NDAಗೆ ಪೂರ್ಣ ಬಹುಮತ ದೊರಕಲ್ಲ, ಇಂಡಿಯಾ ಮೈತ್ರಿಗೆ ಬಹುಮತ ಸಿಗಲಿದೆ: ಸಿಎಂ ಸಿದ್ದರಾಮಯ್ಯ

Loksabha election 2024: ಡಾ.ಬಿ.ಆರ್.ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂಬುದು ಪ್ರಧಾನಿ ಮೋದಿಯವರ ಮನಸಿನ ಮಾತಾಗಿದ್ದರೆ ಸಂವಿಧಾನ ಬದಲಿಸುತ್ತೇವೆಂದ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ಎಂದು ಸಿಎಂ ಸಿದ್ದರಾಮಯ್ಯ ಪ್ರಶ್ನಿಸಿದ್ದಾರೆ.

Written by - Puttaraj K Alur | Last Updated : Apr 13, 2024, 07:40 PM IST
  • ಬಿಜೆಪಿ ನೇತೃತ್ವದ NDA ಮೈತ್ರಿಕೂಟಕ್ಕೆ ಪೂರ್ಣ ಬಹುಮತ ದೊರಕುವುದಿಲ್ಲ
  • ಬಿಜೆಪಿಯ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ
  • ಪ್ರಧಾನಿ ಮೋದಿ ಮತ್ತು ಬಿಜೆಪಿಯ ವಿರುದ್ಧ ಗುಡುಗಿದ ಸಿಎಂ ಸಿದ್ದರಾಮಯ್ಯ
NDAಗೆ ಪೂರ್ಣ ಬಹುಮತ ದೊರಕಲ್ಲ, ಇಂಡಿಯಾ ಮೈತ್ರಿಗೆ ಬಹುಮತ ಸಿಗಲಿದೆ: ಸಿಎಂ ಸಿದ್ದರಾಮಯ್ಯ title=
ಪ್ರಧಾನಿ ಮೋದಿ ವಿರುದ್ಧ ಸಿದ್ದರಾಮಯ್ಯ ಆಕ್ರೋಶ!

ಬೆಂಗಳೂರು: ಬಿಜೆಪಿ ನೇತೃತ್ವದ NDA ಮೈತ್ರಿಕೂಟಕ್ಕೆ ಪೂರ್ಣ ಬಹುಮತ ದೊರಕುವುದಿಲ್ಲ, ಬಿಜೆಪಿಯ ವಿರುದ್ಧವಿರುವ ಇಂಡಿಯಾ ಮೈತ್ರಿಗೆ ಬಹುಮತ ದೊರೆಯಲಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ಬಗ್ಗೆ ಶನಿವಾರ ಮಾತನಾಡಿರುವ ಅವರು, ʼಲೋಕಸಭಾ ಚುನಾವಣೆಯಲ್ಲಿ ನಾವು 400ಕ್ಕೂ ಹೆಚ್ಚು ಸ್ಥಾನ ಪಡೆಯುವುದಾಗಿ ಹೇಳಿಕೊಳ್ಳುತ್ತಿರುವ ಬಿಜೆಪಿಯದ್ದು ಜನರ ದಾರಿತಪ್ಪಿಸುವ ಕಾರ್ಯತಂತ್ರವಾಗಿದೆʼ ಎಂದು ಟೀಕಿಸಿದ್ದಾರೆ.

ಪ್ರಧಾನಿ ಮೋದಿಯವರು ಕರ್ನಾಟಕಕ್ಕೆ ಬಂದು ಹೋಗಲು ನನ್ನದೇನೂ ತಕರಾರಿಲ್ಲ. ಕರ್ನಾಟಕಕ್ಕೆ ಏನು ಮಾಡಿದ್ದಾರೆ ಎಂದು ರಾಜ್ಯದ ಜನತೆಗೆ ಹೇಳಬೇಕು. ನಿರುದ್ಯೋಗ ಯಾಕೆ ಮಿತಿಮೀರಿದೆ? ತೆರಿಗೆ ಹಂಚಿಕೆಯಲ್ಲಿ ರಾಜ್ಯಕ್ಕೆ ಯಾಕೆ ಅನ್ಯಾಯವಾಗುತ್ತಿದೆ? ಬರಗಾಲಕ್ಕೆ ಇಂದಿನವರೆಗೂ ಯಾಕೆ ಪರಿಹಾರ ನೀಡಿಲ್ಲ? ಎಂಬುದಕ್ಕೆಲ್ಲಾ ಉತ್ತರ ಹೇಳಲಿ ಎಂದು ಸಿದ್ದರಾಮಯ್ಯ ಆಗ್ರಹಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಚುನಾವಣೆಯಲ್ಲಿ ಗೆಲ್ಲುವ ಅಭ್ಯರ್ಥಿ ಕುರಿತು ಭವಿಷ್ಯ ನುಡಿದ ಗಿಳಿ, ಜೋತಿಷಿ ಅಂದರ್!

