರರ ಹೆಸರು ಬಿಟ್ಟು ಹೋಗಿರುವುದರಿಂದ ಕಾಂಗ್ರೆಸ್ಸಿಗರಿಗೆ ತಾವು ಗೆಲ್ಲುವುದು ಸಾಧ್ಯವಿಲ್ಲ ಎಂದು ಅನಿಸುತ್ತಿದೆ. ಅದಕ್ಕಾಗಿ @BJP4Karnataka ಮೇಲೆ ಆರೋಪ ಹಾಕುತ್ತಿದ್ದಾರೆ. ಕಾಂಗ್ರೆಸ್ಸಿಗರ ಆರೋಪಕ್ಕೂ ನಮ್ಮ ಸರಕಾರ, ಪಕ್ಷಕ್ಕೆ ಸಂಬಂಧವಿಲ್ಲ. ಜನರಲ್ಲಿ ಭಾಜಪಾ ಬಗ್ಗೆ ಕೆಟ್ಟ ಅಭಿಪ್ರಾಯ ಮೂಡಿಸುವ ಕಾಂಗ್ರೆಸ್ಸಿನ ಹತಾಶ ಪ್ರಯತ್ನ ಇದು.
— Nalinkumar Kateel (@nalinkateel) November 19, 2022
‘ಮತದಾರರ ನೋಂದಣಿ ಕುರಿತು ಜಾಗೃತಿ ಮೂಡಿಸಲು ಪಡೆದುಕೊಂಡ ಅನುಮತಿಯನ್ನು ಚಿಲುಮೆ ಸಂಸ್ಥೆ ದುರ್ಬಳಕೆ ಮಾಡಿಕೊಂಡಿದೆ ಎಂದು ಕಾಂಗ್ರೆಸ್ ಚುನಾವಣಾ ಆಯೋಗಕ್ಕೆ ದೂರು ಕೊಟ್ಟಿರುವುದರಿಂದ ತನಿಖೆ ನಡೆಯುತ್ತಿದೆ. ಕಾಂಗ್ರೆಸ್ ಅಧಿಕಾರದಲ್ಲಿದ್ದಾಗ ಇದೇ ಸಂಸ್ಥೆಗೆ ಗುತ್ತಿಗೆ ನೀಡಿತ್ತು. ಈಗ ಅದೇ ಸಂಸ್ಥೆಯ ವಿರುದ್ಧ ದೂರು ನೀಡಿದ್ದಾರೆ’ ಅಂತಾ ಕಟೀಲ್ ಹೇಳಿದ್ದಾರೆ.
‘ನಮ್ಮ ಪಕ್ಷದ ರಾಜ್ಯ ಸರ್ಕಾರ ಪಾರದರ್ಶಕವಾಗಿರುವುದರಿಂದ ದೂರು ಬಂದ ಹಿನ್ನಲೆ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿದೆ. ಆದರೆ ಸೋಲಿನ ಭೀತಿಯಿಂದ ಕಾಂಗ್ರೆಸ್ ಅನಗತ್ಯ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಬಗ್ಗೆನೂ ತನಿಖೆ ನಡೆಯಲಿದೆ’ ಎಂದು ಕಟೀಲ್ ಎಚ್ಚರಿಕೆ ನೀಡಿದ್ದಾರೆ.
ನಮ್ಮ ಪಕ್ಷದ ರಾಜ್ಯ ಸರಕಾರ ಪಾರದರ್ಶಕವಾಗಿರುವುದರಿಂದ ದೂರು ಬಂದ ಹಿನ್ನಲೆಯಲ್ಲಿ ಚಿಲುಮೆಗೆ ನೀಡಿರುವ ಅನುಮತಿಯನ್ನು ಬಿಬಿಎಂಪಿ ರದ್ದುಪಡಿಸಿದೆ.
ಆದರೆ ಸೋಲಿನ ಭೀತಿಯಿಂದ ಕಾಂಗ್ರೆಸ್ ಅನಗತ್ಯ ರಾಜಕೀಯ ಮಾಡುತ್ತಿದೆ. ಕಾಂಗ್ರೆಸ್ ಆಡಳಿತದ ಅವಧಿಯಲ್ಲಿ ಚಿಲುಮೆ ಸಂಸ್ಥೆ ಮೂಲಕ ಮತದಾರರ ಮಾಹಿತಿ ದುರ್ಬಳಕೆ ಬಗ್ಗೆನೂ ತನಿಖೆ ನಡೆಯಲಿದೆ.
— Nalinkumar Kateel (@nalinkateel) November 19, 2022
ಇದನ್ನೂ ಓದಿ: ಹನಿ ಟ್ರಾಪ್ ಹನಿಗಳು ಸಿಎಂ ಕಚೇರಿಯಲ್ಲಿ ಬಿದ್ದಿದ್ದರ ಬಗ್ಗೆ ಸಿಎಂ ಬೊಮ್ಮಾಯಿ ಮಾತಾಡ್ಬೇಕು: ಕಾಂಗ್ರೆಸ್
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.