ಸಿಡ್ನಿ: ಭಾರತದಿಂದ ತಲೆಮರೆಸಿಕೊಂಡು ಈಕ್ವೆಡಾರ್‌ನಲ್ಲಿ ಆಶ್ರಯ ಪಡೆದಿರುವುದಾಗಿ ನಂಬಲಾಗಿರುವ ಸ್ವಯಂಘೋಷಿತ ದೇವಮಾನವ ನಿತ್ಯಾನಂದ, ಇದೀಗ ತನ್ನ ದೇಶ ಕೈಲಾಸಕ್ಕೆ ಬರಲು ವೀಸಾ ಅರ್ಜಿ ಸಲ್ಲಿಸುವಂತೆ ತನ್ನ ಭಕ್ತರಲ್ಲಿ ಮನವಿ ಮಾಡಿದ್ದಾನೆ.


COMMERCIAL BREAK
SCROLL TO CONTINUE READING

ಕೈಲಾಸಕ್ಕೆ ಬರಲು ಇಚ್ಛಿಸುವ ಭಕ್ತರು ವೀಸಾ ಅರ್ಜಿಗಳನ್ನು ಸಲ್ಲಿಸುವಂತೆ ಮನವಿ ಮಾಡಿರುವ ನಿತ್ಯಾನಂದ(Nityananda), ಈ ಪ್ರಕ್ರಿಯೆಯ ಹಂತಗಳನ್ನೂ ವಿವರಿಸಿದ್ದಾನೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ನಿತ್ಯಾನಂದ, ಕೈಲಾಸಕ್ಕೆ ಬಂದು ತಲುಪುವ ಬಗೆಯನ್ನೂ ಕೂಡ ವಿವರಿಸಿದ್ದಾನೆ. ಕೈಲಾಸದ ಮಾರ್ಗನಕ್ಷೆ ಬಿಡುಗಡೆ ಮಾಡಿರುವ ನಿತ್ಯಾನಂದ ಸೀಮಿತ ವೀಸಾಗಳನ್ನು ಮಾತ್ರ ಸ್ವೀಕರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾನೆ.


'ಜನವರಿ ಮೊದಲ ವಾರವೇ ಸಂಪುಟ ವಿಸ್ತರಣೆ'


ಕೈಲಾಸಕ್ಕೆ ಬರಲು ಇಚ್ಛಿಸುವ ಭಕ್ತಾದಿಗಳು ಆಸ್ಟ್ರೇಲಿಯಾದ ಸಿಡ್ನಿಗೆ ಬಂದು, ಅಲ್ಲಿಂದ ಚಾರ್ಟರ್ಡ್ ವಿಮಾನದಲ್ಲಿ ಕೈಲಾಸಕ್ಕೆ ಬರುವ ಬಗೆಯನ್ನು ಈ ವಿಡಿಯೋದಲ್ಲಿ ವಿವರಿಸಿದ್ದಾನೆ. ಈಕ್ವೆಡಾರ್‌ನಲ್ಲಿ ಖಾಸಗಿ ದ್ವೀಪ ಖರೀದಿಸಿರುವ ನಿತ್ಯಾನಂದ, ಕೈಲಾಸ ಎಂಬ ಹೊಸ ದೇಶ ನಿರ್ಮಾಣ ಮಾಡಿದ್ದಾನೆ. ಅಲ್ಲದೇ ತನ್ನ ದೇಶಕ್ಕೆ ಮಾನ್ಯತೆ ನೀಡುವಂತೆ ವಿಶ್ವಸಂಸ್ಥೆಗೂ ಪತ್ರ ಬರೆದಿದ್ದಾನೆ ಎಂಬ ವರದಿಗಳು ಬಂದಿದ್ದವು. ಆದರೆ ನಿತ್ಯಾನಂದ ಯಾವುದೇ ದ್ವೀಪ ಖರೀದಿ ಮಾಡಿಲ್ಲ ಎಂದು ಈಗಾಗಲೇ ಸ್ಪಷ್ಟಪಡಿಸಿರುವ ಈಕ್ವೆಡಾರ್ ಸರ್ಕಾರ, ಆತ ಈಕ್ವೆಡಾರ್‌ನಲ್ಲಿ ಇಲ್ಲ ಎಂದು ಹೇಳಿದೆ.


ಮೂರು ತಿಂಗಳಲ್ಲಿ ಶಿಕ್ಷಕರ ಬೇಡಿಕೆಗಳ ಈಡೇರಿಕೆಗೆ ಪ್ರಾಮಾಣಿಕ ಪ್ರಯತ್ನ - ಸಚಿವ ಸಿ.ಸಿ.ಪಾಟೀಲ