ಬೆಂಗಳೂರು: ರಾಜ್ಯ ರಾಜಧಾನಿಯಲ್ಲಿ ಮಂಕಿ ಪಾಕ್ಸ್ ಪ್ರಕರಣ ವರದಿಯಾಗಿಲ್ಲ. ಆದರೂ ರೋಗ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ತಿಳಿಸಿದರು.
ನಗರದಲ್ಲಿಂದು ಬಿಬಿಎಂಪಿ ಕೇಂದ್ರ ಕಚೇರಿಯಲ್ಲಿ ಸುದ್ದಿಗೋಷ್ಠಿಯನ್ನ ಉದ್ದೇಶಿಸಿ ಮಾತನಾಡಿದ ತುಷಾರ್ ಗಿರಿನಾಥ್, ನಗರದಲ್ಲಿ ಮಂಕಿ ಪಾಕ್ಸ್ ಸಂಬಂಧಪಟ್ಟಂತೆ ಯಾವುದೇ ಪ್ರಕರಣ ಇದುವರೆಗೂ ದಾಖಲಾಗಿಲ್ಲ. ಪ್ರಕರಣ ದಾಖಲಾದರೆ ಚಿಕಿತ್ಸೆ ಕುರಿತಂತೆ ಆಸ್ಪತ್ರೆಗಳಲ್ಲಿ ವ್ಯವಸ್ಥೆ ಮಾಡಲಾಗಿದೆ. ರಾಜ್ಯ ಸರ್ಕಾರ ಮತ್ತು ಆರೋಗ್ಯ ಇಲಾಖೆ ಸೂಚನೆ ಪ್ರಕಾರವಾಗಿ ಕ್ರಮ ಕೈಗೊಳ್ಳುತ್ತೇವೆ ಎಂದರು.
ಇದನ್ನೂ ಓದಿ: Udupi : ಚಾಕಲೇಟ್ ನುಂಗಿ ಉಸಿರುಗಟ್ಟಿ 6 ವರ್ಷದ ಬಾಲಕಿ ಸಾವು!
ವಾರ್ಡ್ ಗಳ ಬಜೆಟ್ ಅಯವ್ಯಯ ಪರಿಷ್ಕರಣೆ;
ಚುನಾವಣೆ ಸಂಬಂಧ 1993ರಿಂದ ಈಚೆಗೆ ಗೆದ್ದ ಅಭ್ಯರ್ಥಿಗಳ ಹಾಗೂ ಮೀಸಲಾತಿಯನ್ನು ಸರ್ಕಾರಕ್ಕೆ ನೀಡಲಾಗಿದೆ. ವಾರ್ಡ್ ಮರುವಿಂಡಗಣೆ ಈಗಾಗಲೇ ಪೂರ್ಣಗೊಂಡಿದ್ದು, ವಾರ್ಡ್ ಗಳಿಗೆ ಬಜೆಟ್ ಅಯವ್ಯಯ ಪರಿಷ್ಕರಣೆ ಮಾಡಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಪ್ರಸ್ತಾವನೆ;
ಬೆಂಗಳೂರಿನಲ್ಲಿ ಇಷ್ಟು ದಿನ ಇದ್ದ 198 ವಾರ್ಡ್ ಗಳಿಂದ ಇದೀಗ ವಿಂಗಡಣೆಗೊಂಡು 243 ವಾರ್ಡ್ ಗಳಾಗಿ ನಗರ ರೂಪುಗೊಳ್ಳುತ್ತಿದೆ.ಪ್ರತಿ ವಾರ್ಡ್ ಗೆ ಎರಡೂವರೆ ಕೋಟಿ ಅನುದಾನ ಹಂಚಿಕೆ ಮಾಡಲಾಗಿದೆ.ವಾರ್ಡ್ ಕಚೇರಿ ಆರಂಭಿಸುವ ನಿಟ್ಟಿನಲ್ಲಿ ಸೂಚಿಸಿದ್ದು, ವಾರ್ಡ್ ನಕಾಶೆ ಆಧಾರದ ಮೇಲೆ ವಾರ್ಡದ ಕಚೇರಿ ನಿರ್ಮಿಸಲು ಕ್ರಮ ಕೈಗೊಳ್ಳಲಾಗುವುದು. ವಾರ್ಡ್ ಗಳ ಸಂಖ್ಯೆ ಏರಿಕೆ ವಿಚಾರ 400 ಹೆಚ್ಚುವರಿ ಸಿಬ್ಬಂದಿ ನೇಮಕಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಲಾಗಿದೆ ಎಂದು ವಿವರಿಸಿದರು.
ಅನಧಿಕೃತ ಫ್ಲೆಕ್ಸ್ ಹಾಕುವವರ ವಿರುದ್ದ ಕಾನೂನು ಕ್ರಮ;
ನಗರವ್ಯಾಪ್ತಿ ಅನಧಿಕೃತ ಫ್ಲೆಕ್ಸ್ ರಾರಾಜಿಸುತ್ತುವೆ. ಈ ವಿಚಾರ ಕುರಿತು ಪ್ರತಿಕ್ರಿಯೆ ನೀಡಿದ ತುಷಾರ್ ಗಿರಿನಾಥ್ ಪ್ರತಿ ದಿನ ಸಾವಿರಾರು ಫ್ಲೆಕ್ಸ್ ಗಳನ್ನು ತೆರವು ಮಾಡಲಾಗುತ್ತಿದೆ. ಇನ್ನೂ, ತಪ್ಪು ಮಾಡುವವರ ವಿರುದ್ಧ ಕಾನೂನಿನ ಪ್ರಕಾರ ಕ್ರಮ ಕೈಗೊಳ್ಳಲು ತೀರ್ಮಾನ ಮಾಡಲಾಗಿದೆ ಇದಕ್ಕೆ ಆಯಾ ಪಾಲಿಕೆ ಅಧಿಕಾರಿಗಳು ಮುಂದಾಗಲಿದ್ದಾರೆ ಎಂದರು.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.