ಮಾರ್ಚ್ ನಲ್ಲಿ "ನಮ್ಮ ಬೆಂಗಳೂರು ಹಬ್ಬ 2023": ಕಲೆ, ಸಿನಿಮಾ, ಆಹಾರ ಮೇಳ ಆಯೋಜನೆ, ಎಲ್ಲಿ ಏನು?

ನಮ್ಮ ಬೆಂಗಳೂರು ಹಬ್ಬ 2023ರ ಹಿನ್ನಲೆಯಲ್ಲಿ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಇದೇ ಮಾರ್ಚ್ 25ರಿಂದ ವಿವಿಧ ರೀತಿಯ ಕಲೆ, ಸಿನಿಮಾ, ಆಹಾರ ಮೇಳದಂತಹ ವೈವಿಧ್ಯಮಯ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಎಲ್ಲಿ, ಯಾವ ಕಾರ್ಯಕ್ರಮಗಳು ನಡೆಯಲಿವೆ ಎಂಬ ವಿವರ ಇಲ್ಲಿದೆ. 

Written by - Prashobh Devanahalli | Edited by - Yashaswini V | Last Updated : Mar 20, 2023, 01:34 PM IST
  • ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದ ವೇದಿಕೆಯಲ್ಲಿ ದಿನಾಂಕ:25.032023 ರಂದು ಸಂಜೆ 06.00 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದೆ
  • ನಂತರ ಅನನ್ಯ ಭಟ್, ನವೀನ್ ಸಜ್ಜು, ಜನಾರ್ಧನ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮಗಳು ಜರುಗಲಿವೆ.
  • ದಿನಾಂಕ:26-03-2023 ರಂದು ಸಂಜೆ 05.00 ಗಂಟೆಗೆ ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಲಾಗುವುದು.
ಮಾರ್ಚ್ ನಲ್ಲಿ "ನಮ್ಮ ಬೆಂಗಳೂರು ಹಬ್ಬ 2023": ಕಲೆ, ಸಿನಿಮಾ, ಆಹಾರ ಮೇಳ ಆಯೋಜನೆ, ಎಲ್ಲಿ ಏನು? title=
Namma Bengaluru Habba 2023

ಬೆಂಗಳೂರು : ಕರ್ನಾಟಕ ಸಂಸ್ಕೃತಿ ಇತಿಹಾಸ ಹಾಗೂ ಪರಂಪರೆಗಳನ್ನು ಬೆಂಗಳೂರಿನಲ್ಲಿ ನೆಲೆಸಿರುವ ಇತರೆ ಭಾಷಿಕರನ್ನು ಒಳಗೊಂಡಂತೆ ನಾಡಿನ ಜನರಿಗೆ ಪರಿಚಯಿಸುವ ದೃಷ್ಟಿಯಿಂದ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ದಿನಾಂಕ:25-03-2023 ರಂದು ಬೆಳಿಗ್ಗೆ 10.00 ರಿಂದ ಸಂಜೆ 6:00 ರವರೆಗೆ ಕಬ್ಬನ್‌ ಪಾರ್ಕ್‌ ಆವರಣದ ವಿ ಬೆಂಗಳೂರು ಹಬ್ಬದ ಅಂಗವಾಗಿ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ಹಾಗೂ ಮೇಳಗಳನ್ನು ಆಯೋಜನೆ ಮಾಡಲಾಗುತ್ತಿದೆ.

ವಿಧಾನಸೌಧದ ಮೆಟ್ಟಿಲುಗಳ ಮುಂಭಾಗದ ವೇದಿಕೆಯಲ್ಲಿ ದಿನಾಂಕ:25.032023 ರಂದು ಸಂಜೆ 06.00 ಗಂಟೆಗೆ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು ನಂತರ ಅನನ್ಯ ಭಟ್, ನವೀನ್ ಸಜ್ಜು, ಜನಾರ್ಧನ್ ಮತ್ತು ತಂಡದವರಿಂದ ಸಂಗೀತ ಕಾರ್ಯಕ್ರಮಗಳು ಜರುಗಲಿವೆ.

