ಬೆಂಗಳೂರು: ಕೇಂದ್ರ ಸರ್ಕಾರ ಬಿಡುಗಡೆ ಮಾಡಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ 10 ಮಂದಿಗೆ ಹೊಸ ಮಾದರಿಯ ಸೋಂಕು ಕಾಣಿಸಿಕೊಂಡಿದೆ ಎಂದು ರಾಜ್ಯ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.


COMMERCIAL BREAK
SCROLL TO CONTINUE READING

ಇಂದು ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ರೂಪಾಂತರ ವೈರಸ್‌ ಸೋಂಕಿತ(New Coronavirus Strain)ರ ಸಂಖ್ಯೆ 10ಕ್ಕೆ ಏರಿಕೆಯಾಗಿದೆ. ಬ್ರಿಟನ್‍ನಿಂದ ಆಗಮಿಸಿದ್ದ 42 ಜನರಿಗೆ ಆರ್‌ಟಿಪಿಸಿಆರ್ ನಡೆಸಲಾಗಿದ್ದು, ಇದರಲ್ಲಿ 32 ಮಂದಿಗೆ ಕೋವಿಡ್-19 ಸೋಂಕು ಕಾಣಿಸಿಕೊಂಡಿದೆ. ಈ ಪೈಕಿ ಹೊಸ ಮಾದರಿಯ 10 ಮಂದಿಗೆ ರೂಪಾಂತರಿ ಸೋಂಕು ಕಾಣಿಸಿಕೊಂಡಿದೆ ಎಂದು ಮಾಹಿತಿ ನೀಡಿದರು.


GP Election: ಗ್ರಾ. ಪಂ. ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಪ್ರಕಟ..!


ಒಟ್ಟು 42 ಮಂದಿಯನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯ ಎಲ್ಲರೂ ಆರೋಗ್ಯವಾಗಿದ್ದು ಆತಂಕಪಡುವ ಅಗತ್ಯವಿಲ್ಲ ಎಂದು ಸ್ಪಷ್ಟಪಡಿಸಿದರು.


'ಕರ್ನಾಟಕದಲ್ಲಿ ಕನ್ನಡಿಗರಿಗೇ ಎಚ್ಚರಿಕೆ ನೀಡುವ ಧೈರ್ಯ ತೋರುವವರಿಗೆ ಶಾಸ್ತಿಯಾಗಬೇಕು'


ಎಲ್ಲರನ್ನು ನಿಗದಿಪಡಿಸಿದ ಆಸ್ಪತ್ರೆಯಲ್ಲೇ ಚಿಕಿತ್ಸೆಗೊಳಪಡಿಸಲಾಗಿದೆ. ಯಾರಿಗೂ ತೀವ್ರತರವಾದ ಸೋಂಕು ಆವರಿಸಿಲ್ಲ. ಸಾರ್ವಜನಿಕರು ಆತಂಕ ಪಡಬಾರದು ಎಂದು ಮನವಿ ಮಾಡಿದರು.


Arun Singh: ಬಿಜೆಪಿಯಲ್ಲಿ ಗರಿಗೆದರಿದ ರಾಜಕೀಯ ಚಟುವಟಿಕೆ: ಆಪ್ತರೊಂದಿಗೆ ಅರುಣ್ ಸಿಂಗ್ ಚರ್ಚೆ!


ಕೊರೋನಾದಿಂದ ಗುಣಮುಖರಾಗುತ್ತಿರುವವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚುತ್ತಿದೆ. 10 ಸಾವಿರ ಮಾತ್ರ ನಮ್ಮಲ್ಲಿ ಆ್ಯಕ್ಟಿವ್ ಫಂಕ್ಷನ್ ಆಗಿರುವುದು. 12 ಲಕ್ಷ ಜನ ಈಗಾಗಲೆ ಕೊರೊನಾದಿಂದ ಸಂಪೂರ್ಣ ಗುಣಮುಖರಾಗಿದ್ದಾರೆ ಎಂದು ಸುಧಾಕರ್ ಮಾಹಿತಿ ನೀಡಿದರು.


ರೈತರ ಆದಾಯ ದ್ವಿಗುಣಗೊಳಿಸಲು ಸರ್ಕಾರದ ಪೂರಕ ಕ್ರಮ: ಮುಖ್ಯಮಂತ್ರಿ BS Yediyurappa


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.