ಬೆಂಗಳೂರು: ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ನಿರಂತರವಾಗಿ ಆಗುತ್ತಿರುವ ಅನ್ಯಾಯವನ್ನು ಸರಿಪಡಿಸುವ ಸೂಚನೆ ಕೂಡಾ ಬಜೆಟ್ ನಲ್ಲಿ ಇಲ್ಲ. ಕೇಂದ್ರ ಸರ್ಕಾರದ ತಾರತಮ್ಯ ನೀತಿಯನ್ನು ಸೂಕ್ಷ್ಮವಾಗಿ ಅವಲೋಕಸಿದರೆ ಬಿಜೆಪಿಯನ್ನು ತಿರಸ್ಕರಿಸಿರುವ ಕರ್ನಾಟಕವೂ ಸೇರಿದಂತೆ ದಕ್ಷಿಣದ ರಾಜ್ಯಗಳ ವಿರುದ್ಧ ರಾಜಕೀಯ ಸೇಡು ತೀರಿಸಿಕೊಳ್ಳಲು ನರೇಂದ್ರ ಮೋದಿ ಅವರ ಸರ್ಕಾರ ನಿರ್ಧಾರ ಮಾಡಿದಂತಿದೆ ಎಂದು ಸಿಎಂ ಸಿದ್ದರಾಮಯ್ಯ ಕೇಂದ್ರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ರಾಜ್ಯ ರಾಜಧಾನಿಯ ಅಭಿವೃದ್ದಿಗೆ ಗ್ರೇಟರ್ ಬೆಂಗಳೂರು ಬಿಲ್: ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್


ಕೇಂದ್ರದ ಸರ್ಕಾರದ ಬಜೆಟ್ ಮಂಡನೆ ಬಗ್ಗೆ ಪ್ರತಿಕ್ರಿಯಿಸಿದ ಅವರು 'ಕರ್ನಾಟಕದಿಂದಲೇ ಆಯ್ಕೆಯಾಗಿ ಹೋಗಿರುವ ಕೇಂದ್ರ ಸರ್ಕಾರದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರೂ ಸೇರಿದಂತೆ ರಾಜ್ಯದ ಸಂಸದರೆಲ್ಲರ ಸಭೆ ಕರೆದು ರಾಜ್ಯದ ಅತ್ಯವಶ್ಯಕ ಬೇಡಿಕೆಗಳನ್ನು ಮುಂದಿಟ್ಟು ಮನವರಿಕೆ ಮಾಡಿಕೊಟ್ಟಿದ್ದರೂ ಇಂದು ಮಂಡಿಸಲಾಗಿರುವ ಕೇಂದ್ರ ಬಿಜೆಪಿ ಸರ್ಕಾರದ ಬಜೆಟ್ ನಲ್ಲಿ ಕರ್ನಾಟಕವನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂದು ಅವರು ದೂರಿದರು.


ಕೇಂದ್ರ ಸರ್ಕಾರದ ಈ ಉದ್ದೇಶಪೂರ್ವ ನಿರ್ಲಕ್ಷ್ಯ ಮತ್ತು ತಾರತಮ್ಯ ನೀತಿಯನ್ನು ಖಂಡಿಸಿ, ಇದೇ ಜುಲೈ ತಿಂಗಳ 27ರಂದು ಪ್ರಧಾನಿ ಮೋದಿ ಅಧ್ಯಕ್ಷತೆಯಲ್ಲಿ ದೆಹಲಿಯಲ್ಲಿ ಕರೆಯಲಾಗಿರುವ ನೀತಿ ಆಯೋಗದ ಸಭೆಯನ್ನು ಬಹಿಷ್ಕರಿಸಲು ನಮ್ಮ ಸರ್ಕಾರ ನಿರ್ಧರಿಸಿದೆ.ಇಂದು ಮಂಡಿಸಲಾದ 2024-25ರ ಸಾಲಿನ ಬಜೆಟ್ ನೋಡಿದ ನಂತರ ನಮಗೆ ಕೇಂದ್ರ ಸರ್ಕಾರದ ಮೇಲಿನ ವಿಶ‍್ವಾಸವೇ ಹೊರಟುಹೋಗಿದೆ ಎಂದು ಹೇಳಿದರು.