ದಿನಾಂಕ:26-03-2023 ರಂದು ಸಂಜೆ 05.00 ಗಂಟೆಗೆ ವಿಧಾನಸೌಧದ ಆವರಣದಲ್ಲಿ ನಾಡಪ್ರಭು ಕೆಂಪೇಗೌಡರ ಪ್ರತಿಮೆ ಹಾಗೂ ಜಗಜ್ಯೋತಿ ಬಸವೇಶ್ವರರ ಪ್ರತಿಮೆ ಅನಾವರಣಗೊಳಿಸಲಾಗುವುದು. ನಂತರ ನಾಡಿನ ಪ್ರಸಿದ್ಧ ಸಂಗೀತಗಾರರಿಂದ ಗಾಯನ ಕಾರ್ಯಕ್ರಮ ಹಾಗೂ ಪ್ರಭಾತ್ ಕಲಾವಿದರಿಂದ ನೃತ್ಯ ಪ್ರದರ್ಶನ ಆಯೋಜಿಸಲಾಗಿದೆ.

ಇದನ್ನೂ ಓದಿ- Muniratna : ಉರಿಗೌಡ ದೊಡ್ಡನಂಜೇಗೌಡ ಸಿನಿಮಾ ಮಾಡುವ ನಿರ್ಧಾರದಿಂದ ಹಿಂದೆ ಸರಿದ ಮುನಿರತ್ನ!

ಕಬ್ಬನ್ ಪಾರ್ಕ್‌ನ ಆವರಣದಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳು:-
* ಕಲಾ ಉತ್ಸವ – 

ಕರ್ನಾಟಕ ಚಿತ್ರಕಲಾ ಪರಿಷತ್ ಹಾಗೂ ಕರ್ನಾಟಕ ಲಲಿತಕಲಾ ಅಕಾಡೆಮಿಯ ಸಹಯೋಗದಲ್ಲಿ ಚಿತ್ರಸಂತೆಯ ಮಾದರಿಯಲ್ಲಿ ಕಬ್ಬನ್ ಪಾರ್ಕ್ ನ ಒಂದಿಡೀ ರಸ್ತೆಯಲ್ಲಿ ವೈವಿಧ್ಯಮಯ ಚಿತ್ರಕಲೆಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಮತ್ತು ಮಾರಾಟ ಹಾಗೂ ಶಿಲ್ಪಕಲಾ ಉತ್ಸವದಡಿ ಕರ್ನಾಟಕ ಶಿಲ್ಪಕಲಾ ಅಕಾಡೆಮಿಯ ವತಿಯಿಂದ ಜೇಡಿಮಣ್ಣು/ಶಿಲೆ/ಕಾಷ್ಠ ಶಿಲ್ಪಗಳ ಪ್ರಾತ್ಯಕ್ಷಿಕೆ, ಪ್ರದರ್ಶನ ಮತ್ತು ಮಾರಾಟಗಳನ್ನು ಏರ್ಪಡಿಸಲಾಗಿದೆ. ವಿವಿಧ ಇಲಾಖೆಗಳು, ಅಕಾಡೆಮಿಗಳು, ವಿವಿಧ ಸಂಘಟನೆಗಳ ವತಿಯಿಂದ ಕರಕುಶಲ ವಸ್ತುಗಳ ಮೇಳವನ್ನೂ ಆಯೋಜಿಸಲಾಗಿದೆ.

* ವೈವಿಧ್ಯಮಯ ಸಾಂಸ್ಕೃತಿಕ ಕಾರ್ಯಕ್ರಮಗಳು - 
ಬಾಲಭವನ ಆವರಣದ ಆಂಪಿಕ್ ಥಿಯೇಟರ್ ವಿವಿಧ ಅಕಾಡೆಮಿಗಳು, ರಂಗ ಶಂಕರ ಮತ್ತು ನೀನಾಸಂ ಸಂಸ್ಥೆಗಳ ಸಹಯೋಗದಲ್ಲಿ ನಾಟಕ, ಬೀದಿ ನಾಟಕಗಳು, ಗೊಂಬೆ ಪ್ರದರ್ಶನ, ಯಕ್ಷಗಾನ, ಗಾಯನ, ನೃತ್ಯ ಕಾರ್ಯಕ್ರಮಗಳನ್ನು ಬಾಲಭವನ ಆವರಣದ ಅಂಪೀಕ್ ಥಿಯೇಟರ್‌ನಲ್ಲಿ ಆಯೋಜಿಸಲಾಗಿದೆ.

