ಬೆಂಗಳೂರು: ನಗರದ ಕೊತ್ತನೂರು ದಿಣ್ಣೆ ಬಳಿಯ ಕ್ಲಾಸಿಕ್ ಆರ್ಚಿಟ್ ಲೇಔಟ್ ನಲ್ಲಿ ಮನೆ ಕೆಲಸಕ್ಕಿದ್ದ ನೇಪಾಳ ಮೂಲದ ದಂಪತಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಹಾಗೂ ನಗದು ದೋಚಿ (Theft) ಪರಾರಿಯಾಗಿರುವ ಘಟನೆ ನಡೆದಿದೆ.
ಇದನ್ನೂ ಓದಿ:B Sriramulu : 'ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬಂದ್ರೆ ಮಹಿಳೆಯರಿಗೆ ಉಚಿತ ಬಸ್ ಪಾಸ್'
ಕಾಂಗ್ರೆಸ್ (Congress) ಮುಖಂಡ ಚಂದ್ರಶೇಖರ್ ಅಲಿಯಾಸ್ ಬಾರ್ ಚಂದ್ರಪ್ಪ ಮನೆಯಲ್ಲಿ ಈ ಘಟನೆ ನಡೆದಿದೆ. ಮಾರ್ಚ್ 10 ರಂದು ಚಂದ್ರಶೇಖರ್ ಕುಟುಂಬಸ್ಥರು ಧರ್ಮಸ್ಥಳಕ್ಕೆ ಮಂಜುನಾಥಸ್ವಾಮಿ ದರ್ಶನಕ್ಕೆ ತೆರಳಿದ್ದಾರೆ.
ಈ ವೇಳೆ ಮನೆಯಲ್ಲಿ ಕೆಲಸ ಮಾಡಿಕೊಂಡಿದ್ದ ನೇಪಾಳ (Nepal) ಮೂಲದ ದಂಪತಿ ಹೊಂಚು ಹಾಕಿ ಕೂತಿದ್ರು. ತಮ್ಮವರನ್ನು ಕರೆಸಿಕೊಂಡ ಈ ಖತರ್ನಾಕ್ ದಂಪತಿ ಮನೆಯಲ್ಲಿದ್ದ 50 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣ ಹಾಗೂ ನಗದು ಕದ್ದು ಎಸ್ಕೇಪ್ ಆಗಿದ್ದಾರೆ.
ಕಳೆದ ಒಂದೂವರೆ ವರ್ಷದಿಂದ ಮನೆ ಕಾವಲಿಗಿದ್ದ ಕಿರಾತಕ ಜೋಡಿ ಕೈಚಳಕ ತೋರಿದ್ದರಿಂದ ಮನೆ ಮಾಲೀಕ ತಲೆ ಮೇಲೆ ಕೈ ಹೊತ್ತುಕೊಂಡು ಕುಳಿತುಕೊಳ್ಳುವಂತಾಗಿದೆ. ಸದ್ಯ ಮನೆ ಮಾಲೀಕ ಚಂದ್ರಶೇಖರ್ ಮಾಲೀಕ ಪುಟ್ಟೇನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು (Theft Case) ದಾಖಲಿಸಿದ್ದು ಖಾಕಿ ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.
ಇದನ್ನೂ ಓದಿ:ನಾನು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಮತ್ತೆ ಸ್ಪರ್ಧೆ ಮಾಡಲ್ಲ: ವಿಪಕ್ಷ ನಾಯಕ ಸಿದ್ದರಾಮಯ್ಯ
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.