ನೀಟ್ ಪರೀಕ್ಷೆ ಅಕ್ರಮ ಬಹುದೊಡ್ಡ ಹಗರಣ: ಸಚಿವ ಶರಣಪ್ರಕಾಶ್ ಪಾಟೀಲ್
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ನೀಟ್ ಪರೀಕ್ಷೆಯಲ್ಲಿ ಹೊಸ ಹೊಸ ಪ್ರಕರಣಗಳು ಆಚೆಗೆ ಬರುತ್ತಿವೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ಆಶ್ಚರ್ಯ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ರಾಯಚೂರು: ವೈದ್ಯಕೀಯ ಪ್ರವೇಶಾತಿಗೆ ನಡೆಯುವ ನೀಟ್ ಪರೀಕ್ಷೆಯಲ್ಲಿ ಭಾರೀ ಅಕ್ರಮ ನಡೆದಿರುವುದು ಬೆಳಕಿಗೆ ಬಂದಿದ್ದು, ಪ್ರಧಾನಿ ನರೇಂದ್ರ ಮೋದಿ ಸರ್ಕಾರದ ಬಹುದೊಡ್ಡ ಹಗರಣ ಇದಾಗಿದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಆರೋಪಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಿನದಿಂದ ದಿನಕ್ಕೆ ನೀಟ್ ಪರೀಕ್ಷೆಯಲ್ಲಿ ಹೊಸ ಹೊಸ ಪ್ರಕರಣಗಳು ಆಚೆಗೆ ಬರುತ್ತಿವೆ. ಕೇಂದ್ರ ಸರ್ಕಾರದ ವೈಫಲ್ಯಗಳಿಂದಾಗಿ ಇತಿಹಾಸದಲ್ಲಿ ಮೊದಲ ಬಾರಿಗೆ ನೀಟ್ ಪರೀಕ್ಷೆಯಲ್ಲೂ ಅಕ್ರಮ ನಡೆದಿರುವುದು ಆಶ್ಚರ್ಯ ತಂದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದನ್ನೂ ಓದಿ: ಬಾಲಿವುಡ್ ನಟಿಯರಿಗಿಂತಲೂ ಬ್ಯೂಟಿಫುಲ್ ಸೂರ್ಯಕುಮಾರ್ ಯಾದವ್ ಪತ್ನಿ! ಈಕೆಯ ಡ್ಯಾನ್ಸ್ ನೋಡಿಯೇ ಲವ್ವಲ್ಲಿ ಬಿದ್ದ ಭಾರತದ ಮಿ.360
ನೀಟ್-ಯುಜಿ ಹಾಗೂ ಯುಜಿಸಿ-ನೆಟ್ ಪರೀಕ್ಷೆಯಲ್ಲಿ ನಡೆದಿರುವ ಅಕ್ರಮಗಳನ್ನು ನಿಷ್ಪಕ್ಷಪಾತವಾಗಿ ತನಿಖೆ ನಡೆಸಬೇಕೆಂದು ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತವೆ. ಆದರೂ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸದಿರುವುದು ಅತ್ಯಂತ ನೋವಿನ ಸಂಗತಿ ಎಂದು ವಿಷಾದಿಸಿದರು.
