ಬೆಳಗಾವಿ: ರಾಜ್ಯದಲ್ಲಿ ಹಾದುಹೋಗಿರುವ ರಾಷ್ಟ್ರೀಯ ಹೆದ್ದಾರಿಗಳ ಪಕ್ಕ ಜಲಶಕ್ತಿ ಯೋಜನೆ(Jal Shakti Yojana) ಅನುಷ್ಠಾನ ಮಾಡುವುದಾಗಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ(Basavaraj Bommai) ಹೇಳಿದ್ದಾರೆ. ಕೇಂದ್ರ ರಸ್ತೆ ಸಾರಿಗೆ & ಹೆದ್ದಾರಿ ಇಲಾಖೆ ಮತ್ತು ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವತಿಯಿಂದ ನಗರದ ಜಿಲ್ಲಾ ಕ್ರೀಡಾಂಗಣದಲ್ಲಿ ಸೋಮವಾರ (ಫೆ‌.28) ನಡೆದ 3,972 ಕೋಟಿ ರೂ. ವೆಚ್ಚದ 238 KM ಉದ್ದದ 5 ರಾಷ್ಟ್ರೀಯ  ಹೆದ್ದಾರಿ ಯೋಜನೆ(5 Road Projects)ಗಳ ಶಂಕುಸ್ಥಾಪನೆ ಸಮಾರಂಭದ ಅಧ್ಯಕ್ಷತೆ ವಹಿಸಿ ಮಾತನಾಡಿದರು.


COMMERCIAL BREAK
SCROLL TO CONTINUE READING

ಕಿತ್ತೂರಿನಿಂದ ಬೆಳಗಾವಿ ಮೂಲಕ ಮಹಾರಾಷ್ಟ್ರ ಗಡಿಯವರೆಗಿನ ರಾಷ್ಟ್ರೀಯ ಹೆದ್ದಾರಿ ಪಕ್ಕದಲ್ಲಿ ‌ಸಂಪೂರ್ಣವಾಗಿ ಜಲಶಕ್ತಿ ಯೋಜನೆ(Jal Shakti Yojana)ಯನ್ನು ಅನುಷ್ಠಾನಗೊಳಿಸಲಾಗುವುದು. ಬೆಳಗಾವಿ ಜಿಲ್ಲೆಯಿಂದಲೇ ಆರಂಭಿಸಲಾಗುವ ಈ ಯೋಜನೆಯನ್ನು ಮುಂಬರುವ ದಿನಗಳಲ್ಲಿ ಇಡೀ ರಾಜ್ಯದಲ್ಲಿ ಅನುಷ್ಠಾನಗೊಳಿಸಲಾಗುವುದು ಅಂತಾ ಸಿಎಂ ಘೋಷಿಸಿದರು.


'ಬಿಜೆಪಿ ಸರ್ಕಾರ ಬರೀ ಕಾರ್ಪೊರೇಟ್ ಕಂಪನಿಗಳ ಪರ ಇದೆ'- ಸಿದ್ಧರಾಮಯ್ಯ


ರಾಜ್ಯದ ಎಲ್ಲಾ ಹೆದ್ದಾರಿ ಪಕ್ಕದಲ್ಲಿ ಜಲಶಕ್ತಿ ಯೋಜನೆ ಜಾರಿಗೊಳಿಸುವ ಮೂಲಕ ಅಭಿವೃದ್ಧಿಗೆ ಹೊಸ ಆಯಾಮ ಒದಗಿಸಲಾಗುವುದು ಎಂದ ಸಿಎಂ ಬೊಮ್ಮಾಯಿ, ಬೆಳಗಾವಿ ಸೇರಿದಂತೆ ರಾಜ್ಯದ ಇತರ ಕಡೆಯ ರಿಂಗ್ ರಸ್ತೆ(Ring Road)ಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕೆಂದು ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್ ಗಡ್ಕರಿ ಅವರಲ್ಲಿ ಮನವಿ ಮಾಡಿಕೊಂಡರು.


ಮಹಾರಾಷ್ಟ್ರದ ಪ್ರಸಿದ್ಧ ಸ್ಥಳಗಳಾದ ಪಂಢರಾಪುರ, ಶಿರಡಿ ಮತ್ತಿತರ ಧಾರ್ಮಿಕ ಸ್ಥಳಗಳನ್ನು ಕರ್ನಾಟಕ(Karnataka) ರಾಜ್ಯದ ಧಾರ್ಮಿಕ ಸ್ಥಳಗಳ ಜೊತೆ ಜೋಡಿಸಲು ವಿನೂತನ ಯೋಜನೆಯನ್ನು ನಿತಿನ್ ಗಡ್ಕರಿ ರೂಪಿಸಿದ್ದಾರೆ. ಎಲ್ಲಾ ಸಂಸದರು ತಮ್ಮ ವ್ಯಾಪ್ತಿಯ ಹೆದ್ದಾರಿಗಳು ಮತ್ತಿತರ ರಸ್ತೆ ಅಭಿವೃದ್ಧಿಗೆ ದುಂಬಾಲು ಬೀಳುವ ಮೂಲಕ ಇಡೀ ರಾಜ್ಯಕ್ಕೆ ಅತ್ಯುತ್ತಮ ಯೋಜನೆಗಳನ್ನು ತಂದಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಷಿಯವರ ನೆರವಿನಿಂದ ರಾಜ್ಯಕ್ಕೆ ಹಲವಾರು ಯೋಜನೆಗಳು ಲಭಿಸಿವೆ ಅಂತಾ ಸಿಎಂ ಸಂತಸ ವ್ಯಕ್ತಪಡಿಸಿದರು.


