HD Kumaraswamy : 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡಲ್ಲ'

ನಿಖಿಲ್ ಕುಮಾರಸ್ವಾಮಿ 2023ರ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ ಅಂತ ಯಾರು ಹೇಳಿದ್ರು? ಅವರು ಆ ಚುನಾವಣೆಯಲ್ಲಿ ನಿಲ್ತಿಲ್ಲ. 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಹೋರಾಟ ಮಾಡ್ತಿದ್ದಾರೆ.

Written by - Channabasava A Kashinakunti | Last Updated : Jul 26, 2022, 02:15 PM IST
  • ವಿಧಾನಸಭೆಗೆ ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ
  • ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
  • 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಹೋರಾಟ ಮಾಡ್ತಿದ್ದಾರೆ
HD Kumaraswamy : 'ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡಲ್ಲ' title=

ಮಂಡ್ಯ : ವಿಧಾನಸಭೆಗೆ ನಿಖಿಲ್ ಕುಮಾರಸ್ವಾಮಿ ಚುನಾವಣೆಯಲ್ಲಿ ಸ್ಪರ್ಧೆ ಮಾಡಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ. 

ಜಿಲ್ಲೆಯ ಮದ್ದೂರಿನಲ್ಲಿ ಈ ಬಗ್ಗೆ ಮಾತನಾಡಿದ ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ 2023ರ ಚುನಾವಣೆಯಲ್ಲಿ ಸ್ಪರ್ಧೆ ಮಾಡ್ತಾರೆ ಅಂತ ಯಾರು ಹೇಳಿದ್ರು? ಅವರು ಆ ಚುನಾವಣೆಯಲ್ಲಿ ನಿಲ್ತಿಲ್ಲ. 20 ರಿಂದ 30 ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಲು ನಿಖಿಲ್ ಹೋರಾಟ ಮಾಡ್ತಿದ್ದಾರೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ನಿಖಿಲ್ ಸ್ಪರ್ಧೆ ಮಾಡೋದಿಲ್ಲ ಎಂದು ಸ್ಪಷ್ಟ ಪಡಿಸಿದ್ದಾರೆ. 

ಇದನ್ನೂ ಓದಿ : KS Eshwarappa : ಬಿ ರಿಪೋರ್ಟ್ ಹೇಳಿಕೆ ವಿಚಾರ : ಡಿಕೆ ಶಿವಕುಮಾರ್​ಗೆ ಸವಾಲೆಸೆದ ಈಶ್ವರಪ್ಪ!

ಮಂಡ್ಯದ ಟ್ರಯಲ್ ಬ್ಲಾಸ್ಟ್ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಕೆ‌.ಆರ್.ಎಸ್. ಭಾಗದಲ್ಲಿ ಟ್ರಯಲ್ ಬ್ಲಾಸ್ಟ್ ಮಾಡಬೇಕಾ?  ಬೇಡ್ವಾ ಎಂಬ ಬಗ್ಗೆ ನನಗೆ ಗೊತ್ತಿಲ್ಲ. ಟ್ರಯಲ್ ಬ್ಲಾಸ್ಟ್ ನಡೆಸೋದನ್ನ ಸರ್ಕಾರ ನಿಲ್ಲಿಸಿದೆ. ಅಲ್ಲಿ ಯಾವ ರೀತಿ ಪರಿಸ್ಥಿತಿ ಇದೆ ಎಂಬುದು ನನಗೆ ಗೊತ್ತಿಲ್ಲ. ಈ ಬಗ್ಗೆ ಸರ್ಕಾರ ತೀರ್ಮಾನ ತೆಗೆದುಕೊಳ್ಳಲಿದೆ. ಆ ಭಾಗದಲ್ಲಿ ರೈತರು ಆತಂಕದಲ್ಲಿ ಪ್ರತಿಭಟನೆ ಮಾಡಿದ್ದಾರೆ. ಪರಿಸ್ಥಿತಿ, ವಾಸ್ತವಾಂಶ ತಿಳಿದುಕೊಂಡು ಸರ್ಕಾರ ಟ್ರಯಲ್ ಬ್ಲಾಸ್ಟ್ ಬಗ್ಗೆ ತೀರ್ಮಾನ ಮಾಡಬೇಕು ಎಂದು ಹೇಳಿದರು. 

ರಾಜ್ಯದಲ್ಲಿ ಒಕ್ಕಲಿಗರ ಸಿಎಂ ವಿಚಾರವಾಗಿ ಮಾತನಾಡಿದ ಕುಮಾರಸ್ವಾಮಿ, ಒಕ್ಕಲಿಗರ ನಾಯಕ ಯಾರು ಎಂದು ಜನ ತೀರ್ಮಾನ ಮಾಡ್ತಾರೆ ಎಂದು ಹೇಳಿದರು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

Trending News