ಕೇಂದ್ರ ಸರ್ಕಾರದ ನಡೆವಳಿಕೆಗಳನ್ನು ಸೂಕ್ಷ್ಮವಾಗಿ ಗಮನಿಸಿದರೆ ಯಾರನ್ನೋ ರಕ್ಷಣೆ ಮಾಡಲು ಹೊರಟಂತಿದೆ. ಇದರಲ್ಲಿ ಪಕ್ಷ ರಾಜಕಾರಣ ಬೇಡವೇ ಬೇಡ. ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಅಡಗಿರುವುದರಿಂದ ಸಿಬಿಐ ತನಿಖೆಗೆ ವಹಿಸಬೇಕು, ಯಾರೇ ಭಾಗಿಯಾಗಿದ್ದರೂ ಕಾನೂನಿನ ಪ್ರಕಾರ ಶಿಕ್ಷೆಯಾಗಲಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರದಾನ್ ಬೇಜಾವಬ್ದಾರಿಯಿಂದ ವರ್ತಿಸುತ್ತಿದ್ದಾರೆ ಎಂದು ಸಚಿವ ಶರಣಪ್ರಕಾಶ್ ಪಾಟೀಲ್ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರದ ನಿಲುವುಗಳು ಬಹಳ ಅನುಮಾನಸ್ಪದವಾಗಿ ಕಾಣುತ್ತಿದೆ. ದೊಡ್ಡ ಮಟ್ಟದ ಹಗರಣವಾಗಿದೆ ಎಂದು ಪಕ್ಷಾತೀತವಾಗಿ ಬೀದಿಗಿಳಿದು ವಿದ್ಯಾರ್ಥಿಗಳು ಸೇರಿದಂತೆ ಅನೇಕರು ಹೋರಾಟ ಮಾಡುತ್ತಿದ್ದಾರೆ. ಎರಡೂ ಪ್ರಕರಣಗಳನ್ನು ಸಿಬಿಐ ತನಿಖೆಗೆ ವಹಿಸಬೇಕೆಂಬುದು ಬಹುತೇಕ ರಾಜ್ಯಗಳ ಒಕ್ಕೋರಲಿನ ಬೇಡಿಯಾಗಿದೆ. ಈ ಮನವಿಯನ್ನು ಪರಿಷ್ಕರಿಸದೆ ಮೌನಕ್ಕೆ ಜಾರಿಯಾಗಿರುವುದನ್ನು ಗಮನಿಸಿದರೆ ಕೇಂದ್ರದ ಮೇಲೆ ಸಂಶಯಾಸ್ಪದವಾಗಿದೆ ಎಂದು ಅನುಮಾನ ವ್ಯಕ್ತಪಡಿಸಿದರು.
ದೇಶದ 24 ಲಕ್ಷ ಮಕ್ಕಳು ಪರೀಕ್ಷೆ ಬರೆದಿದ್ದಾರೆ.. ಅವರ ಭವಿಷ್ಯದ ಜೊತೆ ಮೋದಿ ಸರ್ಕಾರ ಚೆಲ್ಲಾಟ ಆಡುತ್ತಿದೆ. ತಿರಸ್ಕಾರ ಮಾಡಲು ಕಾನೂನಿನಲ್ಲಿ ಅವಕಾಶ ಇಲ್ಲ. ನೀಟ್ ನಡೆಸುವ ವಿಚಾರದಲ್ಲಿ ಸುಪ್ರೀಂಕೋರ್ಟ್ ತೀರ್ಪು ಇದೆ. ಕೇಂದ್ರ ಸರ್ಕಾರದ ಕಾಯಿದೆಯಿಂದ ನೀಟ್ ಬಂದಿದೆ. ಹಾಗಾಗಿ ನೀಟ್ ರದ್ದು ಮಾಡಲು ಸುಪ್ರೀಂಕೋರ್ಟ್ ತೀರ್ಪು ಆಗಬೇಕು ಎಂದು ಹೇಳಿದರು.
ಇದನ್ನೂ ಓದಿ: ಟೆನ್ನಿಸ್ ತಾರೆ ಸಾನಿಯಾ ಮಿರ್ಜಾಗೆ ಈ ಕ್ರಿಕೆಟಿಗನೆಂದರೆ ಪಂಚಪ್ರಾಣ: ಮೂಗುತಿ ಸುಂದರಿ ಮನಗೆದ್ದವ ಬೇರಾರು ಅಲ್ಲ…
ತಮಿಳುನಾಡು ಸರ್ಕಾರ ಅದರ ಭಾವನೆ ಹೇಳಿದೆ. ನಾವು ಕರ್ನಾಟಕದಲ್ಲಿ ಇದೇ ರೀತಿ ಮಾಡಬೇಕಾದರೆ ಕಾನೂನು ಹೋರಾಟ ಮಾಡಬೇಕಾಗುತ್ತದೆ. ಸುಪ್ರೀಂಕೋರ್ಟ್ ಸಹ ಕೇಂದ್ರ ಸರ್ಕಾರಕ್ಕೆ ನಿಮ್ಮ ತಪ್ಪು ಇದ್ದರೆ ಒಪ್ಪಿಕೊಳ್ಳಿ ಎಂದು ಸ್ಪಷ್ಟವಾಗಿ ಹೇಳಿದೆ ಎಂದು ಸ್ಪಷ್ಟಪಡಿಸಿದರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