ಬೆಂಗಳೂರು: ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಪಡಿಸಿದರು. ಅವರು ಇಂದು ತಮ್ಮ ಆರ್.ಟಿ. ನಗರ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು.


COMMERCIAL BREAK
SCROLL TO CONTINUE READING

ಇದನ್ನೂ ಓದಿ: New Year 2023: ನ್ಯೂ ಇಯರ್ ಹೆಸರಲ್ಲಿ ಕೋವಿಡ್ ರೂಲ್ಸ್ ಬ್ರೇಕ್, ಹೆಚ್ಚಾಯ್ತು ಟೆನ್ಶನ್!


ನಂದಿನಿಯನ್ನು ಅಮುಲ್ ಸಂಸ್ಥೆಯೊಂದಿಗೆ ವಿಲೀನ ಮಾಡುತ್ತಾರೆ ಎನ್ನುವುದು ತಪ್ಪು ಕಲ್ಪನೆ. ಯಾರೂ ಊಹೆ ಮಾಡಿ ಟೀಕೆ ಮಾಡಬಾರದು. ಕೇಂದ್ರ ಗೃಹ ಮತ್ತು ಸಹಕಾರ ಸಚಿವರು ಮಾತನಾಡಿರುವುದು ಸ್ಪಷ್ಟವಾಗಿದೆ. ಒಬ್ಬರಿಗೊಬ್ಬರು ಸಹಕಾರದಿಂದ ನಂದಿನಿ ಮತ್ತು ಅಮುಲ್ ತಾಂತ್ರಿಕವಾಗಿ, ಮಾರುಕಟ್ಟೆಯಲ್ಲಿ ಸಹಕಾರ ಮಾಡಬೇಕು. ಇವೆರಡೂ ದೊಡ್ಡ ಸಂಸ್ಥೆಗಳು. ಪೂರಕವಾಗಿ ಕೆಲಸ ಮಾಡಬೇಕು. ಅದರರ್ಥ ವಿಲೀನಗೊಳಿಸುವುದು ಎಂದಲ್ಲ. ನಂದಿನಿ ಅಸ್ತಿತ್ವ ನೂರಾರು ವರ್ಷ ಶಾಶ್ವತವಾಗಿ ಇರಲಿದೆ ಎಂದರು.


ಒಟ್ಟಾಗಿ ಕೆಲಸ ಮಾಡಿದರೆ ಲಾಭ:


ಯಾವುದೂ ಸಮಸ್ಯೆಯಿಲ್ಲ. ಕೆಲವು ವಲಯಗಳಲ್ಲಿ ಇಬ್ಬರೂ ಒಟ್ಟಿಗೆ ಕೆಲಸ ಮಾಡಿದರೆ ಲಾಭವಿದೆ. ನಂದಿನಿ ಅಥವಾ ಅಮುಲ್ ತಾಂತ್ರಿಕವಾಗಿ ಮುಂದಿದ್ದರೆ ವಿನಿಯಮ ಮಾಡಿಕೊಳ್ಳಬಹುದು. ಆಡಳಿತಾತ್ಮಕ ಕ್ರಮಗಳನ್ನು ವಿನಿಮಯ ಮಾಡಿಕೊಳ್ಳಿ ಎಂದು ಅವರು ಹೇಳಿರುವುದು. ಅದಕ್ಕೆ ತಪ್ಪು ಅರ್ಥ ಕಲ್ಪಿಸುವ ಅಥವಾ ರಾಜಕಾರಣ ಮಾಡುವ ಅವಶ್ಯಕತೆ ಇಲ್ಲ. ನಾನು ಮುಖ್ಯಮಂತ್ರಿಯಾಗಿ ಹೇಳುತ್ತಿದ್ದೇನೆ, ನಂದಿನಿ ತನ್ನ ಪ್ರತ್ಯೇಕ ಅಸ್ತಿತ್ವವನ್ನು ಸದಾ ಕಾಯ್ದುಕೊಳ್ಳಲಿದೆ ಎಂದರು.


ಇದನ್ನೂ ಓದಿ: New Year Hug: ಎಂಜಿ ರೋಡ್‍ನಲ್ಲಿ ಹುಡುಗಿಯ Free ಹಗ್‍ಗೆ ಮುಗಿಬಿದ್ದ ಯುವಕರು!


ಮೀಸಲಾತಿ ಸಂವಿಧಾನದ ಚೌಕಟ್ಟಿನಲ್ಲಿ ಇದೆ:


ಮೀಸಲಾತಿ ವಿಚಾರದಲ್ಲಿ ಕೆಪಿಸಿಸಿ ಅಧ್ಯಕ್ಷ  ಡಿ.ಕೆ.ಶಿವಕುಮಾರ್ ಅವರ ಹೇಳಿಕೆಗೆ ಪ್ರತಿಕ್ರಿಯೆ ನೀಡಿ, “ಅವರಿಗೆ ಕಷ್ಟವಾಗುತ್ತಿದೆ. ಅದಕ್ಕೆ ವ್ಯಾಖ್ಯಾನ ಮಾಡಲು ಬರುವುದಿಲ್ಲ. ಅಂತಿಮ ವರದಿ ಬಂದಾಗ ಅದಕ್ಕೆ ಸ್ಪಷ್ಟ ರೂಪ ದೊರಕಲಿದೆ. ಸಂವಿಧಾನದ ಚೌಕಟ್ಟಿನಲ್ಲಿ ಸರಿಯಾಗಿರಲಿದೆ” ಎಂದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.