ಬೆಂಗಳೂರು:  ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಪಿಲ್ಲರ್ ಬೀಮ್‌(ವಯಾಡಕ್ಟ್)ನಲ್ಲಿ ಬಿರುಕು ಬಿಟ್ಟಿದ್ದು, ದುರಸ್ತಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಇಂದು ರಾತ್ರಿಯಿಂದ ಡಿ. 30ರವರೆಗೆ ಎಂ.ಜಿ. ರಸ್ತೆ ನಿಲ್ದಾಣದಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ ಎಂದು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿ) ತಿಳಿಸಿದೆ.


COMMERCIAL BREAK
SCROLL TO CONTINUE READING

ಇಂದು ರಾತ್ರಿ 8 ಬಳಿಕ ದುರಸ್ತಿ ಕಾಮಗಾರಿ ಆರಂಭವಾಗಲಿರುವ ಹಿನ್ನೆಲೆಯಲ್ಲಿ ಇಂದಿನಿಂದ ಡಿ.30ರವರೆಗೆ ಎಂ.ಜಿ.ರಸ್ತೆಯಿಂದ ಇಂದಿರಾನಗರದ ವರೆಗಿನ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುವುದು ಎಂದು ಬಿಎಂಆರ್‌ಸಿ ಹೇಳಿದೆ.


ಉಳಿದಂತೆ ನೇರಳೆ ಮಾರ್ಗದಲ್ಲಿ ಮೈಸೂರು ರಸ್ತೆಯಿಂದ ಎಂ.ಜಿ.ರಸ್ತೆ ಮತ್ತು ಇಂದಿರಾನಗರದಿಂದ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲು ಸಂಚಾರ ನಡೆಯಲಿದೆ ಎಂದು ತಿಳಿಸಿದೆ.


ಡಿ.31ರ ಬೆಳಗ್ಗೆ 5ರಿಂದ ಮೆಟ್ರೋ ರೈಲು ಪೂರ್ಣ ಪ್ರಮಾಣದ ಮಾರ್ಗದಲ್ಲಿ ಸಂಚರಿಸಲಿದೆ ಎಂದು ಬಿಎಂಆರ್​ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.


ಮೆಟ್ರೋ ಪ್ರಯಾಣಿಕರಿಗೆ ಪರ್ಯಾಯವಾಗಿ ಬಿಎಂಟಿಸಿಯಿಂದ ಉಚಿತ ಸೇವೆ ದೊರೆಯಲಿದೆ. ಕಬ್ಬನ್‌ ಪಾರ್ಕ್‌ನಿಂದ ಬೈಯ್ಯಪ್ಪನಹಳ್ಳಿವರೆಗೆ ರಾತ್ರಿ 8 ರಿಂದ 11ರ ವರೆಗೆ ಡಿ.28ರಿಂದ 30ರವರೆಗೆ ಬಿಎಂಟಿಸಿ ಸೇವೆ ಲಭ್ಯವಾಗಲಿದೆ.