Good News: ನವರಾತ್ರಿಗೆ ಬಂಪರ್ ಆಫರ್ ಘೋಷಿಸಿದ KSRTC

ನವರಾತ್ರಿ ಉತ್ಸವದ ಪ್ರಯುಕ್ತ ಪ್ರವಾಸಿಗರು ಮತ್ತು ಭಕ್ತರ ಅನುಕೂಲಕ್ಕಾಗಿ ಕೆಎಸ್ಆರ್​ಟಿಸಿ ಇದೇ ಮೊದಲ ಬಾರಿಗೆ ಮಂಗಳೂರು ಟೂರ್ ಪ್ಯಾಕೇಜ್ ಪರಿಚಯಿಸಿದೆ.

Written by - Puttaraj K Alur | Last Updated : Sep 26, 2022, 10:23 AM IST
  • ನವರಾತ್ರಿ ಪ್ರಯುಕ್ತ ಪ್ರವಾಸಿಗರು ಮತ್ತು ಭಕ್ತರ ಅನುಕೂಲಕ್ಕಾಗಿ KSRTCಯಿಂದ ಟೂರ್ ಪ್ಯಾಕೇಜ್
  • KSRTCಮಂಗಳೂರು ವಿಭಾಗದಿಂದ ‘ಮಂಗಳೂರು ದಸರಾ ದರ್ಶನ’ಕ್ಕಾಗಿ ಪ್ಯಾಕೇಜ್ ಟೂರ್ ಆಯೋಜನೆ
  • ಸೆ.26ರಿಂದ ಅ.5ರವರೆಗೆ ನವರಾತ್ರಿ ಹಬ್ಬದ ಎಲ್ಲಾ ದಿನ 1 ದಿನದ ಪ್ರವಾಸ ಪ್ಯಾಕೇಜ್
Good News: ನವರಾತ್ರಿಗೆ ಬಂಪರ್ ಆಫರ್ ಘೋಷಿಸಿದ KSRTC title=
KSRTCಯಿಂದ ಟೂರ್ ಪ್ಯಾಕೇಜ್

ಬೆಂಗಳೂರು: ಕರ್ನಾಟಕ ಸೇರಿ ದೇಶದಾದ್ಯಂತ ಇಂದಿನಿಂದ ಸಡಗರ-ಸಂಭ್ರಮದ ನವರಾತ್ರಿ ಉತ್ಸವ ಪ್ರಾರಂಭವಾಗಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಇಂದು ನಾಡಹಬ್ಬ ಮೈಸೂರು ದಸರಾವನ್ನು ಉದ್ಘಾಟಿಸಲಿದ್ದಾರೆ. ದಸರಾ ಹಬ್ಬದ ಪ್ರಯುಕ್ತ ಪ್ರವಾಸಿಗರು ಮತ್ತು ಭಕ್ತರ ಅನುಕೂಲಕ್ಕಾಗಿ ಕೆಎಸ್ಆರ್​ಟಿಸಿ ಇದೇ ಮೊದಲ ಬಾರಿಗೆ ಅತ್ಯುತ್ತಮ ಟೂರ್ ಪ್ಯಾಕೇಜ್ ಪರಿಚಯಿಸಿದೆ.

ಹೌದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ (KSRTC) ಮಂಗಳೂರು ವಿಭಾಗವು ಮಂಗಳೂರು ದಸರಾ ದರ್ಶನಕ್ಕಾಗಿ ಪ್ಯಾಕೇಜ್ ಟೂರ್ ಆಯೋಜಿಸಿದೆ. ಸೆಪ್ಟೆಂಬರ್ 26ರಿಂದ ಅಕ್ಟೋಬರ್ 5ರವರೆಗೆ ನವರಾತ್ರಿ ಹಬ್ಬದ ಎಲ್ಲಾ ದಿನಗಳಲ್ಲಿ 1 ದಿನದ ಪ್ರವಾಸ ಪ್ಯಾಕೇಜ್ ಇದಾಗಿದೆ. ಈ ಟೂರ್ ಪ್ಯಾಕೇಜ್‍ನಲ್ಲಿ ಪ್ರವಾಸಿಗರು ದಕ್ಷಿಣ ಕನ್ನಡ ಜಿಲ್ಲೆಯ 9 ಪ್ರಮುಖ ದೇವಾಲಯಗಳ ದರ್ಶನ ಮಾಡಬಹುದಾಗಿದೆ.

