ರಾಜ್ಯ ನಾಯಕರ ಜೊತೆ ಕೈ ಹೈಕಮಾಂಡ್ ಸಭೆ ಮುಕ್ತಾಯ : ಕಗ್ಗಂಟಾಗಿ ಉಳಿದ 15 ವಿಧಾನಸಭಾ ಕ್ಷೇತ್ರ
Congress Ticket Issue : 15 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಈ ಕ್ಷೇತ್ರಗಳ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಒಮ್ಮತ ಮೂಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಉಸ್ತುವಾರಿಯನ್ನ ಹೊರತು ಪಡಿಸಿ ಪ್ರತ್ಯೆಕ ಸಭೆ ನಡೆಸಲಾಗಿದೆ.
ಬೆಂಗಳೂರು : Karnataka Election 2023 : ರಾಜ್ಯ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟವಾದರೂ ಅಭ್ಯರ್ಥಿಗಳ ಆಯ್ಕೆ ಮಾತ್ರ ಇನ್ನೂ ಫೈನಲ್ ಆಗಿಲ್ಲ. ಎಲ್ಲಾ ಪಕ್ಷಗಳು ಸೂಕ್ತ ಅಭ್ಯರ್ಥಿಗಳ ಹುಡುಕಾಟದಲ್ಲೇ ಇವೆ. ಅಭ್ಯರ್ಥಿಗಳ ಆಯ್ಕೆ ವಿಚಾರವಾಗಿ ಕಾಂಗ್ರೆಸ್ ಸಭೆ ನಡೆಸಿದೆ. ಆದರೆ, ಸಭೆಯ ನಂತರ ಕೂಡಾ 15 ಕ್ಷೇತ್ರಗಳ ಅಭ್ಯರ್ಥಿಗಳನ್ನು ಇನ್ನು ಕೂಡಾ ಫೈನಲ್ ಮಾಡಲು ಸಾಧ್ಯವಾಗಿಲ್ಲ.
ಕಗ್ಗಂಟಾಗಿ ಉಳಿದ 15 ಕ್ಷೇತ್ರ :
ಕೈ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಪಟ್ಟಂತೆ ಮಲ್ಲಿಕಾರ್ಜುನ್ ಖರ್ಗೆ ನಿವಾಸದಲ್ಲಿ ಹೈಕಮಾಂಡ್ ಸಭೆ ನಡೆಸಿದೆ. ಆದರೆ, ಈ ಸಭೆಯಲ್ಲಿ ಕೂಡಾ 15 ವಿಧಾನಸಭಾ ಕ್ಷೇತ್ರಗಳ ಅಭ್ಯರ್ಥಿ ಆಯ್ಕೆ ಇನ್ನೂ ಕಗ್ಗಂಟಾಗಿಯೇ ಉಳಿದಿದೆ. ಈ ಕ್ಷೇತ್ರಗಳ ವಿಚಾರವಾಗಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನಡುವೆ ಒಮ್ಮತ ಮೂಡಿಲ್ಲ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ನಾಯಕರು ಉಸ್ತುವಾರಿಯನ್ನ ಹೊರತು ಪಡಿಸಿ ಪ್ರತ್ಯೆಕ ಸಭೆ ನಡೆಸಲಾಗಿದೆ.
