ಕೋಲಾರ: ಪೋಷಕರು ಬುದ್ದಿವಾದ ಹೇಳಿದ್ದಕ್ಕೆ ಮನನೊಂದು ಬಾಲಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ಮುಷ್ಟೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಬಗ್ಗೆ ನಂಗಲಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 


COMMERCIAL BREAK
SCROLL TO CONTINUE READING

ಪೋಷಕರು ಬುದ್ದಿವಾದ ಹೇಳಿದ್ದಕ್ಕೆ 9ನೇ ತರಗತಿ ವಿದ್ಯಾರ್ಥಿ ಉದಯ್ ಕುಮಾರ್ ಸೋಮವಾರ(ಜನವರಿ 02)  ವಿಷ ಸೇವಿಸಿದ್ದ. ಕೂಡಲೇ ಉದಯ್ ಕುಮಾರ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಉದಯ್ ಗುರುವಾರ (ಜನವರಿ 05) ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾನೆ.


ಇದನ್ನೂ ಓದಿ- 2D ಮೀಸಲಾತಿ ತಿರಸ್ಕಾರ: ಸಿಎಂ ಬೊಮ್ಮಾಯಿಗೆ 24 ಗಂಟೆಗಳ ಅಂತಿಮ ಗಡುವು ನೀಡಿದ ಯತ್ನಾಳ್
 
ಮೃತ ಉದಯ್ ಕುಮಾರ್ ಕೋಲಾರ ಜಿಲ್ಲೆಯ ಮುಳಬಾಗಲು ತಾಲ್ಲೂಕಿನ ತಾತಿಕಲ್ ಗ್ರಾಮದ ಸರ್ಕಾರಿ ಆದರ್ಶ ಶಾಲೆಯಲ್ಲಿ ವಿದ್ಯಾಭ್ಯಾಸ ಮಾಡುತ್ತಿದ್ದನು. ಆಟೋಟಗಳ ಬಗ್ಗೆ ಗಮನ ಕಡಿಮೆ ಮಾಡಿ, ವಿದ್ಯಾಭ್ಯಾಸದ ಕಡೆ ಸರಿಯಾಗಿ ಗಮನಹರಿಸುವಂತೆ ಬುದ್ದಿವಾದ ಹೇಳಿದ್ದಕ್ಕೆ ಬಾಲಕ ಆತ್ಮಹತ್ಯೆಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.


ಇದನ್ನೂ ಓದಿ- ಅಯ್ಯಪ್ಪಸ್ವಾಮಿ ಮಾಲಾಧಾರಿಗಳಿಗೆ ಮುಸ್ಲಿಮರಿಂದ ಅನ್ನಪ್ರಸಾದ ವ್ಯವಸ್ಥೆ


ಇತ್ತೀಚಿನ ದಿನಗಳಲ್ಲಿ ಮಕ್ಕಳ ಆತ್ಮಹತ್ಯೆ ಪ್ರಕರಣಗಳು ಹೆಚ್ಚಾಗಿವೆ. ಮಕ್ಕಳು ಈ ರೀತಿ ಮಾಡಿಕೊಳ್ಳುವುದಕ್ಕೆ ಅನೇಕ ಬಾರಿ ಪೋಷಕರೂ ಸಹ ಕಾರಣರಾಗಿರುತ್ತಾರೆ. ಅತಿಯಾದ ಕಾಳಜಿ, ಅತಿಯಾದ ಬೇಜವಾಬ್ದಾರಿ ಮಕ್ಕಳನ್ನು ಕೈತಪ್ಪಿಹೋಗುವಂತೆ ಮಾಡುತ್ತವೆ. ಅಷ್ಟೇ ಅಲ್ಲ, ಅತಿಯಾದ ಬಿಗಿ ಹಿಡಿತ ಅಥವಾ ಅತಿಯಾದ ಸಡಿಲತೆ ಕೂಡ ಮಕ್ಕಳನ್ನು ಕೈ ಜಾರುವಂತೆ ಮಾಡುತ್ತದೆ. 


ಮಕ್ಕಳಿಗೆ ಕಿವಿ ಮಾತು:
ಪೋಷಕರು ಅಂದ ಮೇಲೆ ತಮ್ಮ ಮಕ್ಕಳು ತಪ್ಪು ಮಾಡಿದಾಗ ಬೈಯುವುದು ಸಾಲದಕ್ಕೆ ಒಂದು ಹೆಜ್ಜೆ ಮುಂದೆ ಹೋಗಿ ಎರಡು ಏಟು ಹೊಡೆಯುತ್ತಾರೆ. ನಮ್ಮನ್ನು ಹೊತ್ತು ಹೆತ್ತ ಪೋಷಕರಿಗೆ ಅಷ್ಟು ಅಧಿಕಾರ ಇಲ್ಲವಾದರೆ ಹೇಗೆ ಅಲ್ವಾ? ಆದ್ರೆ, ಪಾಲಕರು ಬೈದ್ರು, ಹೊಡೆದ್ರು ಅಂತ ಮಕ್ಕಳು ಈ ರೀತಿ ದುಡುಕಿನ ನಿರ್ಧಾರ ಕೈಗೊಳ್ಳುವುದು ಸರಿಯಲ್ಲ. ಬದಲಿಗೆ ಪೋಷಕರು ನಮ್ಮನ್ನು ಬೈಯಲು ಕಾರಣವೇನು, ನಮ್ಮ ತಪ್ಪೇನು ಎಂಬ ಬಗ್ಗೆ ಒಂದೇ ಒಂದು ಕ್ಷಣವಾದರೂ ಯೋಚಿಸಿ.


https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.