ಬೆಂಗಳೂರು : ರಾಜ್ಯದಲ್ಲಿ ಕೊರೋನಾ ಆತಂಕ ಸೃಷ್ಟಿಸಿರುವ ಡೆಲ್ಟಾ ಪ್ಲಸ್ ಸೋಂಕಿನ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಹಾಗೂ ಕೇರಳದಿಂದ ರಾಜ್ಯಕ್ಕೆ ಬರುವ ಪ್ರಯಾಣಿಕರಿಗೆ RTPCR ನೆಗೆಟಿವ್ ರಿಪೋರ್ಟ್ ಕಡ್ಡಾಯ ಮಾಡಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಸುದ್ದಿಗಾರರೊಂದಿಗೆ ಮಾತನಾಡಿದ ಸಚಿವ ಸುಧಾಕರ್(K Sudhakar), ರಾಜ್ಯದಲ್ಲಿ ಇಬ್ಬರಲ್ಲಿ ಡೆಲ್ಟಾ ಪ್ಲಸ್ ಸೋಂಕು ದೃಢಪಟ್ಟಿದ್ದು, 600 ಕ್ಕೂ ಹೆಚ್ಚು ಸ್ಯಾಂಪಲ್ಸ್ ಗಳನ್ನು ಜಿನೋಮಿಕ್ ಸ್ವೀಕ್ಸಿಂಗ್ ಟೆಸ್ಟ್ ಗೆ ಕಳುಹಿಸಲಾಗಿದೆ. ಅದರ ವರದಿ ಇಂದು ಬರಲಿದೆ ಎಂದು ಹೇಳಿದ್ದಾರೆ.


ಇದನ್ನೂ ಓದಿ : Ration Card E-KYC : ಹೊಸದಾಗಿ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದವರಿಗೆ ಮಹತ್ವದ ಮಾಹಿತಿ!


ಇನ್ನು ಮಹಾರಾಷ್ಟ್ರದಲ್ಲಿ ಡೆಲ್ಟಾ ಪ್ಲಸ್(Delta Plus Variant) ಸೋಂಕಿನ ಪ್ರಕರಣಗಳು ಹೆಚ್ಚು ಪತ್ತೆಯಾಗುತ್ತಿರುವ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಮತ್ತು ಕೇರಳ ಗಡಿ ಭಾಗದಲ್ಲಿ ಹೆಚ್ಚಿನ ನಿಗಾ ಇಡಲಾಗಿದೆ. ಅಲ್ಲಿನ ಜಿಲ್ಲಾಡಳಿತಕ್ಕೂ ಸೂಚನೆ ನೀಡಲಾಗಿದೆ. ಎರಡು ಡೋಸ್ ಲಸಿಕೆ ಪೂರ್ಣವಾಗುವವರೆಗೆ ಜನರು ಬಹಳ ಎಚ್ಚರಿಕೆಯಿಂದ ಇರಬೇಕು. ಮಾಸ್ಕ್ ಧರಿಸುವುದು, ದೈಹಿಕ ಅಂತರ ಕಾಪಾಡಿಕೊಳ್ಳುವುದು ಅವಶ್ಯಕ ಎಂದು ಸಲಹೆ ನೀಡಿದ್ದಾರೆ.


ಇದನ್ನೂ ಓದಿ : Heavy Rainfall : ರಾಜ್ಯದಲ್ಲಿ ಇಂದಿನಿಂದ 3 ದಿನ ಭಾರೀ ಮಳೆ : ಕರಾವಳಿಯಲ್ಲಿ 'ಯಲ್ಲೋ ಅಲರ್ಟ್'​


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.