ಬೆಂಗಳೂರು: ನಟ ನಿಖಿಲ್ ಕುಮಾರಸ್ವಾಮಿ ಯಾವುದೇ ಕಾರಣಕ್ಕೂ ರಾಜಕೀಯ ಪ್ರವೇಶ ಮಾಡುವುದಿಲ್ಲ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.


COMMERCIAL BREAK
SCROLL TO CONTINUE READING

ನಗರದ ಜೆ.ಪಿ. ಭವನದಲ್ಲಿಂದು ತಮ್ಮ 59ನೇ ಹುಟ್ಟು ಹಬ್ಬದ ಆಚರಣೆಯ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಕುಮಾರಸ್ವಾಮಿ, ನಿಖಿಲ್ ಯಾವುದೇ ಕಾರಣಕ್ಕೂ ರಾಜಕೀಯಕ್ಕೆ ಬರುವುದಿಲ್ಲ, ಆದರೆ ಪಕ್ಷದ ಪ್ರಚಾರದಲ್ಲಿ ಪಾಲ್ಗೊಳ್ಳುತ್ತಾನೆ ಎಂದು ಹೇಳುವ ಮೂಲಕ ನಿಖಿಲ್ ರಾಜಕೀಯ ಪ್ರವೇಶದ ಬಗ್ಗೆ ಎದ್ದಿದ್ದ ಊಹಾಪೋಹಗಳನ್ನು ತಳ್ಳಿಹಾಕಿದ್ದಾರೆ.


ಮುಂದುವರೆದು ಮಾತನಾಡಿದ ಅವರು ಪಕ್ಷದ ಕಾರ್ಯಕರ್ತರು ಮತ್ತು ಅಭಿಮಾನಿಗಳೇ ನಮ್ಮ ಬಲ. ಮುಂದಿನ ಚುನಾವಣೆಯಲ್ಲಿ ಪಕ್ಷವನ್ನು ಅಧಿಕಾರಕ್ಕೆ ತರುವ ವರೆಗೂ ವಿರಮಿಸುವುದಿಲ್ಲ ಎಂದು ಹೇಳಿದರು.