ಬೆಂಗಳೂರು: ನಗರದ ಟ್ರಿನಿಟಿ ಮೆಟ್ರೋ ನಿಲ್ದಾಣದ ಬಳಿ ಪಿಲ್ಲರ್ ಬೀಮ್‌(ವಯಾಡಕ್ಟ್)ನಲ್ಲಿ ಬಿರುಕು ಬಿಟ್ಟಿದ್ದು, ದುರಸ್ತಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಡಿ.28ರ ರಾತ್ರಿಯಿಂದ ಡಿ. 30ರವರೆಗೆ ಎಂ.ಜಿ. ರಸ್ತೆ ನಿಲ್ದಾಣದಿಂದ ಇಂದಿರಾನಗರ ನಿಲ್ದಾಣದವರೆಗೆ ಮೆಟ್ರೋ ರೈಲು ಸಂಚಾರ ಸ್ಥಗಿತಗೊಳ್ಳಲಿದೆ.


COMMERCIAL BREAK
SCROLL TO CONTINUE READING

ಈ ಕುರಿತು ಬೆಂಗಳೂರು ಮೆಟ್ರೋ ರೈಲು ನಿಗಮ(ಬಿಎಂಆರ್‌ಸಿ) ಪತ್ರಿಕಾ ಹೇಳಿಕೆ ನೀಡಿದ್ದು, ಡಿ.28ರಂದು ರಾತ್ರಿ 8 ಬಳಿಕ ದುರಸ್ತಿ ಕಾಮಗಾರಿ ಆರಂಭಗೊಳ್ಳಲಿದೆ. ಈ ಹಿನ್ನೆಲೆಯಲ್ಲಿ ಅಂದಿನಿಂದ ಡಿ.30ರವರೆಗೆ ಎಂ.ಜಿ.ರಸ್ತೆಯಿಂದ ಇಂದಿರಾನಗರದ ವರೆಗಿನ ಮೆಟ್ರೋ ಸಂಚಾರ ಸ್ಥಗಿತಗೊಳಿಸಲಾಗುವುದು. 


ಉಳಿದಂತೆ ನೇರಳೆ ಮಾರ್ಗದಲ್ಲಿ ಮೈಸೂರು ರಸ್ತೆಯಿಂದ ಎಂ.ಜಿ.ರಸ್ತೆ ಮತ್ತು ಇಂದಿರಾನಗರದಿಂದ ಬೈಯಪ್ಪನಹಳ್ಳಿ ಮಾರ್ಗದಲ್ಲಿ ಎಂದಿನಂತೆ ಮೆಟ್ರೋ ರೈಲು ಸಂಚಾರ ನಡೆಯಲಿದೆ ಎಂದು ತಿಳಿಸಿದೆ.


ಡಿ.31ರ ಬೆಳಗ್ಗೆ 5ರಿಂದ ಮೆಟ್ರೋ ರೈಲು ಪೂರ್ಣ ಪ್ರಮಾಣದ ಮಾರ್ಗದಲ್ಲಿ ಸಂಚರಿಸಲಿದೆ ಎಂದು ಬಿಎಂಆರ್​ಸಿಎಲ್ ಅಧಿಕಾರಿಗಳು ತಿಳಿಸಿದ್ದಾರೆ.


ಮೆಟ್ರೋ ಪ್ರಯಾಣಿಕರಿಗೆ ಪರ್ಯಾಯವಾಗಿ ಬಿಎಂಟಿಸಿಯಿಂದ ಉಚಿತ ಸೇವೆ ದೊರೆಯಲಿದೆ. ಕಬ್ಬನ್‌ ಪಾರ್ಕ್‌ನಿಂದ ಬೈಯ್ಯಪ್ಪನಹಳ್ಳಿವರೆಗೆ ರಾತ್ರಿ 8 ರಿಂದ 11ರ ವರೆಗೆ ಡಿ.28ರಿಂದ 30ರವರೆಗೆ ಬಿಎಂಟಿಸಿ ಸೇಏವೆ ಲಭ್ಯವಾಗಲಿದೆ.