* ಕಬ್ಬನ್ ಪಾರ್ಕ್‌ನ ಬ್ಯಾಂಡ್ ಸ್ಟಾಂಡ್ ವೇದಿಕೆ: 
ಈ ವೇದಿಕೆಯಲ್ಲಿ ಪೋಲಿಸ್ ಬ್ಯಾಂಡ್ ವಾದನ, ನೃತ್ಯ ಜನಪದ ಗಾಯನ, ಯಕ್ಷಗಾನ, ನಾಟಕ ಹಾಗೂ ವಿವಿಧ ರಾಜ್ಯಗಳ ಸಂಘಟನೆಗಳ ಸಾಂಸ್ಕೃತಿಕ ಕಾರ್ಯಕ್ರಮಗಳ ಪ್ರದರ್ಶನವಿರುತ್ತದೆ.

ಇದನ್ನೂ ಓದಿ- ಶಾಸಕ ಮಹೇಶ್ ವಿರುದ್ಧ ತಿರುಗಿಬಿದ್ದ ನಗರಸಭೆ ಸದಸ್ಯರು!!

* ಮಕ್ಕಳ ಚಲನಚಿತ್ರೋತ್ಸದ
ಬಾಲಭವನ ಸಭಾಂಗಣದಲ್ಲಿ ದಿನಾಂಕ:24.03.2023 ರಿಂದ 26.03.2023ರವರೆಗೆ ಪ್ರತಿದಿನ 3 ಪ್ರದರ್ಶನಗಳ ಮಕ್ಕಳ ಚಲನಚಿತ್ರೋತ್ಸವವನ್ನು ಆಯೋಜಿಸಲಾಗಿದೆ.

* ಪುಸ್ತಕ ಮೇಳ - 
ಕರ್ನಾಟಕ ಸಾಹಿತ್ಯ ಅಕಾಡೆಮಿ, ಕನ್ನಡ ಪುಸ್ತಕ ಪ್ರಾಧಿಕಾರ, ಕುವೆಂಪು ಭಾಷಾಭಾರತಿ ಪ್ರಾಧಿಕಾರ ಹಾಗೂ ಇತರೆ ಪ್ರಕಾಶನ ಸಂಸ್ಥೆಗಳ ಸಹಯೋಗದಲ್ಲಿ ಕಬ್ಬನ್ ಪಾರ್ಕ್ ಆವರಣದಲ್ಲಿ ಪುಸ್ತಕ ಮೇಳವನ್ನು ಏರ್ಪಡಿಸಲಾಗಿದೆ.

* ಆಹಾರ ಮೇಳ - 
ಬೆಂಗಳೂರು ಹಬ್ಬದ ಅಂಗವಾಗಿ ಹೊಟೇಲ್ ಗಳ ಸಂಘ ಹಾಗೂ ಬೆಂಗಳೂರಿನಲ್ಲಿರುವ ವಿವಿಧ ರಾಜ್ಯಗಳ ಸಂಘಗಳ ಸಹಯೋಗದಲ್ಲಿ ಕಬ್ಬನ್‌ ಪಾರ್ಕ್ ನಲ್ಲಿ ಆಹಾರ ಮೇಳವನ್ನು ಆಯೋಜಿಸಲಾಗಿದೆ. ಬೆಂಗಳೂರಿನ ಖ್ಯಾತ ಹೊಟೇಲ್ ಗಳ ಎಲ್ಲಾ ತಿನಿಸುಗಳ ಪ್ರದರ್ಶನ ಮತ್ತು ಮಾರಾಟವನ್ನು ಒಂದೇ ಸ್ಥಳದಲ್ಲಿ ದೊರೆಯುವಂತೆ ವ್ಯವಸ್ಥೆ ಮಾಡಲಾಗಿದೆ.

ಬೆಂಗಳೂರು ಹಬ್ಬದ ಅಂಗವಾಗಿ ದಿನಾಂಕ:25.03.2023 ಮತ್ತು 26.03.2023ರಂದು ಬೆಂಗಳೂರಿನ ಆಯ್ದ ಸಿನಿಮಾ ಮಂದಿರಗಳಲ್ಲಿ ಬೆಳಗಿನ ಆಟದಲ್ಲಿ (ಮಾರ್ನಿಂಗ್ ಶೋ) ಹಳೆಯ ಕನ್ನಡ ಸಿನಿಮಾಗಳ ಉಚಿತ ವೀಕ್ಷಣೆಗೆ ಅವಕಾಶ ಮಾಡಲಾಗಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News