GST ವಿನಾಯಿತಿ ಬಗ್ಗೆ ಸಿಎಂ ಭರವಸೆ


ರಾಜ್ಯದಲ್ಲಿರುವ ಹೆದ್ದಾರಿಗಳು ಮತ್ತು ರಿಂಗ್ ರಸ್ತೆಯ ಅಭಿವೃದ್ಧಿಗಾಗಿ GST ವಿನಾಯಿತಿ, ಭೂಸ್ವಾಧೀನ ಮತ್ತಿತರ ಸಹಕಾರವನ್ನು ರಾಜ್ಯ ಸರ್ಕಾರ ನೀಡಲಿದೆ ಎಂದು ಸಿಎಂ ಬಸವರಾಜ್ ಬೊಮ್ಮಾಯಿ(Basavaraj Bommai) ಭರವಸೆ ನೀಡಿದರು. ರಸ್ತೆಗಳ ಅಭಿವೃದ್ಧಿ ಮಾತ್ರವಲ್ಲ ದೇಶದ ಭಾವೈಕ್ಯತೆಗೆ ಬೆಸುಗೆಯಾಗುವುದಾಗಿ ಅವರು ಹೇಳಿದರು.   


ಇದನ್ನೂ ಓದಿ:  BS Yediyurappa : 'ವಿಧಾನಸಭೆ ಅಧಿವೇಶನ ಬಳಿಕ ರಾಜ್ಯ ಪ್ರವಾಸ ಆರಂಭ ಮಾಡ್ತೇನೆ'


ಬೆಳಗಾವಿಯಲ್ಲಿ ರಸ್ತೆ ಸಂಪರ್ಕ ಕ್ರಾಂತಿ   


ಸಚಿವ ನಿತಿನ್ ಗಡ್ಕರಿ(Union Minister Nitin Gadkari) ಅವರು ಮಹಾರಾಷ್ಟ್ರದಲ್ಲಿ ಲೋಕೋಪಯೋಗಿ ಸಚಿವರಾಗಿದ್ದಾಗ ಒಂದೇ ಯೋಜನೆಯಡಿ 58ಕ್ಕೂ ಅಧಿಕ ಮೇಲ್ಸೆತುವೆ ನಿರ್ಮಿಸಿ ಇಡೀ ದೇಶದ ಗಮನ ಸೆಳೆದಿದ್ದರು. ಬೃಹತ್ ರಸ್ತೆ ಯೋಜನೆಗಳಿಗೆ ಸಮರ್ಪಕವಾಗಿ ಹಣ ಹೊಂದಿಸುವ ಮೂಲಕ ಮೂಲಸೌಕರ್ಯಗಳನ್ನು ಹೇಗೆ ಅಭಿವೃದ್ಧಿಪಡಿಸಬೇಕು ಎಂಬುದನ್ನು ಅವರು ದೇಶಕ್ಕೆ ತೋರಿಸಿಕೊಟ್ಟಿದ್ದಾರೆ. ರಾಜ್ಯದಲ್ಲಿ ಒಂದು ರಸ್ತೆ ಮೇಲ್ದರ್ಜೆಗೆ ಏರಿಸಲು ವರ್ಷಗಟ್ಟಲೇ ಸಮಯ ಬೇಕಾಗಿತ್ತು. ಆದರೆ ಗಡ್ಕರಿ‌ ಕಾಲದಲ್ಲಿ 5 ಸಾವಿರಕ್ಕೂ ಅಧಿಕ KM ರಸ್ತೆ ಅಭಿವೃದ್ಧಿಪಡಿಸಲಾಗಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.


ಕಾರ್ಯಕ್ರಮದಲ್ಲಿ ಸಚಿವರಾದ ಶಶಿಕಲಾ ಜೊಲ್ಲೆ, ಸಿ.ಸಿ.ಪಾಟೀಲ್(CC Patil), ವಿಧಾನಸಭೆ ಉಪಸಭಾಧ್ಯಕ್ಷ ಆನಂದ ಮಾಮನಿ, ಸಂಸದರಾದ ಮಂಗಳಾ ಅಂಗಡಿ, ಅಣ್ಣಾಸಾಹೇಬ್ ಜೊಲ್ಲೆ, ರಮೆಶ್ ಜಿಗಜಿಣಗಿ, ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ, ಶಾಸಕ ಬಸನಗೌಡ ಪಾಟೀಲ ಯತ್ನಾಲ್ ಮತ್ತಿತರರು ಉಪಸ್ಥಿತರಿದ್ದರು.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.