ಬೆಂಗಳೂರು: ಇಲ್ಲಿಯವರೆಗೂ ಒಂದು ರೀತಿಯ ರಾಜಕಾರಣ ನಡೆಯಿತು. ಇನ್ನು ಮುಂದಿನ ದಿನಗಳಲ್ಲಿ ನಿಜವಾದ ರಾಜಕಾರಣ ಆರಂಭವಾಗಲಿದೆ. ಪಕ್ಷದ ಯಾರೊಬ್ಬರೂ ನಿರುತ್ಸಾಹಿಗಳಾಗದೆ ಕೆಲಸ ಮಾಡಿ ಎಂದು ನಿಖಿಲ್ ಕುಮಾರಸ್ವಾಮಿ ಹೇಳಿದರು.


COMMERCIAL BREAK
SCROLL TO CONTINUE READING

ಪಕ್ಷದ ಯುವ ಸಂಘಟನಾ ಸಭೆಯಲ್ಲಿ ಮಾತನಾಡಿದ ನಿಖಿಲ್(Nikhil Kumaraswamy), ಜೆಡಿಎಸ್ ಪಕ್ಷದ ಬಗ್ಗೆ ಹಲವು ರೀತಿಯ ಚರ್ಚೆಗಳಾಗುತ್ತಿವೆ. ಯಾವುದೇ ಕಾರಣಕ್ಕೂ ಪಕ್ಷವನ್ನ ವಿಲೀನ ಮಾಡುವ ಸಂದರ್ಭ ಬರುವುದಿಲ್ಲ. ಯಾವ ಪಕ್ಷದ ಜೊತೆಗೂ ನಮ್ಮ ಪಕ್ಷವನ್ನ ವಿಲೀನ ಮಾಡುವುದಿಲ್ಲ. ಇದನ್ನ ನಾನು ಮತ್ತೆ ಮತ್ತೆ ಸ್ಪಷ್ಟಪಡಿಸುತ್ತಿದ್ದೇನೆ ಎಂದರು.


Laxman Savadi: ‘ಬಲಗೈ ಉಂಗುರ ರಹಸ್ಯ’ ಶ್ರೀರಾಮುಲುಗೆ ಲಕ್ಷ್ಮಣ ಸವದಿ ಏನು ಮಾಡಿದ್ರು ಗೊತ್ತಾ?


ಯಾರೂ ಉತ್ಸಾಹ ಕಳೆದುಕೊಳ್ಳಬೇಡಿ. ನಾವು ನಿಮ್ಮ ಜೊತೆ ಇದ್ದೇವೆ. ತಳಮಟ್ಟದಲ್ಲಿ ಪಕ್ಷ ಸಾಕಷ್ಟು ಸದೃಢವಾಗಿದೆ. ಗ್ರಾಮ ಪಂಚಾಯ್ತಿ ಚುನಾವಣೆಯೇ ಇದಕ್ಕೆ ಸಾಕ್ಷಿ ಎಂದು ನಿಖಿಲ್ ಹೇಳಿದರು.


B.S.Yediyurappa,: ಸಿಎಂ ಬಿಎಸ್ ವೈಗೆ ಶಾಸಕರ ದೂರು..! ಯಾರ ಮೇಲೆ? ಯಾಕೆ?


ಮುಂಬರುವ ಚುನಾವಣೆಗಳಲ್ಲಿ ಯುವಕರಿಗೆ ಆದ್ಯತೆ ನೀಡಲಾಗುವುದು ಎಂದ ಅವರು, ಮತ್ತೊಮ್ಮೆ ಕುಮಾರಣ್ಣ ಸಿಎಂ ಆಗಬೇಕು. ಈ ನಿಟ್ಟಿನಲ್ಲಿ ಎಲ್ಲರೂ‌ ಶ್ರಮವಹಿಸಿ ‌ಪಕ್ಷ ಸಂಘಟಿಸಬೇಕಿದೆ. ಎಲ್ಲರನ್ನೂ ವಿಶ್ವಾಸಕ್ಕೆ ತೆಗೆದುಕೊಂಡೇ ಕೆಲಸ ಮಾಡುತ್ತೇನೆ ಎಂದು ಹೇಳಿದರು.


KPTCL ‌ನಲ್ಲಿ 200 ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ..!


ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಆಪ್ ಡೌನ್ ಲೋಡ್ ಮಾಡಿ


Android Link - https://bit.ly/3hDyh4G


iOS Link - https://apple.co/3loQYe


ನಮ್ಮ ಸೋಶಿಯಲ್ ಮೀಡಿಯಾ ಪುಟಕ್ಕೆ ಸಬ್ ಸ್ಕ್ರೈಬ್ ಮಾಡಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.