NIA Raid: ಭಯೋತ್ಪಾದಕ ಕೃತ್ಯಕ್ಕೆ ಹಣ ಬಳಕೆ ಆರೋಪ: ದಕ್ಷಿಣ ಕನ್ನಡ ಜಿಲ್ಲೆಯ 16 ಕಡೆಗಳಲ್ಲಿ NIA ದಾಳಿ
NIA raids in Dakshina Kannada: ದಕ್ಷಿಣ ಭಾರತದ ನಿಷೇಧಿತ ಪಿಎಫ್ಐ (Popular Front of India) ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಇದಿಷ್ಟೇ ಅಲ್ಲದೆ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಕೂಡ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ.
NIA raids in Dakshina Kannada: ಬಂಟ್ವಾಳ, ಬೆಳ್ತಂಗಡಿ, ಉಪ್ಪಿನಂಗಡಿ ಮತ್ತು ವೇಣೂರು ಸೇರಿದಂತೆ ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಕನಿಷ್ಠ 16 ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಬೆಳ್ಳಂ ಬೆಳಗ್ಗೆ ದಾಳಿ ನಡೆಸಿದೆ.
ಇದನ್ನೂ ಓದಿ: Jammu Bus Accident : ಕಂದಕಕ್ಕೆ ಉರುಳಿದ ಬಸ್ : ವೈಷ್ಣೋದೇವಿ ದೇವಸ್ಥಾನಕ್ಕೆ ತೆರಳುತ್ತಿದ್ದ 10 ಜನರ ಸಾವು
ಸ್ಥಳೀಯ ಪೊಲೀಸ್ ಆಧಿಕಾರಿಗಳ ನೆರವು ಪಡೆ ರಾಷ್ಟ್ರೀಯ ತನಿಖಾ ಸಂಸ್ಥೆ ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆ ನಡೆಸುತ್ತಿದೆ. ಇನ್ನು ಭಯೋತ್ಪಾದಕ ಕೃತ್ಯಕ್ಕೆ ಗಲ್ಫ್ ರಾಷ್ಟ್ರಗಳಿಂದ ಹವಾಲಾ ಹಣ ಬಳಕೆ ಆರೋಪದ ಮೇಲೆ ಈ ದಾಳಿ ನಡೆದಿದೆ ಎಂದು ಹೇಳಲಾಗುತ್ತಿದೆ.
ದಕ್ಷಿಣ ಭಾರತದ ನಿಷೇಧಿತ ಪಿಎಫ್ಐ (Popular Front of India) ಭಯೋತ್ಪಾದನೆಗೆ ಫಂಡಿಂಗ್ ಮಾಡುತ್ತಿದೆ ಎಂದು ಹೇಳಲಾಗುತ್ತಿದೆ. ಇದಿಷ್ಟೇ ಅಲ್ಲದೆ, ಬಿಹಾರದ ಪಾಟ್ನಾದಲ್ಲಿ 2022ರ ಜುಲೈ ತಿಂಗಳಲ್ಲಿ ಪ್ರಧಾನಿ ಮೋದಿ ಕಾರ್ಯಕ್ರಮದಲ್ಲಿ ವಿಧ್ವಂಸಕ ಕೃತ್ಯ ಎಸಗಲು ಸಂಚು ರೂಪಿಸಲಾಗಿತ್ತು. ಈ ಪ್ರಕರಣ ಸಂಬಂಧ ಕೂಡ ದಾಳಿ ನಡೆಸಲಾಗಿದೆ ಎಂದು ಹೇಳಲಾಗಿದೆ. ಸದ್ಯ ದೇಶದಲ್ಲಿ ಕೋಮು ಗಲಭೆ ಸೃಷ್ಠಿಸಲು ಯತ್ನಿಸಲಾಗುತ್ತಿದೆ ಎಂಬ ಆರೋಪದಡಿ ತನಿಖೆಯ ಜಾಡು ಹಿಡಿದ ಅಧಿಕಾರಿಗಳು ಕರಾವಳಿಯಲ್ಲಿ ಬೆಳ್ಳಂ ಬೆಳಗ್ಗೆ ಕಾರ್ಯಾಚರಣೆಗೆ ಇಳಿದಿದ್ದಾರೆ.
ಇತ್ತೀಚೆಗಷ್ಟೇ ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ಮತ್ತು ಪುತ್ತೂರಿನಲ್ಲಿ ದಾಳಿ ನಡೆಸಿದ್ದ ಎನ್ ಐ ಎ ಅಧಿಕಾರಿಗಳು ಬಂಟ್ವಾಳ ನಿವಾಸಿ ಮಹಮ್ಮದ್ ಸಿನಾನ್, ಸಜೀಪ ಮೂಡದ ಸರ್ಫ್ರಾಜ್ ನವಾಜ್, ಇಕ್ಬಾಲ್, ಪುತ್ತೂರಿನ ಅಬ್ದುಲ್ ರಫೀಕ್ ಬಂಧಿಸಿದ್ದರು.
ಇದನ್ನೂ ಓದಿ: Rajasthan: ಸಚಿನ್ ಪೈಲಟ್ ಗೆ ಸಿಗಲಿದೆಯಾ ದೊಡ್ಡ ಜವಾಬ್ದಾರಿ? 4 ಗಂಟೆಗಳ ಕಾಲ ನಡೆದ ಮೀಟಿಂಗ್ ನಲ್ಲಿ ನಡೆದಿದ್ದೇನು?
ಜೊತೆಗೆ ಕೇರಳದ ಕಾಸರಗೋಡಿನ ಕುಂಜತ್ತೂರು ನಿವಾಸಿ ಅಬೀದ್ ಕೆ.ಎಂ. ಎಂಬಾತನನ್ನೂ ಬಂಧಿಸಲಾಗಿತ್ತು. ಈ ವೇಳೆ ಹಲವು ಡಿಜಿಟಲ್ ಸಾಕ್ಷ್ಯಗಳು ಮತ್ತು ಕೋಟ್ಯಂತರ ರೂಪಾಯಿ ವಹಿವಾಟು ನಡೆಸಿದ್ದ ಬಗ್ಗೆ ದಾಖಲೆಗಳೂ ಸಹ ಅಧಿಕಾರಿಗಳ ಕೈವಶವಾಗಿತ್ತು.
https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