ಡಾ.ಬಿ.ಆರ್.ಅಂಬೇಡ್ಕರ್ ಬಂದರೂ ಸಂವಿಧಾನ ಬದಲಿಸಲು ಸಾಧ್ಯವಿಲ್ಲ. ಬಿಜೆಪಿ ಸಂವಿಧಾನದ ಪರವಾಗಿದೆ ಎಂಬುದು ಪ್ರಧಾನಿ ಮೋದಿಯವರ ಮನಸಿನ ಮಾತಾಗಿದ್ದರೆ ಸಂವಿಧಾನ ಬದಲಿಸುತ್ತೇವೆ ಎಂದ ಅನಂತಕುಮಾರ್ ಹೆಗಡೆ ಮೇಲೆ ಕ್ರಮ ಯಾಕೆ ತೆಗೆದುಕೊಂಡಿಲ್ಲ? ಅವರನ್ನು ಪಕ್ಷದಿಂದ ಅಥವಾ ಮಂತ್ರಿ ಸ್ಥಾನದಿಂದ ಕೈಬಿಟ್ಟರೇ? ಉತ್ತರ ಕನ್ನಡದಲ್ಲಿ ೫ ವರ್ಷಗಳಿಂದ ಏನೂ ಕೆಲಸ ಮಾಡದೇ ಮನೆಯಲ್ಲಿ ಕುಳಿತಿದ್ದರು. ಕೊನೆಯ 3-4 ತಿಂಗಳು ಬಂದು ಭಾಷಣ ಮಾಡಿದರು. ಟಿಕೆಟ್ ಕೊಟ್ಟರೆ ಸೋಲುತ್ತಾರೆ ಎಂಬ ವರದಿ ಬಂದಿದ್ದಕ್ಕೆ ಅನಂತಕುಮಾರ್ ಅವರಿಗೆ ಟಿಕೆಟ್ ಕೊಟ್ಟಿಲ್ಲ. ಬಿಜೆಪಿ ಯಾವತ್ತೂ ಸಂವಿಧಾನದ ಪರವಾಗಿಲ್ಲ. ಸಂವಿಧಾನ ಜಾರಿಯಾದಾಗ ವಿನಾಯಕ ದಾಮೋದರ್ ಸಾವರ್ಕರ್ ಹಾಗೂ ಎಂ.ಎಸ್.ಗೋಲ್ವಾಲ್ಕರ್ ಅವರು ಸಂವಿಧಾನವನ್ನು ವಿರೋಧಿಸಿದ್ದರುʼ ಎಂದು ಸಿದ್ದರಾಮಯ್ಯ ಕುಟುಕಿದ್ದಾರೆ.

ಬೆಂಗಳೂರಿನ ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ಪ್ರಮುಖ ಆರೋಪಿಗಳನ್ನು ಬಂಧಿಸಿರುವ NIA ತಂಡ ಮತ್ತು ಕರ್ನಾಟಕ ಪೊಲೀಸರ ಕಾರ್ಯ ಶ್ಲಾಘನೀಯ. ಆರೋಪಿಗಳನ್ನು ಕೋಲ್ಕತ್ತಾದಿಂದ ಬೆಂಗಳೂರಿಗೆ ಕರೆ ತಂದ ನಂತರ ವಿಚಾರಣೆ ಮಾಡಿ ಹೆಚ್ಚಿನ ವಿವರ ಪಡೆಯಲಾಗುವುದು ಎಂದು ಇದೇ ವೇಳೆ ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದನ್ನೂ ಓದಿ: Lok Sabha Election 2024: ಚುನಾವಣಾ ಪ್ರಚಾರದ ವೇಳೆ ಯುವತಿಗೆ ಮುತ್ತು ಕೊಟ್ಟ ಬಿಜೆಪಿ ಅಭ್ಯರ್ಥಿ, ಆಡಳಿತಾರೂಢ ಪಕ್ಷ ಹೇಳಿದ್ದೇನು?

ನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

Trending News