ಬೆಂಗಳೂರು: ನರೇಂದ್ರ ಮೋದಿಯವರನ್ನು  ಇನ್ನೊಮ್ಮೆ ಪ್ರಧಾನಿಯಾಗಿ ಮಾಡಿ ದೇಶವನ್ನು ಇನ್ನಷ್ಟು ಬಲಿಷ್ಟಗೊಳಿಸಬೇಕೆಂಬ ಬಯಕೆ ದೇಶಾದ್ಯಂತ ಇರುವಂತೆ  ಹಾವೇರಿ ಗದಗ ಕ್ಷೇತ್ರದ ಜನರಲ್ಲಿಯೂ ಇದೆ. ಹೀಗಾಗಿ ನನ್ನನ್ನು ಅತ್ಯಂತ ಹೆಚ್ಚು ಮತದಿಂದ ಗೆಲ್ಲಿಸಿ ಕಳಿಸುತ್ತಾರೆ ಎಂಬ ವಿಶ್ವಾಸ ಇದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.


COMMERCIAL BREAK
SCROLL TO CONTINUE READING

ಇದನ್ನೂ ಓದಿ: ಗಿಣಿರಾಮನ ಜೊತೆ ದಚ್ಚು ಮಡದಿ..! ವಿಜಯಲಕ್ಷ್ಮಿ ದರ್ಶನ್‌ ವಿಡಿಯೋ ವೈರಲ್‌


ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಜನರ ಆಶೀರ್ವಾದದಿಂದ ಕ್ಷೇತ್ರದ ಅಭಿವೃದ್ಧಿ ಯನ್ನು ಚಾಚೂ ತಪ್ಪದೇ ಮಾಡುತ್ತೇನೆ ಎಂದರು.ಮಾಜಿ ಡಿಸಿಎಂ ಈಶ್ವರಪ್ಪ ಕುರಿತು ಕೇಳಿದ ಪ್ರಶ್ಬೆಗೆ ಉತ್ತರಿಸಿದ ಅವರು, ಅವರು ಸುಮಾರು ಆರು ತಿಂಗಳಿಂದ ಆಕ್ಷೇತ್ರದಲ್ಲಿ ಓಡಾಡಿದ್ದಾರೆ‌. ನಾನು ಪಾರ್ಲಿಮೆಂಟರಿ ಬೋರ್ಡ್ ನಲ್ಲಿ ಕಾಂತೇಶ್ ಅವರಿಗೆ ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿ  ಟಿಕೆಟ್ ಕೊಡಬೇಕು ಎಂದು ಮನವಿ ಮಾಡಿದ್ದೆ. ಪಕ್ಷದ ರಾಷ್ಟ್ರೀಯ ನಾಯಕರು ಗೆಲುವಿನ ಲೆಕ್ಕಾಚಾರ ಇಟ್ಟುಕೊಂಡು ನನ್ನನ್ನು ಆಯ್ಕೆ ಮಾಡಿದ್ದಾರೆ. ಈಶ್ವರಪ್ಪ ಅವರು ಹಿರಿಯರಿದ್ದಾರೆ. ಪಕ್ಷ ಅವರಿಗೆ ಸೂಕ್ತ ಗೌರವ ನೀಡುತ್ತದೆ ಎನ್ನುವ ವಿಶ್ವಾಸ ಇದೆ. ಕುರುಬ ಸಮುದಾಯದೊಂದಿಗೆ ನನಗೆ ಉತ್ತಮ ಸಂಬಂಧ ಇದೆ ಎಂದು ಹೇಳಿದರು.


ಇದನ್ನೂ ಓದಿ: ನಟಿ ಪ್ರಿಯಾಂಕ ಚೋಪ್ರಾ ತಂಗಿ ನೋಡಿದ್ದೀರಾ? ಅಂದದಲ್ಲಿ ಬಾಲಿವುಡ್ ಬ್ಯೂಟಿಗಳೂ ಝೀರೋ...


ರಾಜಕಾರಣದಲ್ಲಿ ಅನುಭವದ ಜೊತೆಗೆ ಹೊಸ ಯುವಕರಿಗೆ ಅವಕಾಶ ಕೊಡಬೇಕೆಂಬ ಕಾರಣದಿಂದ ಹೊಸ ಮುಖಗಳಿಗೆ ನೀಡಿದ್ದಾರೆ. ಇದು ಬಿಜೆಪಿಯಲ್ಲಿ ಮಾತ್ರ ಸಾಧ್ಯ. ಬೆಂಗಳೂರು ಉತ್ತರದಲ್ಲಿ ಸದಾನಂದಗೌಡರು ಸ್ಪರ್ದಿಸಬೇಕೆಂಬುದು ಅಲ್ಲಿನ ಕ್ಷೇತ್ರದ ಕಾರ್ಯಕರ್ತರ ಅಭಿಪ್ರಾಯ ಇತ್ತು. ಅವರೂ ಮತ್ತು ಈಶ್ವರಪ್ಪ ಅವರ ಬಗ್ಗೆ ಪಕ್ಷದ ರಾಷ್ಟ್ರೀಯ ನಾಯಕರು ಒಳ್ಳೆಯ ಅವಕಾಶ ನೀಡುವ ಸಾಧ್ಯತೆ ಇದೆ. ಜಗದೀಶ್ ಶೆಟ್ಟರ್ ಅವರು ನಮ್ಮ ಪಕ್ಷದ ನಾಯಕರು ಪಕ್ಷದಲ್ಲಿ ಯಾವುದೇ ಒಳ ಹೊಡೆತ ಆಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.


ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