ಬೆಂಗಳೂರು: ತಮಿಳುನಾಡಿನ ಕೆಲ ಭಾಗಗಳಲ್ಲಿ 'ನಿವಾರ್​' ಚಂಡಮಾರುತ(Nivar Cyclone) ಅಪ್ಪಳಿಸಲಿದ್ದು, ನವೆಂಬರ್‌ 25, ಹಾಗೂ 26 ರಂದು ಎರಡು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಜನತೆಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.


COMMERCIAL BREAK
SCROLL TO CONTINUE READING

ಬಿಎಸ್ ವೈ ಸರ್ಕಾರದಿಂದ ಪಡಿತರ ಚೀಟಿದಾರರಿಗೊಂದು 'ಗುಡ್ ನ್ಯೂಸ್'


ಬಂಗಾಳಕೊಲ್ಲಿಯ ನೈಋತ್ಯ ಭಾಗದಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಈ ಹಿನ್ನೆಲೆ ಕರ್ನಾಟಕದಲ್ಲಿ ಭಾರಿ ಮಳೆಯಾಗಲಿದೆ. ಬೆಂಗಳೂರು, ಬೆಂ.ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಕೋಲಾರ, ಮಂಡ್ಯ, ರಾಮನಗರ, ಮಂಡ್ಯದಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.


ರಾಜ್ಯಸಭೆ ಬೈಎಲೆಕ್ಷನ್ ನಲ್ಲಿ ಅವಿರೋಧ ಆಯ್ಕೆಯಾದ ಕೆ.ನಾರಾಯಣ್!​ 


ನವೆಂಬರ್ 25 ರಂದು ತಮಿಳುನಾಡಿನ ಕರಾವಳಿ ಭಾಗದಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ. ಕರಾವಳಿಯ ಕೆಲವು ಭಾಗಗಳಿಗೆ ಬುಧವಾರ ಮುಂಜಾನೆ 6 ಗಂಟೆ ಸುಮಾರಿಗೆ ಚಂಡ ಮಾರುತ ಅಬ್ಬರಿಸಲಿದೆ.


'ಡಿಸಿಎಂ ಗೋವಿಂದ ಕಾರಜೋಳ ಅವರು ಸಿಎಂ ಆದ್ರೆ ನಮ್ಮದೇನೂ ಅಭ್ಯಂತರವಿಲ್ಲ'