ಶಿವಮೊಗ್ಗ: ಕೇಂದ್ರಿಯ ಮೃಗಾಲಯ ಪ್ರಾಧಿಕಾರ ನವದೆಹಲಿರವರಿಂದ ಶಿವಮೊಗ್ಗ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದಿಂದ ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ ಮೃಗಾಲಯಗಳ ನಡುವೆ ಹೆಚ್ಚುವರಿಯಾಗಿರುವ ಪ್ರಾಣಿಗಳನ್ನು ನ.11 ರಿಂದ ನ.16ರ ವರೆಗೆ ವಿನಿಮಯ ಕಾರ್ಯಕ್ರಮ ನಡೆಸಲಾಗಿದೆ.


COMMERCIAL BREAK
SCROLL TO CONTINUE READING

ತ್ಯಾವರೆಕೊಪ್ಪ ಹುಲಿ-ಸಿಂಹಧಾಮದಿಂದ ಮಾರ್ಶ್ ಕ್ರೋಕಡೈಲ್, ಸ್ಟ್ರೀಪಿಡ್ ಹೈನಾ, ಇಂಡಿಯನ್ ಗೋಲ್ಡನ್ ಜಾಕಲ್, ಏ಼ಷೀಯನ್ ಪ್ಲಾಮ್ ಸಿವೀಟ್ ಪ್ರಾಣಿಗಳು ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ಗೆ ಕಳುಹಿಸಲಾಗಿದೆ.


ಇದನ್ನೂ ಓದಿ: ರಾತ್ರಿ ಬೆಚ್ಚಗಿನ ನೀರಿನಲ್ಲಿ 1 ಚಮಚ ಅಜವಾನ್ ತಿನ್ನುವುದರಿಂದ ಈ ಕಾಯಿಲೆ ಗುಣಮುಖವಾಗುತ್ತದೆ..!


ಕೇರಳದ ತಿರುವನಂತಪುರಂನ ಝೋಲಾಜಿಕಲ್ ಪಾರ್ಕ್ನಿಂದ ಘಾರಿಯಾಲ, ಲೇಸ್ಸರ್ ರೀಹಾ, ಸ್ಟ್ರೀಪಿಡ್ ಹೈನಾ, ಇಂಡಿಯನ್ ಕ್ರೈಸ್ಟೇಡ್ ಪೋರ್‌ಕಪೈನ್, ಸನ್ ಕೌನ್ಸರ್ ಪ್ರಾಣಿಗಳನ್ನು ತ್ಯಾವರೆಕೊಪ್ಪ ಹುಲಿ-ಸಿಂಹಧಾಮಕ್ಕೆ ತರಲಾಗಿದೆ.


ಹುಲಿ-ಸಿಂಹಧಾಮ ತ್ಯಾವರೆಕೊಪ್ಪ ಮೃಗಾಲಯಕ್ಕೆ ಘಾರಿಯಾಲ ಸೇರ್ಪಡೆಗೊಂಡಿದ್ದು ಹಾಗೂ ಪ್ರಥಮ ಬಾರಿ ಮೃಗಾಲಯಕ್ಕೆ ತೀವ್ರವಾಗಿ ಅಳಿವಿನಂಚಿನಲ್ಲಿರುವ ಜಾತಿ ಸಂರಕ್ಷಣೆಯ ಬಗ್ಗೆ ಪ್ರಕೃತಿ ಶಿಕ್ಷಣ ನೀಡಲು ಈ ಪ್ರಭೇದದಿಂದ ಸಹಾಯಕವಾಗಲಿದೆ. ಪ್ರಥಮ ಬಾರಿ ಮೃಗಾಲಯಕ್ಕೆ ಸೌತ್ ಆಫ್ರೀಕನ್‌ಕ್ಕೆ ಸಂಬಂಧಿಸಿದ ಪಕ್ಷಿಗಳ ಪ್ರಭೇದವಾದ ಲೇಸ್ಸರ್ ರೀಹಾ ಮತ್ತು ಸನ್ ಕೌನ್ಸರ್ ಸೇರ್ಪಡೆಯಾಗಿರುತ್ತವೆ. ಭಾರತೀಯ ಕ್ರೆಸ್ಟೆಡ್ ಮುಳ್ಳುಹಂದಿ ಬಹುದಿನಗಳ ನಂತರ ಹುಲಿ-ಸಿಂಹಧಾಮ ತ್ಯಾವರೆಕೊಪ್ಪ ಮೃಗಾಲಯಕ್ಕೆ ಸಂಬಂಧಿಸಿದ ಅನಿಮಲ್ ಕಲೆಕ್ಷನ್ ಪ್ಲಾನ್‌ಗೆ ಮತ್ತೊಂದು ಸೇರ್ಪಡೆಯಾಗಿದೆ. ಗಂಡು ಕತ್ತೆ ಕಿರುಬ ಪ್ರಾಣಿಯನ್ನು ಬ್ಲಡ್‌ಲೈನ್ ಎಕ್ಸಚೆಂಗ್‌ಗಾಗಿ ವಿನಿಮಯ ಮಾಡಿಕೊಳ್ಳಲಾಗಿದೆ.


ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ


ಹುಲಿ-ಸಿಂಹಧಾಮ, ತ್ಯಾವರೆಕೊಪ್ಪ ವೈದ್ಯಾಧಿಕಾರಿಗಳು ಪ್ರಾಣಿಗಳು ಆರೋಗ್ಯದಿಂದಿರುವುದಾಗಿ ತಿಳಿಸಿರುತ್ತಾರೆ. ಈ ಪ್ರಾಣಿಗಳ ಆಗಮನದಿಂದ ತ್ಯಾವರೆಕೊಪ್ಪ ಹುಲಿ-ಸಿಂಹಧಾಮ ಮೃಗಾಲಯದಲ್ಲಿ ಪ್ರಾಣಿ-ಪಕ್ಷಿ ಪ್ರಭೇದಗಳ ಸಂಖ್ಯೆ ಒಟ್ಟು 30 ರಿಂದ 34ಕ್ಕೆ ಹೆಚ್ಚಳವಾಗಿದೆ ಎಂದು ಹುಲಿ-ಸಿಂಹಧಾಮ, ತ್ಯಾವರೆಕೊಪ್ಪದ ಉಪ ಅರಣ್ಯ ಸಂರಕ್ಷಣಾಧಿಕಾರಿ ಹಾಗೂ ಕಾರ್ಯನಿರ್ವಾಹಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.