ಬೆಂಗಳೂರು: ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಹಾವೇರಿಯಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ ನಿರ್ಧರಿಸಿದೆ.
ಕಲಬುರ್ಗಿಯಲ್ಲಿ ನಡೆಯುತ್ತಿರುವ 85ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಸಂದರ್ಭದಲ್ಲಿ ಮುಂದಿನ ಸಾಹಿತ್ಯ ಸಮ್ಮೇಳನವನ್ನು ನಡೆಸಲು ಕಸಾಪ ಅಧ್ಯಕ್ಷ ಮನು ಬಳಿಗಾರ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರವನ್ನು ತೆಗೆದುಕೊಳ್ಳಲಾಗಿದೆ ಎಂದು ಕಸಾಪ ತಿಳಿಸಿದೆ.
ಹಾವೇರಿಯಲ್ಲಿ ಮುಂದಿನ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವುದಾಗಿ ಘೋಷಣೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮನು ಬಳಿಗಾರ ಅವರಿಗೆ ಧನ್ಯವಾದಗಳು @tv9kannada @publictvnews @prajaatv @indiatvnews
— Kourava B.C.Patil (@kourvabcpatil) February 6, 2020
ಈಗ ಈ ಕಸಾಪ ನಿರ್ಧಾರವನ್ನು ಸಚಿವ ಬಿ.ಸಿ.ಪಾಟೀಲ್ ಸ್ವಾಗತಿಸಿ ಟ್ವೀಟ್ ಮಾಡಿದ್ದಾರೆ."ಹಾವೇರಿಯಲ್ಲಿ ಮುಂದಿನ ವರ್ಷದ ಕನ್ನಡ ಸಾಹಿತ್ಯ ಸಮ್ಮೇಳನವನ್ನು ನಡೆಸುವುದಾಗಿ ಘೋಷಣೆ ಮಾಡಿದ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಮನು ಬಳಿಗಾರ ಅವರಿಗೆ ಧನ್ಯವಾದಗಳು" ಎಂದು ಟ್ವೀಟ್ ಮಾಡಿದ್ದಾರೆ.