ಮದುವೆಯಲ್ಲಿ ಕುಮಾರಸ್ವಾಮಿಗೆ ಮತ ಹಾಕುವಂತೆ ವಧು-ವರರಿಂದ ಮನವಿ!

ಜಗದೀಶ್ ನೀಡಗುಂದಿಮಠ ಮತ್ತು ಪೂಜಾ ಎನ್ನುವ ನೂತನ ವಧು-ವರರು ತಮಗೆ ಆಶೀರ್ವಾದ ಮಾಡಲು ಬಂದ ಸಂಬಂಧಿರು, ಬಂಧು-ಬಳಗಕ್ಕೆ ಕುಮಾರಣ್ಣನಿಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ.

Written by - Zee Kannada News Desk | Last Updated : May 13, 2022, 11:14 PM IST
  • ದಾಂಪತ್ಯ ಜೀವನಕ್ಕೆ ಕಾಲಿಟ್ಟ ಜೋಡಿಯಿಂದ ಎಚ್.ಡಿ.ಕುಮಾರಸ್ವಾಮಿಗೆ ಬೆಂಬಲ
  • 2023ರ ಚುನಾವಣೆಯಲ್ಲಿ ಕುಮಾರಣ್ಣನಿಗೆ ಮತ ಹಾಕುವಂತೆ ವಧು-ವರರಿಂದ ಮನವಿ
  • ಆಶೀರ್ವದಿಸಲು ಬಂದ ಬಂಧು-ಬಳಗ, ಸ್ನೇಹಿತರಿಗೆ ಎಚ್‍ಡಿಕೆಗೆ ಮತ ಹಾಕುವಂತೆ ಮನವಿ
ಮದುವೆಯಲ್ಲಿ ಕುಮಾರಸ್ವಾಮಿಗೆ ಮತ ಹಾಕುವಂತೆ ವಧು-ವರರಿಂದ ಮನವಿ! title=
ಎಚ್‍ಡಿಕೆಗೆ ಮತ ಹಾಕುವಂತೆ ಮನವಿ  

ಕೊಪ್ಪಳ: 2023ರ ರಾಜ್ಯ ವಿಧಾನಸಭಾ ಚುನಾವಣೆಗೆ ಇನ್ನು ಕೆಲವೇ ತಿಂಗಳುಗಳು ಬಾಕಿ ಇವೆ. ಅಧಿಕಾರದ ಚುಕ್ಕಾಣಿ ಹಿಡಿಯಲು 3 ಪ್ರಮುಖ ಪಕ್ಷಗಳು ಮತದಾರರ ಮನವೊಲಿಕೆಗೆ ಮನೆಬಾಗಿಲಿಗೆ ಎಡತಾಕುತ್ತಿವೆ. ಬಿಜೆಪಿ, ಕಾಂಗ್ರೆಸ್ ಮತ್ತು ಜೆಡಿಎಸ್ ಚುನಾವಣಾ ರಣತಂತ್ರ ರೂಪಿಸುತ್ತಿವೆ.

ಈ ಬಾರಿ ನಾವು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ನೇತೃತ್ವದಲ್ಲಿಯೇ ಚುನಾವಣೆ ಎದುರಿಸುತ್ತೇವೆಂದು ಹೇಳಿರುವ ಬಿಜೆಪಿ ರಾಜ್ಯದಲ್ಲಿ ಮತ್ತೆ ಅಧಿಕಾರಕ್ಕೆ ಬರಲು ಸಿದ್ಧತೆ ನಡೆಸುತ್ತಿದೆ. ನೂರಕ್ಕೆ ನೂರರಷ್ಟು ಈ ಬಾರಿ ನಮ್ಮ ಪಕ್ಷವೇ ಅಧಿಕಾರಕ್ಕೆ ಬರಲಿದೆ, ಸಿದ್ದರಾಮಯ್ಯ ಮುಖ್ಯಮಂತ್ರಿಯಾಗಲಿದ್ದಾರೆಂದು ಕಾಂಗ್ರೆಸ್ ಸಹ ಮಾಸ್ಟರ್ ಪ್ಲಾನ್ ಮಾಡುತ್ತಿದೆ. ಜನತಾ ಜಲಧಾರೆ ಮೂಲಕ ಮಿಷನ್ 123 ಯುದ್ಧ ಆರಂಭವಾಗಿದೆ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಈ ನಡುವೆ ಹೊಸ ಜೀವನಕ್ಕೆ ಕಾಲಿಟ್ಟಿರುವ ಜೋಡಿಯೊಂದು ಎಚ್‍ಡಿಕೆಗೆ ಮತ ಹಾಕುವಂತೆ ಮನವಿ ಮಾಡಿರುವುದು ಗಮನ ಸೆಳೆಯುತ್ತಿದೆ.