ಇದನ್ನೂ ಓದಿ : ಚುನಾವಣಾ ಕರ್ತವ್ಯ ಲೋಪ; ಹೆಸ್ಕಾಂ ಅಭಿಯಂತರರನ್ನು ಅಮಾನತ್ತುಗೊಳಿಸಿದ ಜಿಲ್ಲಾಧಿಕಾರಿ
ನಿರ್ಧಾರ ಮಾಡಲಿದೆ ಹೈಕಮಾಂಡ್ :
ರಾಹುಲ್ ಗಾಂಧಿ ಮತ್ತು ಮಲ್ಲಿಕಾರ್ಜುನ್ ಖರ್ಗೆ ನೇತೃತ್ವದಲ್ಲಿ ಪ್ರತ್ಯೆಕ ಸಭೆ ನಡೆಸಿದೆ. ರಾಜ್ಯ ನಾಯಕರ ಮಧ್ಯೆ ಒಮ್ಮತ ಮೂಡದ ಹಿನ್ನಲೆಯಲ್ಲಿ ಇದೀಗ ಈ ಕ್ಷೇತ್ರಗಳ ಬಗ್ಗೆ ಹೈಮಾಂಡ್ ನಾಯಕರೇ ತೀರ್ಮಾನ ಕೈಗೊಳ್ಳಲಿದ್ದಾರೆ. ಕಗ್ಗಂಟಾಗಿರೋ 15 ಕ್ಷೇತ್ರದ ಅಭ್ಯರ್ಥಿಗಳ ನಿರ್ಧಾರವನ್ನ ರಾಹುಲ್ ಮತ್ತು ಖರ್ಗೆ ತೆಗೆದುಕೊಳ್ಳಲಿದ್ದಾರೆ ಎನ್ನಲಾಗಿದೆ.
ಕೋಲಾರ ಟಿಕೆಟ್ ಬಿಕ್ಕಟ್ಟು :
ಇನ್ನು ಕೋಲಾರದಿಂದಲೇ ಟಿಕೆಟ್ ನೀಡುವಂತೆ ಸಿದ್ದರಾಮಯ್ಯ ಪಟ್ಟು ಹಿಡಿದಿದ್ದಾರೆ ಎನ್ನಲಾಗಿದೆ. ಆದರೆ ಸಿದ್ದರಾಮಯ್ಯಗೆ ಕೋಲಾರ ಟಿಕೆಟ್ ನೀಡುವುದಕ್ಕೆ ಹೈಕಮಾಂಡ್ ಅಸಮ್ಮತಿ ಸೂಚಿಸಿದೆ ಎನ್ನಲಾಗಿದೆ. ಈ ಹಿನ್ನೆಲೆಯಲ್ಲಿ ಎರಡನೇ ಕ್ಷೇತ್ರದ ಬಗ್ಗೆ ನಾಯಕರ ನಡುವೆ ಚರ್ಚೆ ನಡೆದಿದೆ.
ಈ ಬಗ್ಗೆ ಸಿದ್ದರಾಮಯ್ಯ, ರಾಹುಲ್‌ಗಾಂಧಿ ಮತ್ತು ಖರ್ಗೆ ಪ್ರತ್ಯೆಕ ಸಭೆ ನಡೆಸಿದ್ದಾರೆ. ಆದರೂ ಕೋಲಾರ ಟಿಕೆಟ್ ಬಗ್ಗೆ ಇನ್ನೂ ಅಂತಿಮ ನಿರ್ಧಾರ ತೆಗೆದುಕೊಳ್ಳಲಾಗಿಲ್ಲ.
ಇದನ್ನೂ ಓದಿ : ಕರ್ನಾಟಕದ ಹೆಮ್ಮೆಯ ನಂದಿನಿ ಸಂಸ್ಥೆ ಮುಳುಗಿಸಲು ಸರ್ಕಾರ ಪ್ರಯತ್ನಿಸುತ್ತಿದೆ: ಡಿ.ಕೆ.ಸುರೇಶ್
ಅಂತಿಮವಾಗಿ ರಾಹುಲ್ ಗಾಂಧಿ ಮತ್ತು ಖರ್ಗೆ ಕೋಲಾರ ಭವಿಷ್ಯ ನಿರ್ಧರಾ ಮಾಡಲಿದ್ದಾರೆ. ಸಿದ್ದರಾಮಯ್ಯ ಸಭೆಯಿಂದ ಹೊರ ಬಂದಿದ್ದಾರೆ. ಸಭೆಯಿಂದ ಹೊರ ಬಂದ ಸಿದ್ದರಾಮಯ್ಯ ಮಾಧ್ಯಮಗಳಿಗೂ ಪ್ರತಿಕ್ರಿಯೆ ನೀಡಲಿಲ್ಲ.
https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.