ಇದನ್ನೂ ಓದಿ: Video : ಚಿರತೆ ಮರಿ ಸೆರೆ ಹಿಡಿದು ಅರಣ್ಯ ಇಲಾಖೆ ಅಧಿಕಾರಿಗಳಿಗೆ ಒಪ್ಪಿಸಿದ ಗ್ರಾಮಸ್ಥರು!

ಪ್ರವಾಸಿಗರು ಮತ್ತು ಯಾತ್ರಾರ್ಥಿಗಳು ಟಿಕೆಟ್ ಕಾಯ್ದಿರಿಸಿ ನವರಾತ್ರಿಯ ಸಮಯದಲ್ಲಿ ಕರಾವಳಿ ಜಿಲ್ಲೆಯ ಪ್ರಮುಖ ದೇವಾಲಯಗಳಿಗೆ ಭೇಟಿ ನೀಡಬಹುದು. ಈ ಬಗ್ಗೆ KSRTC ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿ ರಾಜೇಶ್ ಶೆಟ್ಟಿ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಈ ಪ್ರವಾಸ ಪ್ಯಾಕೇಜ್‍ನ ಭಾಗವಾಗಿ ಮಂಗಳಾದೇವಿ ದೇವಸ್ಥಾನ, ಪೊಳಲಿ ಶ್ರೀ ರಾಜರಾಜೇಶ್ವರಿ ದೇವಸ್ಥಾನ, ಗುರುಪುರದ ಸುಂಕದಕಟ್ಟೆ ಶ್ರೀ ಅಂಬಿಕಾ ಅನ್ನಪೂರ್ಣೇಶ್ವರಿ ದೇವಸ್ಥಾನ, ಕಟೀಲು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಬಪ್ಪನಾಡು ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಸಸಿಹಿತ್ಲು ಶ್ರೀ ಭಗವತಿ ದೇವಸ್ಥಾನ ಮತ್ತು ಕಡಲತೀರಗಳ ದರ್ಶನ ಮಾಡಬಹುದಾಗಿದೆ.

ಮಂಗಳೂರು ದಸರಾ ಮಹೋತ್ಸವದ ಅಂಗವಾಗಿ ಪ್ರವಾಸಿಗರು ನವದುರ್ಗೆಯರ ವಿಗ್ರಹಗಳನ್ನು ಪ್ರತಿಷ್ಠಾಪಿಸುವ ಚಿತ್ರಾಪುರ ಶ್ರೀ ದುರ್ಗಾಪರಮೇಶ್ವರಿ ದೇವಸ್ಥಾನ, ಉರ್ವ ಶ್ರೀ ಮಾರಿಯಮ್ಮ ದೇವಸ್ಥಾನ ಮತ್ತು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನಗಳ ದರ್ಶನ ಸಹ ಪಡೆಯಬಹುದಾಗಿದೆ. ಈ ಟೂರ್ ಪ್ಯಾಕೇಜ್‍ಗೆ ದೊಡ್ಡವರಿಗೆ 300 ರೂ. ಮತ್ತು ಮಕ್ಕಳಿಗೆ 250 ರೂ. ಶುಲ್ಕ ನಿಗದಿಪಡಿಸಲಾಗಿದೆ. ಆಸಕ್ತ ಪ್ರವಾಸಿಗರು KSRTC ವೆಬ್‍ಸೈಟ್‍ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆದುಕೊಳ್ಳಬಹುದಾಗಿದೆ.  

ಇದನ್ನೂ ಓದಿ: "ಪೇ ಸಿಎಂ ಅಭಿಯಾನವನ್ನು ಕಾಂಗ್ರೆಸ್ ದಯವಿಟ್ಟು ಮಾಡಲಿ. ನಾವು ಅದನ್ನು ಸ್ವಾಗತಿಸುತ್ತೇವೆ"

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News