ಮೈಸೂರು : ವಿರೋಧ ಪಕ್ಷದವರು ಯಾರನ್ನೂ ಸಮಾಧಿ ಮಾಡುವುದಿಲ್ಲ ಪ್ರಧಾನಿಗಳನ್ನು ರಾಜಕೀಯವಾಗಿ ವಿರೋಧ ಮಾಡುತ್ತಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಇಂದು ಮೈಸೂರಿನ  ತಮ್ಮ ನಿವಾಸದಲ್ಲಿ ಮಾಧ್ಯಮ ದವರೊಂದಿಗೆ ಮಾತನಾಡಿದರು.


COMMERCIAL BREAK
SCROLL TO CONTINUE READING

ಪ್ರಧಾನಮಂತ್ರಿ ನರೇಂದ್ರ ಮೋದಿಯವರು ನಿನ್ನೆ ವಿರೋಧಪಕ್ಷಗಳು ನನ್ನನ್ನು ಸಮಾಧಿ ಮಾಡಲು ಹೊರಟಿವೆ. ನೀವು ನನ್ನನ್ನು ಕಾಪಾಡಬೇಕು ಎಂದು ಜನತೆಯಲ್ಲಿ ಮಾಡಿರುವ ಮನವಿಗೆ ಪ್ರತಿಕ್ರಿಯೆ ನೀಡಿದ ಅವರು ಮೇಲಿನಂತೆ ಪ್ರತಿಕ್ರಿಯೆ ನೀಡಿದರು. 


ಇದನ್ನೂ ಓದಿ:SSLC ಫಲಿತಾಂಶಕ್ಕೆ ಹೆದರಿ ನಾಲ್ವರು ವಿದ್ಯಾರ್ಥಿಗಳು ಆತ್ಮಹತ್ಯೆಗೆ ಯತ್ನ!


ನರೇಂದ್ರ ಮೋದಿ ಹತ್ತು ವರ್ಷ ಪ್ರಧಾನಿಗಳಾಗಿ ಬಡವರ ಪರವಾಗಿ ಏನೂ ಮಾಡಿಲ್ಲ ಎನ್ನುವುದು ಹಾಗು ಸುಳ್ಳಿನ ಸರದಾರ ಎನ್ನುವುದು ನಮ್ಮ ಆರೋಪ. ಜನರಿಗೆ ನೀಡಿದ್ದ ಯಾವ ಯಾವ  ಭರವಸೆಗಳನ್ನು ಈಡೇರಿಸಿಲ್ಲ. ರಾಜಕೀಯವಾಗಿ ಅವರನ್ನು ಸೋಲಿಸಬೇಕೆನ್ನುವುದು ವಿರೋಧ ಪಕ್ಷಗಳ ಗುರಿ. ಏಕೆಂದರೆ ಈ ದೇಶ ಆರ್ಥಿಕ ಹಾಗೂ ಬಡವರ ಅಭಿವೃದ್ಧಿ ಆಗಿಲ್ಲ ಎಂದರು.


ಪ್ರಧಾನಿಗಳು ಸೋಲುತ್ತೇವೆಂದು ಹತಾಶರಾಗಿ ಈ ರೀತಿ ಮಾತನಾಡು ತ್ತಿದ್ದಾರೆ.  ಅವರ ಭಾವನಾತ್ಮಕ ಆಟ ಜನರಿಗೆ ಗೊತ್ತಾಗಿದೆ. ಅವರು ಸುಳ್ಳು ಹೇಳುವುದು, ಭಾವನಾತ್ಮಕವಾಗಿ ಶೋಷಣೆ ಮಾಡುವುದು ಜನರಿಗೆ ಗೊತ್ತಾಗಿದೆ. ಜನರಿಗೆ ಗೊತ್ತಾದ ಮೇಲೆ ಪುನ: ಅದೇ ತಪ್ಪನ್ನು ಮಾಡುವುದಿಲ್ಲ. ಮೇಲಕ್ಕೇರಿದವರು ಕೆಳಕ್ಕೆ ಇಳಿಯಲೇಬೇಕು ಎಂದರು.


ಇದನ್ನೂ ಓದಿ: ಲೋಕದ ಡೊಂಕ ನೀವೇಕೆ ತಿದ್ದುವಿರಿ; ಬಸವಣ್ಣನವರ ವಚನದ ಮೂಲಕ ಕುಮಾರಸ್ವಾಮಿಗೆ ಡಿಸಿಎಂ ಡಿ.ಕೆ. ಶಿವಕುಮಾರ್ ತಿರುಗೇಟು


ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ರಾಜ್ಯದಲ್ಲಿ ಬರಗಾಲ ಇರುವುದರಿಂದ ರೈತರ ಸಾಲ ಮನ್ನಾ ಮಾಡಬೇಕು ಎಂದು ಹೇಳಿರುವ ಬಗ್ಗೆ ಪ್ರತಿಕ್ರಿಯೆ ನೀಡಿ ಅವರು ಹಿಂದೆ ಸಾಲ ಮನ್ನಾ ಮಾಡಿ ಎಂದಾಗ ನಮ್ಮ ಬಳಿ ಪ್ರಿಂಟಿಂಗ್ ಮಶೀನ್ ಇಲ್ಲ ಎಂದಿದ್ದರು. ಇವರಿಗೆ ಯಾವ ನೈತಿಕತೆ ಇದೆ  ಎಂದು ಪ್ರಶ್ನಿಸಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.