ಬೆಂಗಳೂರು: ಮುಂದಿನ ಬಾರಿ ವಿಧಾನಸಭಾ ಚುನಾವಣೆಯಲ್ಲಿ ವಿಪಕ್ಷ ನಾಯಕ ಸಿದ್ದರಾಮಯ್ಯ ಸ್ಪರ್ಧೆ ಮಾಡಲಿದ್ದಾರಾ ಇಲ್ಲವೇ ಎಂಬ ಬಗ್ಗೆ ಹಲವು ದಿನಗಳಿಂದ ಚರ್ಚೆ ನಡೆಯುತ್ತಿದ್ದು, ಈ ಬಗ್ಗೆ ಇಂದು ವಿಧಾನಸಭಾ ಕಲಾಪದ ವೇಳೆಯೂ ನಡೆದ ಚರ್ಚೆಯಲ್ಲಿ ಸಿದ್ದರಾಮಯ್ಯ ಕುತೂಹಲಕ್ಕೆ ತೆರೆ ಎಳೆದರು.


COMMERCIAL BREAK
SCROLL TO CONTINUE READING

ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ, ವಿಪಕ್ಷ ನಾಯಕ ಸಿದ್ದರಾಮಯ್ಯ(Siddaramaiah)ನವರು ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುತ್ತಾರಾ ಇಲ್ಲವೇ ಎಂಬ ಬಗ್ಗೆ ಜನಪ್ರತಿನಿಧಿಗಳಿಗೆ ಮಾತ್ರವಲ್ಲ ಇಡೀ ರಾಜ್ಯದ ಜನತೆಗೆ ಕುತೂಹಲವಿದೆ. ಈ ಬಗ್ಗೆ ಸ್ಪಷ್ಟಪಡಿಸುವಂತೆ ಹೇಳಿದರು. ಇದಕ್ಕೆ ಉತ್ತರಿಸಿದ ಸಿದ್ದರಾಮಯ್ಯ ಮುಂದಿನ ಚುನಾವಣೆಯಲ್ಲಿ ನಾನು ಸ್ಪರ್ಧಿಸುವುದು ಖಚಿತ ಈ ಬಗ್ಗೆ ಯಾವುದೇ ಅನುಮಾನ ಬೇಡ ಎಂದು ಹೇಳಿದರು.


Siddaramaiah: 'ನಾನು ನಿಮ್ಮ ಖುರ್ಚಿಯಲ್ಲಿ ಕೂರುವ ಕಾಲ ದೂರವಿಲ್ಲ'


ಇದೇ ವೇಳೆ ಸಚಿವ ಆರ್. ಅಶೋಕ್(R Ashok), ಯಾವ ಕ್ಷೇತ್ರದಿಂದ ಸ್ಪರ್ಧಿಸುತ್ತೀರಿ ಎಂಬುದನ್ನೂ ಸ್ಪಷ್ಟಪಡಿಸುವಂತೆ ಒತ್ತಾಯಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿದ್ದರಾಮಯ್ಯ, ಬಾದಾಮಿ ಕ್ಷೇತ್ರದಿಂದಲೇ ಚುನಾವಣೆಯಲ್ಲಿ ಸ್ಪರ್ಧಿಸುತ್ತೇನೆ. 2018ರಲ್ಲಿ ಚುನಾವಣೆಯಲ್ಲಿ ಸ್ಪರ್ಧಿಸುವುದು ಬೇಡ ಅಂದುಕೊಂಡಿದ್ದೆ. ಆದರೆ ಈಗ ಮುಂದಿನ ಚುನಾವಣೆಯಲ್ಲಿ ಸ್ಪರ್ಧಿಸಲೇ ಬೇಕು ಎಂಬ ಛಲ ಹೊಂದಿದ್ದೇನೆ. ಈ ಬಗ್ಗೆ ಯಾವುದೇ ಸಂಶಯಗಳು ಬೇಡ ಬಾದಾಮಿ ಕ್ಷೇತ್ರದಿಂದಲೇ ಮತ್ತೊಮ್ಮೆ ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದರು.


Geetha Shivarajkumar: 'ಜೆಡಿಎಸ್'ಗೆ ಮತ್ತೊಂದು ಬಿಗ್ ಶಾಕ್: ಡಿಕೆಶಿ ಭೇಟಿಯಾದ ಶಿವರಾಜ್ ಕುಮಾರ್ ಪತ್ನಿ!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3loQYe 
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.