Basavaraja Bommai : `ಉಕ್ರೇನ್ ನಿಂದ ಸೋಮವಾರ ನವೀನ್ ಪಾರ್ಥಿವ ಶರೀರ ಬೆಂಗಳೂರಿಗೆ`
ಇಂದು ಅಂತರರಾಜ್ಯ ಜಲ ವಿವಾದ ಕುರಿತು ಸರ್ವ ಪಕ್ಷ ಸಭೆ ನಡೆಸಿದ ಬಳಿಕ ಸುದ್ದಿಗಾರಿಗೆ ಈ ಕುರಿತು ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ(Basavaraja Bommai), ಅಂದು ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿನ ಇಂಟರ್ನ್ಯಾಷನಲ್ ಏರ್ಪೋರ್ಟ್ ಗೆ ಬರಲಿದೆ ಎಂದು ತಿಳಿಸಿದ್ದಾರೆ.
ಬೆಂಗಳೂರು : ಇತ್ತೀಚೆಗೆ ಉಕ್ರೇನ್ ನಲ್ಲಿ ರಷ್ಯಾ ದಾಳಿ ಸಂದರ್ಭದಲ್ಲಿ ಮೃತ ಪಟ್ಟ ಹಾವೇರಿ ಜಿಲ್ಲೆಯ ಯುವಕ ನವೀನ್ ಗ್ಯಾನಗೌಡರ್ ಅವರ ಪಾರ್ಥಿವ ಶರೀರ ಸೋಮವಾರ ಬೆಂಗಳೂರಿಗೆ ಆಗಮಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಇಂದು ಅಂತರರಾಜ್ಯ ಜಲ ವಿವಾದ ಕುರಿತು ಸರ್ವ ಪಕ್ಷ ಸಭೆ ನಡೆಸಿದ ಬಳಿಕ ಸುದ್ದಿಗಾರಿಗೆ ಈ ಕುರಿತು ಮಾಹಿತಿ ನೀಡಿದ ಸಿಎಂ ಬೊಮ್ಮಾಯಿ(Basavaraja Bommai), ಅಂದು ಬೆಳಗಿನ ಜಾವ 3 ಗಂಟೆಗೆ ಬೆಂಗಳೂರಿನ ಇಂಟರ್ನ್ಯಾಷನಲ್ ಏರ್ಪೋರ್ಟ್ ಗೆ ಬರಲಿದೆ ಎಂದು ತಿಳಿಸಿದ್ದಾರೆ.
ಇದನ್ನೂ ಓದಿ : DK Shivakumar : 'ಮೇಕೆದಾಟು ಯೋಜನೆ ಅನುಷ್ಠಾನಕ್ಕೆ ಬೇಕಿರುವುದು ರಾಜಕೀಯ ಇಚ್ಛಾಶಕ್ತಿ'
ನವೀನ್(Naveen Gyanagoudar) ಸೆಲ್ ದಾಳಿಗೆ ಮೃತನಾಗಿ ಈಗಾಗಲೇ ಹದಿನೈದಕ್ಕೂ ಹೆಚ್ಚು ದಿನಗಳು ಕಳೆದಿವೆ. ಆದರೆ, ಅವರ ಪಾರ್ಥಿವ ಶರೀರ ಮಾತ್ರ ಇದುವರೆಗೂ ಬಂದಿಲ್ಲ. ಅವರ ಪಾರ್ಥಿವ ಶರೀರವನ್ನು ಉಕ್ರೇನ್ನಿಂದ ತರಿಸುವ ಸಂಬಂಧ ಸರ್ಕಾರ ಕೇಂದ್ರಕ್ಕೆ ಒತ್ತಾಯ ಹಾಕಿದೆ. ಕೇಂದ್ರ ಕೂಡ ಎಲ್ಲಾ ಪ್ರಯತ್ನ ನಡೆಸುತ್ತಿದೆ. ಉಕ್ರೇನ್ನಲ್ಲಿ ಯುದ್ಧ ಪರಿಸ್ಥಿತಿ ಭೀಕರವಾಗಿದ್ದು, ಅವರ ಶರೀರ ರವಾನೆಗೆ ಉಕ್ರೇನ್ ಅಧಿಕಾರಿಗಳ ಜೊತೆ ರಾಯಭಾರಿ ಕಚೇರಿ ಸಿಬ್ಬಂದಿಗಳು ಚರ್ಚೆ ನಡೆಸುತ್ತಿದ್ದಾರೆ ಎಂದು ಕಳೆದ ಎರಡು ದಿನಗಳ ಹಿಂದೆ ಸಿಎಂ ಬೊಮ್ಮಾಯಿ ಸದನಕ್ಕೆ ತಿಳಿಸಿದ್ದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.