ಗೃಹಮಂಡಳಿಯಿಂದ 500 ಎಕರೆಯಲ್ಲಿ ನೂತನ ಬಡಾವಣೆ: ಮಿನಿ ಟೌನ್ಶಿಪ್ ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ
ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿ ಹಾಗೂ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಏಳು ಗ್ರಾಮಗಳ 500 ಎಕರೆ ಪ್ರದೇಶದಲ್ಲಿ 50:50 ಅನುಪಾತದಲ್ಲಿ ಬಡಾವಣೆ ನಿರ್ಮಾಣವಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
ಬೆಂಗಳೂರು: ಕರ್ನಾಟಕ ಗೃಹಮಂಡಳಿ ವತಿಯಿಂದ ರಾಜಧಾನಿ ಬೆಂಗಳೂರು ಹೊರವಲಯದಲ್ಲಿ 500 ಎಕರೆ ಪ್ರದೇಶದಲ್ಲಿ ನೂತನ ಬಡಾವಣೆ (ಮಿನಿ ಟೌನ್ ಶಿಪ್ ) ನಿರ್ಮಾಣಕ್ಕೆ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇದನ್ನೂ ಓದಿ: ಅನುಷ್ಕಾಗೂ ಮುನ್ನ ಈ 6 ನಟಿಯರ ಜೊತೆ ಡೇಟಿಂಗ್ ಮಾಡಿದ್ರು ವಿರಾಟ್! ಅದರಲ್ಲಿ ಒಬ್ಬಳು ಕರ್ನಾಟಕದ ಖ್ಯಾತ ಹೀರೋಯಿನ್
ಬೆಂಗಳೂರು ದಕ್ಷಿಣ ತಾಲೂಕಿನ ಕೆಂಗೇರಿ ಹೋಬಳಿ ಹಾಗೂ ರಾಮನಗರ ಜಿಲ್ಲೆ ಬಿಡದಿ ಹೋಬಳಿಯ ಏಳು ಗ್ರಾಮಗಳ 500 ಎಕರೆ ಪ್ರದೇಶದಲ್ಲಿ 50:50 ಅನುಪಾತದಲ್ಲಿ ಬಡಾವಣೆ ನಿರ್ಮಾಣವಾಗಲಿದೆ ಎಂದು ವಸತಿ ಸಚಿವ ಜಮೀರ್ ಅಹಮದ್ ಖಾನ್ ತಿಳಿಸಿದ್ದಾರೆ.
1066.50 ಕೋಟಿ ರೂ. ಮೊತ್ತದ ಯೋಜನೆಗೆ ಜಮೀನು ನೀಡಲು ರೈತರು ಒಪ್ಪಿಗೆ ಪತ್ರ ನೀಡಿದ್ದಾರೆ. ಈ ಯೋಜನೆ ಬೆಂಗಳೂರು-ಮೈಸೂರು ರಾಷ್ಟ್ರೀಯ ಹೆದ್ದಾರಿ ಯಿಂದ 5.5 ಕಿಮೀ ವ್ಯಾಪ್ತಿಯಲ್ಲಿ ಬರಲಿದೆ. ರೈತರ ಜತೆ ಪಾಲುದಾರಿಕೆಯಡಿ ಅಂತಾರಾಷ್ಟ್ರೀಯ ಮಟ್ಟದಲ್ಲಿ ವಸತಿ ಯೋಜನೆ ಅಭಿವೃದ್ಧಿಪಡಿಸಲಾಗುವುದು ಎಂದು ಹೇಳಿದ್ದಾರೆ.
ಈ ಹಿಂದೆ ಕೆಂಗೇರಿ ಹೋಬಳಿ ಹಾಗೂ ಬಿಡದಿ ಹೋಬಳಿಯಲ್ಲಿ ನಿವೇಶನ ಬೇಡಿಕೆ ಸಮೀಕ್ಷೆ ಮಾಡಿದ್ದು, 2666 ಅರ್ಜಿಗಳು ಬಂದಿದೆ. ಈ ಹಿಂದೆ ನಿವೇಶನ ಬಯಸಿ ಸಲ್ಲಿಸಿರುವ 3881 ಅರ್ಜಿಗಳು ಕೂಡಾ ಹಂಚಿಕೆಗೆ ಬಾಕಿ ಇದ್ದು, ಪ್ರಸ್ತಾಪಿತ ಯೋಜನೆಗೆ ಪರಿಗಣಿಸಲಾಗುವುದು ಎಂದು ವಿವರಿಸಿದ್ದಾರೆ.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