ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ರಾಜ್ಯ ಸರ್ಕಾರ ದಿಢೀರನೆ ನೈಟ್ ಕರ್ಫ್ಯೂ (Night Curfew) ವಿಧಿಸಿ ಅಷ್ಟೇ ದಿಢೀರನೆ ವಾಪಸ್ ಪಡೆದಿತ್ತು‌. ಈಗ ಹೊಸ ಸ್ವರೂಪದ COVID-19 ವೈರಸ್ ಕಾಣಿಸಿಕೊಳ್ಳುತ್ತಿದೆ ಎಂಬ ಕಾರಣಕ್ಕೆ ಹೊಸ ವರ್ಷದ ಸಂಭ್ರಮಾಚರಣೆ ವೇಳೆ ಬಿಗಿ ನಿಯಮಗಳನ್ನು ಜಾರಿಗೆ ತರಲು ಮುಂದಾಗಿದೆ.


COMMERCIAL BREAK
SCROLL TO CONTINUE READING

ಹೊಸ ವರ್ಷಾಚರಣೆ ವೇಳೆ ಒಂದೇ ಕಡೆ ಬಹಳ ಜನ ಸೇರುತ್ತಾರೆ. ಹೊಸ ಸ್ವರೂಪದ COVID-19 ವೈರಸ್ ಹರಡುತ್ತದೆ ಎಂದು ರಾಜ್ಯ ಸರ್ಕಾರ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲು ಮುಂದಾಗಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸುವಂತೆ ಕೂಡ ಸೂಚಿಸಲಾಗಿದೆ.


ಗೃಹ ಸಚಿವ ಬಸವರಾಜ ಬೊಮ್ಮಾಯಿ (Basavaraja Bommai) ಅವರು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ರೂಪಿಸುಂತೆ ಸೂಚನೆ ನೀಡಿದ್ದಾರೆ. ಬೆಂಗಳೂರು ಪೊಲೀಸರು ಈಗ ಹೊಸ ಮಾರ್ಗಸೂಚಿ (New Guidelines) ರೂಪಿಸುವ ತಯಾರಿಯಲ್ಲಿದ್ದಾರೆ.


ಇದನ್ನೂ ಓದಿ:  ಹೊಸ ವರ್ಷದಲ್ಲಿ Mobile ಫೋನ್‌ಗಳ ರೀಚಾರ್ಜ್ ಆಗಲಿದೆ ದುಬಾರಿ!


ಈ ಬಗ್ಗೆ ಮಾಧ್ಯಮಗಳ ಜೊತೆ ಮಾತನಾಡಿದ ಬಸವರಾಜ ಬೊಮ್ಮಾಯಿ, ಹೊಸ ವರ್ಷದ ದಿನ ಹಾಗೂ ಹಿಂದಿನ ದಿನ‌ ಕಠಿಣ ಕ್ರಮ ಕೈಗೊಳ್ಳುವ ಹಿನ್ನಲೆಯಲ್ಲಿ ಬೆಂಗಳೂರಿಗೆ (Bangalore) ಪ್ರತ್ಯೇಕ ಮಾರ್ಗಸೂಚಿ ತರಲು ಬೆಂಗಳೂರು ನಗರ ಪೊಲೀಸ್ ಆಯುಕ್ತರಿಗೆ ಸೂಚಿಸಿದ್ದೇನೆ. ಬೆಂಗಳೂರು ನಗರ ಪೊಲೀಸ್ ಆಯುಕ್ತರು ಮಾರ್ಗಸೂಚಿ ಜಾರಿಗೊಳಿಸಲಿದ್ದಾರೆ ಎಂದು ಹೇಳಿದ್ದಾರೆ.


ಇದನ್ನೂ ಓದಿ: New Corona Strain: ಕ್ರಿಸ್‌ಮಸ್, ಹೊಸ ವರ್ಷದ ದೃಷ್ಟಿಯಿಂದ ಈ ನಗರಗಳಲ್ಲಿ Night Curfew


ಬೆಂಗಳೂರಿಗೆ ಪ್ರತ್ಯೇಕ ಮಾರ್ಗಸೂಚಿ ತರಲು ಗೃಹ ಇಲಾಖೆ ನಿರ್ಧರಿಸಿದ್ದು ಹೊಸ ವರ್ಷದ ಸಂಭ್ರಮಾಚರಣೆ ಹೊಸ ಮಾರ್ಗಸೂಚಿ ಬರಲಿದ್ದು ಆಗ ಬಿಗಿಯಾದ ಕ್ರಮಗಳನ್ನು ಕೈಗೊಳ್ಳಲಾಗುತ್ತದೆ ಎಂದು ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ
Android Link - https://bit.ly/3hDyh4G
iOS Link - https://apple.co/3loQYe 


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.