ಬೆಂಗಳೂರು: 2021ರಲ್ಲಿ ವೈದ್ಯಕೀಯ, ದಂತ ವೈದ್ಯಕೀಯ ಮತ್ತು ಆಯುಷ್ ಕೋರ್ಸುಗಳ ಪ್ರವೇಶಾತಿಗೆಂದು ನಡೆಸಿದ್ದ ನೀಟ್ ಪರೀಕ್ಷೆಯನುಸಾರ ಮೊದಲನೇ ಸುತ್ತಿನ ಸೀಟು ಹಂಚಿಕೆ ಕೌನ್ಸೆಲಿಂಗ್ ವೇಳಾಪಟ್ಟಿ ಪ್ರಕಟವಾಗಿದ್ದು, ಶನಿವಾರ ಸೀಟ್ ಮ್ಯಾಟ್ರಿಕ್ಸ್ ಮತ್ತು ಶುಲ್ಕ ವಿವರ ಪ್ರಕಟಿಸಲಾಗಿದ್ದು, ದೃಢೀಕರಣ ಚೀಟಿಯನ್ನು ಡೌನ್-ಲೋಡ್ ಮಾಡಿಕೊಳ್ಳುವ ಪ್ರಕ್ರಿಯೆಯೂ ಆರಂಭವಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ಇದನ್ನೂ ಓದಿ :"ಸಿದ್ದರಾಮಯ್ಯ ಅವರೆ, ನಮಗೆ ನಮ್ಮ ಜವಾಬ್ದಾರಿಯ ಅರಿವಿದೆ": ಸಿಎಂ ಬೊಮ್ಮಾಯಿ
ಈ ಬಗ್ಗೆ ಪ್ರಾಧಿಕಾರವು ಪತ್ರಿಕಾ ಪ್ರಕಟಣೆ ಹೊರಡಿಸಿದ್ದು, ಫೆ.4ರಂದು ಈ ಮೂರೂ ಕೋರ್ಸುಗಳಿಗೆ ಮೊದಲ ಸುತ್ತಿನ ಸೀಟು ಹಂಚಿಕೆಯನ್ನು ಪ್ರಕಟಿಸಲಾಗುವುದು. ಇದಕ್ಕೂ ಮೊದಲು ಫೆ.1ರ ಬೆಳಿಗ್ಗೆ 10 ಗಂಟೆಯವರೆಗೆ ವಿದ್ಯಾರ್ಥಿಗಳಿಗೆ ತಮ್ಮ ಇಷ್ಟದ ಐಚ್ಛಿಕ ವಿಷಯಗಳನ್ನು ಆಯ್ಕೆ ಮಾಡಿಕೊಳ್ಳಲು ಮತ್ತು ಫೆ.1ರಿಂದ 3ರ ಬೆಳಿಗ್ಗೆ 10 ಗಂಟೆಯವರೆಗೆ ತಮ್ಮ ಐಚ್ಛಿಕ ವಿಷಯಗಳಲ್ಲಿ ಅಗತ್ಯವೆನಿಸಿದರೆ ಬದಲಾವಣೆ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ ಎಂದು ಹೇಳಿದೆ.
ಇದನ್ನೂ ಓದಿ :ಹಸಿದವರ ಪಾಲಿನ ಅನ್ನದಾತ.. ನೂರಾರು ಜನರ ತುತ್ತಿನ ಚೀಲ ತುಂಬುವ ಮಹನೀಯನೀತ
ಬಳಿಕ ಚಾಯ್ಸ್-1 ಮತ್ತು ಚಾಯ್ಸ್-2 ಸ್ತರದ ವಿದ್ಯಾರ್ಥಿಗಳು ನಿಗದಿತ ಶುಲ್ಕ ತುಂಬಿ, ಪ್ರವೇಶ ದಾಖಲಾತಿಯನ್ನು ಡೌನ್-ಲೋಡ್ ಮಾಡಿಕೊಳ್ಳಲು ಫೆ.4ರ ಮಧ್ಯಾಹ್ನ 2 ಗಂಟೆಯಿಂದ ಫೆ.7ರ ಮಧ್ಯಾಹ್ನ 1 ಗಂಟೆಯವರೆಗೆ ಅವಕಾಶವಿರುತ್ತದೆ. ನಂತರ, ವಿದ್ಯಾರ್ಥಿಗಳು ಒಂದು ಸೆಟ್ ದೃಢೀಕೃತ ಪ್ರಮಾಣಪತ್ರಗಳೊಂದಿಗೆ ಮೂಲ ದಾಖಲೆಗಳನ್ನು ಫೆ.5ರಿಂದ 7ರ ಒಳಗೆ ಬೆಂಗಳೂರಿನಲ್ಲಿರುವ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ ಪರಿಶೀಲನೆಗೆ ಸಲ್ಲಿಸಬೇಕು ಎಂದು ಪ್ರಕಟಣೆ ವಿವರಿಸಿದೆ.
ಇದನ್ನೂ ಓದಿ : Rishabh Pant: ರಿಷಭ್ ಪಂತ್‌ನಿಂದ ಈ ಮೂವರು ಆಟಗಾರರ ವೃತ್ತಿಜೀವನಕ್ಕೆ ಕಂಟಕ..!
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.