ಇದನ್ನೂ ಓದಿ: ಅಕ್ರಮ ಲ್ಯಾಪ್‌ಟ್ಯಾಪ್ ಖರೀದಿ ಸಿದ್ದರಾಮಯ್ಯ ಸರ್ಕಾರದ ಕೂಸು: ಬಿಜೆಪಿ

ಮದುವೆಯಲ್ಲಿ ಕುಮಾರಣ್ಣನ ಜಪ

ಸಪ್ತಪದಿ ತುಳಿದು ದಾಂಪತ್ಯ ಜೀವನಕ್ಕೆ ಕಾಲಿಟ್ಟಿರುವ ಜೋಡಿಯೊಂದು ತಮ್ಮ ಮದುವೆ ಸಮಾರಂಭದಲ್ಲಿಯೇ ಎಚ್.ಡಿ.ಕುಮಾರಸ್ವಾಮಿಯವರ ಜಪ ಮಾಡಿದೆ. ವೇದಿಕೆಯಲ್ಲಿ ಕುಮಾರಣ್ಣನನ್ನು ಬೆಂಬಲಿಸಿ ಎಂದು ವಧು-ವರ ಬಿತ್ತಿ ಪತ್ರ ಪ್ರದರ್ಶನ ಮಾಡಿದೆ.

ಹೌದು, ಹೊಸ ಜೀವನಕ್ಕೆ ಕಾಲಿಟ್ಟಿರುವ ನವಜೋಡಿ ಮುಂಬರುವ ಚುನಾವಣೆಯಲ್ಲಿ ಜೆಡಿಎಸ್ ಬೆಂಬಲಿಸಿ ಎಂದು ಮಾಜಿ ಸಿಎಂ ಕುಮಾರಸ್ವಾಮಿಯವರ ಜಪ ಮಾಡಿದೆ. ಕೊಪ್ಪಳ ಜಿಲ್ಲೆಯ ಕುಷ್ಟಗಿ ತಾಲೂಕಿನ ಕಡೇಕೊಪ್ಪ ಗ್ರಾಮದಲ್ಲಿ ನಡೆದ ಮದುವೆಯಲ್ಲಿ ‘ರಾಜ್ಯದ ಸಮಗ್ರ ನೀರಾವರಿಗಾಗಿ 2023ರ ಚುನಾವಣೆಯಲ್ಲಿ ಕುಮಾರಣ್ಣನಿಗೆ ಬೆಂಬಲಿಸಿ’ ಎಂದು ಮನವಿ ಮಾಡಿದ್ದಾರೆ.

ಇದನ್ನೂ ಓದಿ: Basavaraj Bommai : 'ZEE ಈ ಪ್ರಯಾಣದಲ್ಲಿ ನಾವು ಹೆಗಲಿಗೆ ಹೆಗಲು ಕೊಟ್ಟು ನಡೆಯುತ್ತೇವೆ'

ಜಗದೀಶ್ ನೀಡಗುಂದಿಮಠ ಮತ್ತು ಪೂಜಾ ಎನ್ನುವ ನೂತನ ವಧು-ವರರು ತಮಗೆ ಆಶೀರ್ವಾದ ಮಾಡಲು ಬಂದ ಸಂಬಂಧಿರು, ಬಂಧು-ಬಳಗಕ್ಕೆ ಕುಮಾರಣ್ಣನಿಗೆ ಮತ ಹಾಕುವಂತೆ ಮನವಿ ಮಾಡಿದ್ದಾರೆ. ಬಿತ್ತಿ ಪತ್ರವನ್ನು ಹಿಡಿದು ಎಚ್‍ಡಿಕೆ ಬೆಂಬಲಿಸಿರುವ ವಧು-ವರರ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ವೈರಲ್ ಆಗುತ್ತಿದೆ.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

Trending News