ಮುಂದಿನ ವಾರ ಖಾಲಿ ಇರುವ ನಿಗಮ ಮಂಡಳಿಗಳ ಭರ್ತಿ: ನಳೀನ್ ಕುಮಾರ್ ಕಟೀಲ್
Nalin Kumar Kateel: ಒಂದಷ್ಟು ನಿಗಮ-ಮಂಡಳಿಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಕೆಲಸವನ್ನು ಮುಂದಿನ ವಾರ ಮಾಡುತ್ತೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ ಹೇಳಿದರು.
ಬೆಂಗಳೂರು: ಕೋವಿಡ್ ಸಮಯದಲ್ಲಿ ಹಿಂದೆ ಪಕ್ಷದ ಕಡೆಯಿಂದ ಮಾಡಿದ್ದ ಕೆಲಸಗಳನ್ನು ಮುಂದುವರಿಸುವ ಬಗ್ಗೆ ಯೋಜಿಸಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ನಳೀನ್ ಕುಮಾರ್ ಕಟೀಲ್ (Nalin Kumar Kateel) ಹೇಳಿದರು.
ವೀಕೆಂಡ್ ಕರ್ಫ್ಯೂ ವಿಚಾರ:
ಬಿಬಿಎಂಪಿ ವಾರ್ಡ್ ಗಳಲ್ಲಿ ವಾರ್ ರೂಂ (War Room) ತೆರೆಯುವ ಬಗ್ಗೆ ಚರ್ಚೆ ಮಾಡಿದ್ದೇವೆ. ಸಿಎಂ ತಜ್ಞರ ಅಭಿಪ್ರಾಯ ಪಡೆದು ಮಾರ್ಗಸೂಚಿ ಮಾಡಿದ್ದಾರೆ. ತಜ್ಞರ ಅಭಿಪ್ರಾಯ ಪಡೆದು ಸಿಎಂ ನಿರ್ಧಾರ ಮಾಡುತ್ತಾರೆ ಎಂದು ತಿಳಿಸಿದರು.
ನಿಗಮ-ಮಂಡಳಿ ನೇಮಕಾತಿ ವಿಚಾರ:
ಒಂದಷ್ಟು ನಿಗಮ-ಮಂಡಳಿಗಳು ಖಾಲಿ ಇವೆ. ಅವುಗಳನ್ನು ಭರ್ತಿ ಮಾಡುವ ಕೆಲಸವನ್ನು ಮುಂದಿನ ವಾರ ಮಾಡುತ್ತೇವೆ ಎಂದು ಹೇಳಿದರು.
ಸಿಎಂ ಬೊಮ್ಮಾಯಿ ಜತೆ ಸಭೆ:
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (CM Basavaraj Bommai) ಜತೆ ನಳಿನ್ ಕುಮಾರ್ ಕಟೀಲ್ ನಿನ್ನೆ ರಾತ್ರಿ ಬಿಜೆಪಿ ಕಚೇರಿಯಲ್ಲಿ ಇತರ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿದರು.
ಈ ವೇಳೆ ನಿಗಮ–ಮಂಡಳಿಗಳ ಅಧ್ಯಕ್ಷರನ್ನು ಬದಲಿಸುವ ಬಗ್ಗೆ, ಕೋವಿಡ್ ನಿಯಂತ್ರಣ ಮತ್ತು ಗಣರಾಜ್ಯೋತ್ಸವ ಅಚರಣೆಗೆ ಸಂಬಂಧಿಸಿದಂತೆ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ. ಸಭೆಯಲ್ಲಿ ಪಕ್ಷದ ಸಂಘಟನಾ ಕಾರ್ಯದರ್ಶಿ ಅರುಣ್ ಕುಮಾರ್ ಇದ್ದರು ಎನ್ನಲಾಗಿದೆ.
ಇದನ್ನೂ ಓದಿ: Covid-19 Guidelines : ಬೆಂಗಳೂರಿಗರೇ ಎಚ್ಚರ..! ಕೋವಿಡ್ ನಿಯಮ ಉಲ್ಲಂಘಿಸಿದ್ರೆ ದಂಡ ಫಿಕ್ಸ್!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.