ಬೆಳಗಾವಿ: ಮುಂದಿನ ದಿನಗಳಲ್ಲಿ ಸಂಚಾರ ದಟ್ಟಣೆ ಗಮನದಲ್ಲಿಟ್ಟುಕೊಂಡು, ನಮ್ಮ ಮೆಟ್ರೋ ಮಾರ್ಗವನ್ನು ಹೊಸಕೋಟೆ, ನೆಲಮಂಗಲ ಹಾಗೂ ಬಿಡದಿವರೆಗೆ ವಿಸ್ತರಣೆ ಮಾಡುವ ಪ್ರಸ್ತಾವನೆ ಸರ್ಕಾರದ ಮುಂದೆ ಇದೆ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.


COMMERCIAL BREAK
SCROLL TO CONTINUE READING

ವಿಧಾನಸಭೆಯ ಕಲಾಪದಲ್ಲಿ ಕಾಂಗ್ರೆಸ್ ಶಾಸಕ ಶರತ್ ಬಚ್ಛೆಗೌಡ ಅವರು ಹೊಸಕೋಟೆಗೆ ಮೆಟ್ರೋ ಮಾರ್ಗ ವಿಸ್ತರಣೆ ವಿಚಾರವಾಗಿ ಕೇಳಿದ ಪ್ರಶ್ನೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು ಗುರುವಾರ ಉತ್ತರಿಸಿದರು.


ಇದನ್ನೂ ಓದಿ: ರಕ್ತನಾಳಗಳಲ್ಲಿ ಸೇರಿಕೊಂಡಿರುವ ಕೊಲೆಸ್ಟ್ರಾಲ್ ಕರಗಿಸಲು ಸುರಕ್ಷಿತವಾದ ಮನೆ ಮದ್ದು ಎಂದರೆ ಇದೊಂದೇ ಮಸಾಲೆ !


"ಈ ವಿಚಾರವಾಗಿ ಶರತ್ ಅವರು ಬಹಳ ಹೋರಾಟ ಮಾಡುತ್ತಿದ್ದಾರೆ. ಬೆಂಗಳೂರು ಕೂಡ ವಿಪರೀತವಾಗಿ ಬೆಳೆಯುತ್ತಿದೆ. ಸಾಮಾನ್ಯ ರೈಲಿನಲ್ಲಿ ಕೋಲಾರದಿಂದ ಸುಮಾರು 10 ಸಾವಿರಕ್ಕೂ ಹೆಚ್ಚು ಜನ ದಿನ ನಿತ್ಯ ಸಂಚರಿಸುತ್ತಾರೆ. ಐಟಿ ಕಾರಿಡಾರ್ ಬಹುತೇಕ ಹೊಸಕೋಟೆ ಮುಟ್ಟಿದೆ. ಹೀಗಾಗಿ ಮೆಟ್ರೋ ಅವಶ್ಯಕತೆ ಇದೆ" ಎಂದು ತಿಳಿಸಿದರು. 


ಇದನ್ನೂ ಓದಿ: ಜಯದೇವ ಆಸ್ಪತ್ರೆ ಸಿಬ್ಬಂದಿಗಳ ರಕ್ಷಣೆಗೆ ರೆಡಿ ಆಯ್ತು ಆಪ್ :ಸೇಫ್ಟಿ ಆಪ್ ಕಂಡುಕೊಂಡ ಸರ್ಕಾರಿ ಸಾಮ್ಯದ ಮೊದಲ ಆಸ್ಪತ್ರೆ


"ಮಾರ್ಗ ವಿಸ್ತರಣೆ ವಿಚಾರವನ್ನು ನಾನು ಈಗಾಗಲೇ ಯೋಜನೆಯಲ್ಲಿ ಸೇರಿಸಿ ವಿಸ್ತೃತ ಸಮೀಕ್ಷೆ ಮಾಡಿಸುತ್ತಿದ್ದೇನೆ.ನಮ್ಮ ಸರ್ಕಾರ ಹಾಗೂ ಮೆಟ್ರೋ ಸಂಸ್ಥೆ ಅವರ ಮನವಿಯನ್ನು ಸಹಾನುಭೂತಿಯಿಂದ ಪರಿಗಣಿಸಿದೆ. ಹೊಸಕೋಟೆ ಜತೆಗೆ ಬಿಡದಿ, ನೆಲಮಂಗಲದವರೆಗೂ ಮೆಟ್ರೋ ಮಾರ್ಗ ವಿಸ್ತರಣೆ ಯೋಜನೆ ಸಿದ್ಧಡಿಸಲು ವರದಿ ರೂಪಿಸಲಾಗುತ್ತಿದೆ. ನಾವು ನಿಮ್ಮ ಮನವಿಯನ್ನು ಪರಿಗಣಿಸಿದ್ದೇವೆ" ಎಂದು ತಿಳಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.