New Year 2021: ಜ.1ರಿಂದ ಮುಖ್ಯಮಂತ್ರಿ ಸಚಿವಾಲಯದಲ್ಲಿ ಅಹವಾಲು ಸ್ವೀಕಾರಕ್ಕೆ ಒಂದೇ Email ID ಬಳಕೆ

ಮುಖ್ಯಮಂತ್ರಿಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ. 

Written by - Yashaswini V | Last Updated : Dec 28, 2020, 03:25 PM IST
  • ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ ವಿಳಾಸಗಳನ್ನು ಹೊಂದಿದೆ
  • ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ
New Year 2021: ಜ.1ರಿಂದ ಮುಖ್ಯಮಂತ್ರಿ ಸಚಿವಾಲಯದಲ್ಲಿ ಅಹವಾಲು ಸ್ವೀಕಾರಕ್ಕೆ ಒಂದೇ Email ID ಬಳಕೆ  title=
Image courtesy: Twitter@CMofKarnataka

ಬೆಂಗಳೂರು : ಮುಖ್ಯಮಂತ್ರಿ ಕಚೇರಿಗೆ ಅಹವಾಲು ಸಲ್ಲಿಕೆ ಹಾಗೂ ಸಂವಹನಕ್ಕಾಗಿ ಬೇರೆ ಬೇರೆ ಮೇಲ್ ಐಡಿಗಳ ಬದಲಿಗೆ 2021ರ ಜನವರಿ 1ನೇ ತಾರೀಖಿನಿಂದ ಒಂದೇ ಮೇಲ್ ಐಡಿ ಬಳಸಲಾಗುವುದು. ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಮುಖ್ಯಮಂತ್ರಿ ಸಚಿವಾಲಯವು ಹೊಸ ವರ್ಷದಿಂದ cm.kar@nic.in ಇ-ಮೇಲ್ ಐಡಿಯನ್ನು ಮಾತ್ರ ಬಳಕೆ ಮಾಡಲಾಗುವುದು ಎಂದು ತಿಳಿಸಿದೆ.

ಮುಖ್ಯಮಂತ್ರಿ (Chief Minister) ಗಳ ಸಚಿವಾಲಯದಲ್ಲಿ 2020ರ ಆಗಸ್ಟ್ ತಿಂಗಳಿನಿಂದ ಇ-ಮೇಲ್ ಮೂಲಕ ಸ್ವೀಕೃತವಾಗುವ ಅಹವಾಲುಗಳನ್ನು ಇ-ಆಫೀಸ್ ನಲ್ಲಿಯೇ ನಿರ್ವಹಿಸಲಾಗುತ್ತಿದೆ. ಪ್ರಸ್ತುತ ಮುಖ್ಯಮಂತ್ರಿಗಳ ಸಚಿವಾಲಯವು 3 ಸಕ್ರಿಯ ಇ-ಮೇಲ್ (Email) ವಿಳಾಸಗಳನ್ನು ಹೊಂದಿದ್ದು, ಇದರಿಂದ ಅಹವಾಲು ಪುನರಾವರ್ತನೆಯಾಗುತ್ತಿದೆ ಹಾಗೂ ಅನಗತ್ಯ ಗೊಂದಲ ಉಂಟಾಗುತ್ತಿದೆ ಎಂದು ಹೇಳಲಾಗಿದೆ.

ಇದನ್ನೂ ಓದಿ: NEW YEAR : ಹೊಸ ವರ್ಷಾಚರಣೆಗೆ ಇಲ್ಲ ಅವಕಾಶ ; ನಾಳೆ ಹೊಸ ಮಾರ್ಗಸೂಚಿ ಬಿಡುಗಡೆ

ಈ ಹಿನ್ನೆಲೆಯಲ್ಲಿ ಅಹವಾಲು ಸಲ್ಲಿಕೆ ಮತ್ತು ನಿರ್ವಹಣೆಯನ್ನು ಸರಳಗೊಳಿಸಲು ಏಕ ವಿಳಾಸವನ್ನು ಬಳಕೆ ಮಾಡಲು ನಿರ್ಧರಿಸಲಾಗಿದೆ ಎಂದು ಸಚಿವಾಲಯ (Ministry) ಸ್ಪಷ್ಟನೆ ನೀಡಿದೆ.

ಸಾರ್ವಜನಿಕರು ಈ ಬದಲಾವಣೆಯನ್ನು ಗಮನಿಸಿ ಮುಂದಿನ ದಿನಗಳಲ್ಲಿ ತಮ್ಮ ಅಹವಾಲು ಮತ್ತು ಇತರ ಸಂವಹನವನ್ನು cm.kar@nic.in ಮೇಲ್ ಐಡಿ ಮೂಲಕವೇ ಮಾಡುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ರೂಪಾಂತರಿತ ಕರೋನಾ ಕರ್ನಾಟಕವನ್ನು ಕಾಡುತ್ತಿದೆಯಾ..? ಅಷ್ಟಕ್ಕೂ ಆರೋಗ್ಯ ಸಚಿವರು ಹೇಳಿದ್ದೇನು..?

ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 

ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News