ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ: 9 ಮಂದಿ ದುರ್ಮರಣ!
ಬಾಡ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಅಪಘಾತಕ್ಕೀಡಾದ ಕ್ರೂಸರ್ ನಲ್ಲಿ 20ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. ಇವರಲ್ಲಿ 9 ಜನರು ಮೃತಪಟ್ಟಿದ್ದಾರೆ.
ಧಾರವಾಡ: ಮರಕ್ಕೆ ಕ್ರೂಸರ್ ಡಿಕ್ಕಿಯಾಗಿ 9 ಜನರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ಬಾಡ ಗ್ರಾಮದ ಬಳಿ ನಡೆದಿದೆ. ಘಟನೆಯಲ್ಲಿ 9ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ತಿಳಿದು ಬಂದಿದೆ. ನಿಶ್ಚಿತಾರ್ಥ ಮುಗಿಸಿ ಬರುವಾಗ ಭೀಕರ ಅಪಘಾತ ಸಂಭವಿಸಿ ಈ ದುರ್ಘಟನೆ ನಡೆದಿದೆ.
ಧಾರವಾಡ ತಾಲೂಕಿನ ಬೆನಕಟ್ಟಿ ಗ್ರಾಮದ ಅನನ್ಯಾ(14), ಹರೀಶ್(13), ಶಿಲ್ಪಾ(34), ನೀಲವ್ವ(60), ಮಧುಶ್ರೀ(20) ಮಹೇಶ್ವರಯ್ಯ(11), ಶಂಭುಲಿಂಗಯ್ಯ(35) ಮೃತಪಟ್ಟವರು. ಕ್ರೂಸರ್ ಚಾಲಕನ ಅಜಾಗರೂಕತೆಯಿಂದಲೇ ಈ ಅಪಘಾತ ಸಂಭವಿಸಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ: Pramod Muthalik : 'ಜ್ಞಾನವಾಪಿ ಮಸೀದಿ ಅಲ್ಲ, ಅದು ದೇವಸ್ಥಾನ'
ಬಾಡ ಗ್ರಾಮದ ಬಳಿ ಅಪಘಾತ ಸಂಭವಿಸಿದ್ದು, ಅಪಘಾತಕ್ಕೀಡಾದ ಕ್ರೂಸರ್ ನಲ್ಲಿ 20ಕ್ಕೂ ಹೆಚ್ಚು ಜನ ಪ್ರಯಾಣಿಸುತ್ತಿದ್ದರು. ಇವರಲ್ಲಿ 9 ಜನರು ಮೃತಪಟ್ಟಿದ್ದಾರೆ. ಗಾಯಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಮದುವೆ ಹಿಂದಿನ ದಿನ ನಿಶ್ಚಿತಾರ್ಥ ಮುಗಿಸಿ ಮನ್ಸೂರು ಗ್ರಾಮದಿಂದ ಬೆನಕಟ್ಟಿ ಗ್ರಾಮಕ್ಕೆ ತೆರಳುತ್ತಿದ್ದಾಗ ಚಾಲಕನ ನಿಯಂತ್ರಣ ತಪ್ಪಿ ಮರಕ್ಕೆ ವಾಹನ ಡಿಕ್ಕಿಯಾಗಿದೆ.
ಸ್ಥಳಕ್ಕೆ ಧಾರವಾಡ ಪೊಲೀಸ್ ವರಿಷ್ಠಾಧಿಕಾರಿ ಕೃಷ್ಣಕಾಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಧಾರವಾಡ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದೆ. ರಾತ್ರಿ 1.30ರಿಂದ 2 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ ಕೃಷ್ಣಕಾಂತ್ ಹೇಳಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಹೆಚ್ಚಿನ ತನಿಖೆ ಕೈಗೊಂಡಿದ್ದಾರೆ.
ಇದನ್ನೂ ಓದಿ: 'ಗಂಗಾವತಿ-ದರೋಜಿ ರೈಲ್ವೇ ಮಾರ್ಗದ ಸರ್ವೇ ಕಾರ್ಯ ಶೀಘ್ರ ಪ್ರಾರಂಭ'
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.