ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ದಿನೇ ದಿನೇ ಕರೋನಾವೈರಸ್ (Coronavirus) ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಮಾಡಬೇಕು ಎಂಬ ಕೂಗು ಹೆಚ್ಚಾಗಿ ಕೇಳಿಬರುತ್ತಿದ್ದು ಈ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ (BS Yediyurappa) ನೇತೃತ್ವದಲ್ಲಿ ಇಂದು ಬೆಳಿಗ್ಗೆ 11 ಗಂಟೆಗೆ ವಿಧಾನಸೌದದಲ್ಲಿ ಮಹತ್ವದ ಸಚಿವ ಸಂಪುಟ ಸಭೆ ನಡೆಯಲಿದೆ.


COMMERCIAL BREAK
SCROLL TO CONTINUE READING

ರಾಜ್ಯ ರಾಜಧಾನಿಯಲ್ಲಿ ಒಂದೆಡೆ ನಿತ್ಯ ಕೋವಿಡ್-19 (COVID -19) ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ. ಇನ್ನೊಂದೆಡೆ ಟಾಸ್ಕ್ ಫೋರ್ಸ್ ನ ತಜ್ಞರಿಂದಲೂ ಆತಂಕದ ವರದಿ ಬಂದಿದ್ದು ಕಮ್ಯುನಿಟಿ ಸ್ಪ್ರೆಡ್ ಆಗಿರುವ ಬಗ್ಗೆ ಉಲ್ಲೇಖಿಸಿದ್ದು ಎಲ್ಲರ ಆತಂಕ ಹೆಚ್ಚಿಸಿದೆ. ಈಗಾಗಲೇ ಬೆಂಗಳೂರಿನ ಶಾಸಕರು ನಗರದಲ್ಲಿ ಲಾಕ್‌ಡೌನ್‌ ಜಾರಿಗೊಳಿಸುವುದರ ಬಗ್ಗೆ ಒತ್ತಡ ಹೇಳಿದ್ದಾರೆ. 


ವ್ಯಾಪಕ ವಿರೋಧದ ನಡುವೆಯೂ ಇಂದಿನಿಂದ ಮಕ್ಕಳ ಜೀವ ಒತ್ತೆ ಇಟ್ಟು SSLC ಪರೀಕ್ಷೆ ಆರಂಭ


ಇಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಈ ಎಲ್ಲದರ ಬಗ್ಗೆಯೂ ಕೂಲಂಕುಷವಾಗಿ ಸಮಾಲೋಚನೆ ನಡೆಸಿ ಬೆಂಗಳೂರಿನಲ್ಲಿ ಮತ್ತೆ ಲಾಕ್‌ಡೌನ್ (Lockdown)‌ ಮಾಡಬೇಕಾ ಅಥವಾ ಕರೋನಾವೈರಸ್ ಪ್ರಕರಣಗಳು ಹೆಚ್ಚಿರುವ ಕೆಲ ಪ್ರದೇಶಗಳನ್ನು ಸೀಲ್ ಡೌನ್ ಮಾಡಬೇಕಾ ಎಂಬುದರ ಬಗ್ಗೆ ಮಹತ್ವದ ನಿರ್ಧಾರ ಹೊರಬೀಳಲಿದೆ.


ಇದಲ್ಲದೆ ಬೆಂಗಳೂರು ಸೇರಿದಂತೆ ಉಳಿದ ಜಿಲ್ಲೆಗಳಲ್ಲಿ ಕೂಡ ಕರೋನಾ ಸೋಂಕು ಹರಡುವುದನ್ನು ತಡೆಯುವ ನಿಟ್ಟಿನಲ್ಲಿ ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್-19 (Covid-19) ಚಿಕಿತ್ಸೆಗೆ ದರ ನಿಗದಿ ಹಾಗೂ ಆಸ್ಪತ್ರೆಗಳಿಗೆ ಬೆಡ್, ವೆಂಟಿಲೇಟರ್ ಗಳನ್ನೂ ಒದಗಿಸುವುದು ಸೇರಿದಂತೆ ಕರೋನಾ ಚಿಕಿತ್ಸೆಗೆ ಅಗತ್ಯ ಕ್ರಮ ಕೈಗೊಳ್ಳುವ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ.