ಈ ವರ್ಷವೇ ಪಠ್ಯ ಪುಸ್ತಕ ಪರಿಷ್ಕರಣೆ : ಸಾವರ್ಕರ್ ಹಾಗೂ ಹೆಡ್ಗೆವಾರ್ ಪಠ್ಯಕ್ಕೆ ಕೊಕ್?!

ಈ ವರ್ಷ ಪಠ್ಯ ಪರಿಷ್ಕರಣೆ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಈ ವರ್ಷವೇ  ಪಠ್ಯ ಪರಿಷ್ಕರಣೆ  ಆಗಲಿದೆ. ಸ್ವತಃ ಸಿಎಂ ಅವರೇ ಈ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿದ್ದಾರೆ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

Written by - Prashobh Devanahalli | Edited by - Ranjitha R K | Last Updated : Jun 8, 2023, 01:39 PM IST
  • ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಪಠ್ಯ ಪರಿಷ್ಕರಣೆ
  • ಈ ವರ್ಷವೇ ಪಠ್ಯ ಪರಿಷ್ಕರಣೆ
  • ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿಕೆ
ಈ ವರ್ಷವೇ ಪಠ್ಯ ಪುಸ್ತಕ ಪರಿಷ್ಕರಣೆ : ಸಾವರ್ಕರ್ ಹಾಗೂ ಹೆಡ್ಗೆವಾರ್ ಪಠ್ಯಕ್ಕೆ ಕೊಕ್?! title=

ಬೆಂಗಳೂರು : ಬಿಜೆಪಿ ಸರ್ಕಾರದಲ್ಲಿ ಪಠ್ಯಕ್ರಮದಲ್ಲಿ ಪರಿಷ್ಕರಣೆ ಆದ ಪಾಠಗಳನ್ನ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ಬದಲಾವಣೆ ಮಾಡಿಯೇ ಮಾಡುತ್ತೇವೆ. ಮಕ್ಕಳು ತಪ್ಪು ಓದಬಾರದು. ಪಠ್ಯ ಬದಲಾವಣೆಗೆ ಮುಂದಿನ ವರ್ಷದ ತನಕ ಕಾಯಬೇಕಿಲ್ಲ ಎಂದು ಪ್ರಾಥಮಿಕ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು.

ವಿಧಾನಸೌಧದಲ್ಲಿ ಕಚೇರಿ ಉದ್ಘಾಟನೆ ಬಳಿಕ ಮಾತನಾಡಿದ ಅವರು,  ಈ ವರ್ಷ ಪಠ್ಯ ಪರಿಷ್ಕರಣೆ ಮಾಡಲ್ಲ ಮುಂದಿನ ವರ್ಷ ಅಂತೆಲ್ಲ ಕೆಲವು ಮಾಧ್ಯಮಗಳಲ್ಲಿ ವರದಿಯಾಗಿದೆ. ಆದರೆ ಈ ವರ್ಷವೇ  ಪಠ್ಯ ಪರಿಷ್ಕರಣೆ ಆಗಲಿದೆ. ಸ್ವತಃ ಸಿಎಂ ಅವರೇ ಈ ಬಗ್ಗೆ ಹೆಚ್ಚು ಆಸಕ್ತಿ ಇಟ್ಟುಕೊಂಡಿದ್ದಾರೆ. ತಜ್ಞರೂ ಕೂಡಾ ಅದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ಈ ಕ್ಷಣದಲ್ಲೂ ಪಠ್ಯ ಪುಸ್ತಕ ಪರಿಷ್ಕರಣೆ ಸಂಬಂಧಿಸಿ ಸಭೆ ನಡೆಯುತ್ತಿದೆ. ಸಪ್ಲಿಮೆಂಟ್ ಮಾದರಿಯ ಪುಸ್ತಕ ನೀಡುತ್ತೆವೆ. ಯಾವ ಪಾಠ ಮಾಡಬೇಕು, ಯಾವುದು ಮಾಡಬಾರದು ಎಂಬುದನ್ನೂ ತಿಳಿಸುತ್ತೇವೆ, ಎಂದರು.

ಇದನ್ನೂ ಓದಿ : ಗೃಹ ಜ್ಯೋತಿ ಯೋಜನೆ : ಬಾಡಿಗೆ ದಾರರ ಸ್ಥಿತಿ ಶೋಚನೀಯ: ಆರ್ ಅಶೋಕ್

ಈ ವರ್ಷವೇ ಪಠ್ಯ ಪರಿಷ್ಕರಣೆಯಾಗಿದೆ. ಮಕ್ಕಳಿಗೆ ಅವಶ್ಯಕತೆ ಇಲ್ಲದ್ದನ್ನು ತಜ್ಞರು ಪರಿಶೀಲಿಸಿ ತೀರ್ಮಾನಿಸುತ್ತಾರೆ. ಈ ವಿಚಾರವನ್ನು ಸಂಪುಟದಲ್ಲಿ ಇಟ್ಟೇ ತೀರ್ಮಾನವಾಗಲಿದೆ. ಮುಂದಿನ ಸಂಪುಟದಲ್ಲೇ ಚರ್ಚೆ ಮಾಡಲಾಗುತ್ತದೆ. ಈ ಹಿಂದೆಯೂ ಸಪ್ಲಿಮೆಂಟರಿ ಪರಿಷ್ಕರಣೆ ಆಗಿದ್ದಿದೆ. ಈ ಸಂದರ್ಭದಲ್ಲಿ ಮಕ್ಕಳಿಗೆ ಒತ್ತಡ ಬೇಡ.

ಆರಂಭದಲ್ಲಿ ಸೇತು ಬಂಧ ಇರಲಿದೆ. ಮಕ್ಕಳು ಪಠ್ಯಕ್ಕೆ ಹೋಗಲ್ಲ. ಮತ್ತು ಪಠ್ಯದಲ್ಲಿ ಏನು ಓದಿಸಬೇಕು, ಯಾವುದು ಬೇಡ ಎಂಬುದನ್ನು ನಿರ್ಧರಿಸಲಾಗುತ್ತದೆ. ಇದು ಬಹಳ ಸೂಕ್ಷ್ಮ ವಿಚಾರ. ಮಕ್ಕಳ ಹಿತದೃಷ್ಟಿಯಿಂದ ಕ್ರಮ ತೆಗೆದುಕೊಳ್ಳುತ್ತೇವೆ‌. ಮಕ್ಕಳ ಭವಿಷ್ಯಕ್ಕೆ ಒಳ್ಳೆಯ ಅಂಶ ಉಳಿಸಲಾಗುತ್ತದೆ.

ಇದನ್ನೂ ಓದಿ : ಇಂದೇ ನಿರ್ಧಾರ ಆಗತ್ತಾ ವಿರೋಧ ಪಕ್ಷದ ನಾಯಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ? ರೇಸ್ ನಲ್ಲಿ ಯಾರಿದ್ದಾರೆ?

ಪಠ್ಯ ಪರಿಷ್ಕರಣೆಯಾಗಬೇಕೆಂದು ಸಾಹಿತಿಗಳು ಸಿಎಂಗೆ ಮನವಿ ಕೊಟ್ಟಿದ್ದಾರೆ. ಮುಖ್ಯಮಂತ್ರಿಯವರು ಕೂಡ ಆಸಕ್ತಿ ತೋರಿಸಿದ್ದಾರೆ. ಪಠ್ಯ ಪುಸ್ತಕ ಪರಿಷ್ಕರಣೆ ಮಾಡುತ್ತೇವೆ ಎಂದು ಪ್ರಣಾಳಿಕೆಯಲ್ಲಿ ಹೇಳಿದ್ದೆವು. ಅದನ್ನು ಮಾಡುತ್ತೇವೆ. ತಜ್ಞರು ಪಕ್ಷಕ್ಕೆ ಸೀಮಿತವಾಗಿರಲ್ಲ. ಅವರು ಕೊಡುವ ಸಲಹೆ ಪರಿಗಣಿಸಲಾಗುತ್ತದೆ. ತಪ್ಪು ತಿಳುವಳಿಕೆ ತಕ್ಷಣ ತಡೆ ಹಿಡಿಯಬೇಕಾಗುತ್ತದೆ. ಅದನ್ನು ನಾವು ಮಾಡುತ್ತೇವೆ.

ಯಾವ ಪಠ್ಯ ಬೇಡ ಎಂದು ತಜ್ಞರು ಸೂಚಿಸುತ್ತಾರೋ ಅದನ್ನು ಬೋಧಿಸದಂತೆ ತಿಳಿಸಲು ಅವಕಾಶವಿದೆ ಎಂದು ಹೇಳಿದ್ದಾರೆ. ಶಿಕ್ಷಕರ ನೇಮಕದಲ್ಲಿ ಎರಡು ಸಮಸ್ಯೆ ಇದೆ. ಕಾನೂನಿನ ತೊಡಕಿದೆ ಅದನ್ನು ಎಜಿ ಅವರ ಚರ್ಚೆ ಮಾಡಲಾಗುತ್ತದೆ‌. ಶಿಕ್ಷಕರ ಕೊರತೆ ಇದೆ. ಅತಿಥಿ ಶಿಕ್ಷಕರೇ ಸಮಸ್ಯೆಗೆ ಪರಿಹಾರವಲ್ಲ. ಈ ಸಮಸ್ಯೆಯನ್ನು ಆದಷ್ಟು ಶೀಘ್ರವಾಗಿ ಪರಿಹರಿಸಲಾಗುತ್ತದೆ‌, ಎಂದರು.

ಇದನ್ನೂ ಓದಿ : "ಬಿಜೆಪಿ ಸರ್ಕಾರವು ಮೀಸಲಾತಿಯಲ್ಲಿ ಸೃಷ್ಟಿಸಿದ ಗೊಂದಲ ನಿವಾರಣೆ ಮಾಡುತ್ತೇವೆ"

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News