Satish Jarkiholi Next CM: ಮುಡಾ ಹಗರಣದ A2 ಆರೋಪಿಯಾಗಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರ ರಾಜೀನಾಮೆಗೆ ಬಿಜೆಪಿ ಹಾಗೂ ಜೆಡಿಎಸ್‌ ನಾಯಕರು ಮಾತ್ರವಲ್ಲದೇ ಕಾಂಗ್ರೆಸ್‌ ಪಕ್ಷದ ಕೆಲವು ನಾಯಕರು ಸಹ ಆಗ್ರಹಿಸಿದ್ದಾರೆ.


COMMERCIAL BREAK
SCROLL TO CONTINUE READING

ʼಕೈʼ ಪಾಳಯದಲ್ಲಿ ಇದೀಗ ಸಿಎಂ ಬದಲಾವಣೆಯ ಗುಸು ಗುಸು ಜೋರಾಗಿದೆ. ಈ ಬೆಳವಣೆಗೆಯ ಮಧ್ಯೆ ಸಚಿವ ಸತೀಶ್‌ ಜಾರಕಿಹೊಳಿ ಅವರು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಹಾಗೂ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್‌ ಖರ್ಗೆರನ್ನು ಭೇಟಿ ಮಾಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.


ಇತ್ತ ಸತೀಶ್‌ ಜಾರಕಿಹೊಳಿ ಅವರ ಸಾವಿರಾರು ಬೆಂಬಲಿಗರು ಹಾಗೂ ಅಭಿಮಾನಿಗಳು ಹೋದ ಹೋದ ಕಡೆಯಲ್ಲೆಲ್ಲಾ ʼಮುಂದಿನ ಮುಖ್ಯಮಂತ್ರಿ ಸತೀಶ್‌ ಜಾರಕಿಹೊಳಿʼ ಎಂದು ಘೋಷಣೆ ಕೂಗುತ್ತಿದ್ದಾರೆ. ಇದರ ನಡುವೆ ತುಮಕೂರು ನಗರದಲ್ಲಿ ನಡೆಯುತ್ತಿದ್ದ DSS ಸಭೆಯಲ್ಲಿ ʼಮುಂದಿನ ಮುಖ್ಯಮಂತ್ರಿ ಸತೀಶ್ ಜಾರಕಿಹೊಳಿʼ ಎಂಬ ಘೋಷಣೆ ಕೇಳಿಬಂದಿದೆ. ಸತೀಶ್ ಜಾರಕಿಹೊಳಿಯವರ ಸಮ್ಮುಖದಲ್ಲೇ ಈ ಘೋಷಣೆ ಹೊರಬಿದ್ದಿದೆ.


ಇದನ್ನೂ ಓದಿ: ಹರಿಯಾಣ ಮತ್ತು ಜಮ್ಮು ಕಾಶ್ಮೀರ ಚುನಾವಣೋತ್ತರ ಸಮೀಕ್ಷೆ: ಯಾವ ಪಕ್ಷದತ್ತ ಮತದಾರನ ಒಲವು?


ಇದನ್ನು ತಡೆಯುವ ಪ್ರಯತ್ನವನ್ನು ಸಚಿವ ಸತೀಶ್‌ ಜಾರಕಿಹೊಳಿ ಮಾಡಲಿಲ್ಲ. ಕಾಂಗ್ರೆಸ್‌ ಪಕ್ಷದಲ್ಲಿ ಮೊದಲಿನಿಂದಲೂ ʼದಲಿತ ಸಿಎಂʼ ಕೂಗು ಕೇಳಿ ಬಂದಿತ್ತು. ಇದೀಗ ಮುಡಾ ಹಗರಣದ ಕುರಿತು ಸಿದ್ದರಾಮಯ್ಯನವರು ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡ್ತಾರೆ ಎನ್ನುವ ಚರ್ಚೆ ಜೋರಾದ ಬೆನ್ನಲ್ಲೇ ಮತ್ತೆ ʼದಲಿತ ಸಿಎಂʼ ಕೂಗು ಕೇಳಿ ಬಂದಿದೆ.


ʼದಲಿತ ಸಿಎಂʼ ಗಾದಿಯ ಚರ್ಚೆಯ ಹೊತ್ತಿನಲ್ಲೇ ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ್‌ ಖರ್ಗೆರನ್ನು ಸಚಿವ ಸತೀಶ್ ಜಾರಕಿಹೊಳಿ ಭೇಟಿ ಮಾಡಿದ್ದರು. ಇದೀಗ ತುಮಕೂರಿನಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅವರನ್ನು ಸಹ ಸತೀಶ್ ಜಾರಕಿಹೊಳಿ ಪ್ರತ್ಯೇಕವಾಗಿ ಭೇಟಿ ಮಾಡಿ ಚರ್ಚೆ ನಡೆಸಿದ್ದಾರೆ. ಇತ್ತೀಚಿಗೆ ಪರಮೇಶ್ವರ್-ಸತೀಶ್ ಜಾರಕಿಹೊಳಿ ನಡುವೆ 4-5 ಬಾರಿ ಭೇಟಿ ಮಾಡಿರುವುದು ಹಲವು ಪ್ರಶ್ನೆಗಳು ಹುಟ್ಟಿಕೊಳ್ಳುವಂತೆ ಮಾಡಿದೆ.


ಸತೀಶ್‌ ಜಾರಕಿಹೊಳಿ ಹೇಳಿದ್ದೇನು?


ಈ ಕುರಿತು ಸುದ್ದಿಗಾರರ ಜೊತೆಗೆ ಮಾತನಾಡಿರುವ ಸಚಿವ ಸತೀಶ್‌ ಜಾರಕಿಹೊಳಿ, ʼಮುಂದಿನ ಸಿಎಂ ಕೂಗು ಶುರು ಮಾಡಿದರೆ ನಾನೇನು ಮಾಡಲಿ? ಈ ಭೇಟಿಯಲ್ಲಿ ಏನು ವಿಶೇಷ ಇಲ್ಲ. ಪರಮೇಶ್ವರ್ ಊಟ ಮಾಡಿಸಿದ್ರು ಅಷ್ಟೇ. ನನ್ನದು ಬೇರೆ ಕಾರ್ಯಕ್ರಮ ಇತ್ತು. ಅಲ್ಲಿಗೆ ಬಂದಿದ್ದೆ, ಅದರಂತೆಯೇ ಇಲ್ಲಿಗೂ ಬಂದಿದ್ದೆ ಅಷ್ಟೇ. ನಾವು ಸಿಎಂಗೆ ರಾಜೀನಾಮೆ ನೀಡುವುದು ಬೇಡ ಅಂತಾ ಹೇಳಿದ್ದೇವೆ. ದಲಿತ ಸಿಎಂ ಪ್ರಸ್ತಾವನೆ ಸಧ್ಯಕ್ಕಿಲ್ಲ. ಇದ್ದಾಗ ನಾವೇ ಕರೆದು ಹೇಳುತ್ತೇವೆʼ ಎಂದು ಸ್ಪಷ್ಟನೆ ನೀಡಿದ್ದಾರೆ.   


ಇದನ್ನೂ ಓದಿ: ದಸರಾ ಉದ್ಘಾಟನೆ ವೇಳೆ ಸಿದ್ದು ಪರ ಜಿ‌ಟಿ‌ಡಿ ಬ್ಯಾಟಿಂಗ್: ಎಚ್‌ಡಿ‌ಕೆ ರಾಜೀನಾಮೆ ಕೊಡ್ತಾರಾ..!


https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.