ಇದನ್ನೂ ಓದಿ: ಇಷ್ಟವಿಲ್ಲದಿದ್ದರೂ ನಟಿ ಶ್ರುತಿ ಹಾಸನ್‌ ಜೊತೆ ಅಂಥಾ ಸೀನ್‌ ಮಾಡಬೇಕಾಯಿತು! ಖ್ಯಾತ ನಟನ ಹೇಳಿಕೆ


ಬಜೆಟ್ ನಲ್ಲಿ ರೈತರ ಕಲ್ಯಾಣದ ಕಾಳಜಿ ವ್ಯಕ್ತಪಡಿಸಿರುವ ಹಣಕಾಸುವ ಸಚಿವರು ನಮ್ಮ ಬಹುದಿನಗಳ ಬೇಡಿಕೆಯಾಗಿರುವ ಮೇಕೆದಾಟು ಯೋಜನೆಯ ಬಗ್ಗೆ ಪ್ರಸ್ತಾವವನ್ನೇ ಮಾಡಿಲ್ಲ. ಭದ್ರಾ ಮೇಲ್ದಂಡೆಗೆ ವಿಶೇಷ ನೆರವು ನೀಡುವ ತಮ್ಮದೇ ಭರವಸೆಯನ್ನೂ ಉಳಿಸಿಕೊಳ್ಳಲಿಲ್ಲ. ಕಳಸಾ -ಬಂಡೂರಿ ಯೋಜನೆಯನ್ನೂ ನಿರ್ಲಕ್ಷಿಸಲಾಗಿದೆ.ಬೆಂಗಳೂರು ಮೆಟ್ರೋ ರೈಲು ಕಾರ್ಪೋರೇಶನ್ ಮೆಟ್ರೋ 3ನೇ ಹಂತದ  ಯೋಜನೆ ಮತ್ತು ಬೆಂಗಳೂರು ನಗರದ ಉದ್ದೇಶಿತ ಅಷ್ಟಪಥ ಪೆರಿಫೆರಲ್ ರಿಂಗ್ ರೋಡ್ ನಿರ್ಮಾಣಕ್ಕೆ ಅಗತ್ಯ ಅನುಮತಿ ಮತ್ತು ಅನುದಾನವನ್ನೂ ನೀಡಿಲ್ಲ ಎಂದು ಅವರು ಕಿಡಿ ಕಾರಿದರು.


ದೇಶದಲ್ಲಿ 28 ರಾಜ್ಯಗಳು ಮತ್ತು ಎಂಟು ಕೇಂದ್ರಾಡಳಿತ ಪ್ರದೇಶಗಳಿವೆ ಎನ್ನುವುದನ್ನು ನರೇಂದ್ರ ಮೋದಿ ಸರ್ಕಾರ ಮರೆತಂತಿದೆ. ಆಂಧ್ರಪ್ರದೇಶ ಮತ್ತು ಬಿಹಾರ ರಾಜ್ಯಗಳಿಗೆ ಸುರಿದಿರುವ ವಿಶೇಷ ಅನುದಾನದ ಸುರಿಮಳೆಯನ್ನು ನೋಡಿದರೆ ನರೇಂದ್ರ ಮೋದಿಯವರ ಲೆಕ್ಕಾಚಾರದಲ್ಲಿ ಆ ಎರಡು ರಾಜ್ಯಗಳು ಮಾತ್ರ ಅಸ್ತಿತ್ವದಲ್ಲಿರುವ ಹಾಗೆ ಕಾಣುತ್ತಿದೆ. ಇದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.


ಈ ಅನ್ಯಾಯವನ್ನು ಸಹಿಸಲಾಗದು. ಈ ರೀತಿ ನಿರ್ಲಕ್ಷ್ಯಕ್ಕೊಳಗಾಗಿರುವ ಬಿಜೆಪಿಯೇತರ ಪಕ್ಷಗಳ ಆಡಳಿತದ ರಾಜ್ಯಗಳ ಜೊತೆ ಸೇರಿ ಕೇಂದ್ರ ಸರ್ಕಾರದ ತಾರತಮ್ಯ ನೀತಿ ಮತ್ತು ಸೇಡಿನ ರಾಜಕಾರಣದ ವಿರುದ್ಧ ಹೋರಾಟ ನಡೆಸಲಾಗುವುದು. ಈ ಹೋರಾಟದಲ್ಲಿ ಕೇಂದ್ರ ಸರ್ಕಾರದ ಕರ್ನಾಟಕ ವಿರೋಧಿ ನಿಲುವಿನ ಬಗ್ಗೆ ಅಸಮಾಧಾನಗೊಂಡಿರುವ  ರಾಜ್ಯದ ಜನತೆ ನಮ್ಮ ಜೊತೆ ನಿಲ್ಲಲಿದ್ದಾರೆ ಎಂಬ ಭರವಸೆ ನನಗಿದೆ ಎಂದು ಅವರು ಹೇಳಿದರು.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