ಬೆಂಗಳೂರು : ಮುಂದಿನ 24 ಗಂಟೆಗಳ ಕಾಲ ಕರ್ನಾಟಕದ ಮೂರು ಕರಾವಳಿ ಜಿಲ್ಲೆಗಳಲ್ಲಿ ಧಾರಾಕಾರವಾಗಿ ಮಳೆ ಸುರಿಯಲಿದ್ದು, ಆಯಾ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಕಳೆದ ಎರಡು ದಿನಗಳಿಂದ ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಪ್ರಮುಖವಾಗಿ ಮಂಗಳೂರು, ದಕ್ಷಿಣ ಕನ್ನಡ, ಉಡುಪಿ, ಕೊಡಗು ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮಳೆ ಹೆಚ್ಚಾಗಿದೆ ಎಂದಿದೆ.
ಇದನ್ನೂ ಓದಿ : ಸಾವಿರಾರು ದೂರು ಬಂದ್ರು ತಲೆಕೆಡಿಸಿಕೊಳ್ಳದ ಬಿಎಂಟಿಎಫ್: ಸಾರ್ವಜನಿಕರಿಂದ ಅಸಮಾಧಾನ
ಇನ್ನುಳಿದಂತ ರಾಜ್ಯದ ನಾಲ್ಕು ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ನೀಡಲಾಗಿದೆ. ಮಂಗಳೂರು ಜಿಲ್ಲೆಯಲ್ಲಿ ವ್ಯಾಪಕ ಮಳೆ ಸುರಿಯುತ್ತಿದ್ದು, ಆದರೆ ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ ಎಂದು ಕರ್ನಾಟಕ ನೈಸರ್ಗಿಕ ವಿಕೋಪ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಮಂಗಳೂರಿನ ಪ್ರಮುಖ ರಸ್ತೆಗಳು ಜಲಾವೃತ
ಮಳೆಯಿಂದಾಗಿ ಮಂಗಳೂರಿನ ಪ್ರಮುಖ ರಸ್ತೆಗಳು ಜಲಾವೃತಗೊಂಡಿವೆ. ತಗ್ಗು ಪ್ರದೇಶಗಳು ಮತ್ತು ಕಟ್ಟಡಗಳಿಗೆ ನೀರು ನುಗ್ಗಿ ದೈನಂದಿನ ಜೀವನಕ್ಕೆ ಅಡ್ಡಿಯಾಗಿದೆ. ಜಲಾವೃತಗೊಂಡ ರಸ್ತೆಗಳಲ್ಲಿ ವಾಹನ ಸವಾರರು ಮತ್ತು ಪಾದಚಾರಿಗಳಿಗೆ ಸಂಚಾರ ಮಾಡಲು ದೊಡ್ಡ ಸವಾಲಾಗಿ ಪರಿಣಮಿಸಿದೆ. ಹೀಗಾಗಿ ಕರಾವಳಿ ಜಿಲ್ಲೆಗಳ ಕೆಲವು ರಸ್ತೆಗಳಲ್ಲಿ ಸಂಚಾರ ಆಮೆ ಗತಿಯಲ್ಲಿ ಸಾಗಿದೆ. ಕಳೆದ 24 ಗಂಟೆಗಳಲ್ಲಿ 11 ಮನೆಗಳಿಗೆ ತೀವ್ರ ಹಾನಿಯಾಗಿದ್ದು, 77 ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ವಿಪತ್ತು ನಿರ್ವಹಣಾ ಪಡೆಗಳು ಸ್ಥಳದಲ್ಲಿ ಮೊಕ್ಕಾಂ
ರಾಜ್ಯ ವಿಪತ್ತು ಪರಿಹಾರ ಪಡೆಗಳ 86 ತಂಡಗಳು ಮತ್ತು 50 ನಾಗರಿಕ ರಕ್ಷಣಾ ತಂಡಗಳು ಜಿಲ್ಲೆಯಲ್ಲಿ ಮೊಕ್ಕಾಂ ಹೂಡಿವೆ. ಹವಾಮಾನ ಅಧಿಕಾರಿಗಳು ಮುಂದಿನ ಕೆಲವು ದಿನಗಳಲ್ಲಿ ಹೆಚ್ಚಿನ ಮಳೆಯಾಗುವ ಮುನ್ಸೂಚನೆ ನೀಡಿರುವ ಕಾರಣ ಯಾವುದೇ ಅನಾಹುತ ಆಗದಂತೆ ಕಟ್ಟೆಚ್ಚರ ವಹಿಸಿದ್ದಾರೆ. ಇನ್ನುಳಿದಂತೆ ಭಾರಿ ಮಳೆಯಿಂದಾಗಿ ದಕ್ಷಿಣ ಕನ್ನಡ ಜಿಲ್ಲೆಯಲ್ಲೇ 9 ಲಕ್ಷ ಹೆಕ್ಟೇರ್ ಬೆಳೆ ಹಾನಿಯಾಗಿದೆ ಎಂದು ಅಲ್ಲಿನ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
ಇದನ್ನೂ ಓದಿ : ಹೋಂ ವರ್ಕ್ ಮಾಡಿಲ್ಲ ಅಂ
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.